LIVE TV LocalCrimeNationalInternationalPoliticsBusinessFinancialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮುಸ್ಲಿಂ ಮತದಾರರ ಹೆಸರು ಅಳಿಸುವ ಯತ್ನ: ತನಿಖೆಗೆ ಹೈಕೋರ್ಟ ತಡೆ

ಬೆಂಗಳೂರು, ನ. 18: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ವೇಳೆ ಮುಸ್ಲಿಂ ಮತದಾರರ ಹೆಸರುಗಳನ್ನು ಅಳಿಸುವ ಉದ್ದೇಶದಿಂದ ನಕಲಿ ಸಹಿ ಹಾಗೂ ಸುಳ್ಳು ಮಾಹಿತಿಯೊಂದಿಗೆ ಅರ್ಜಿ ಸಂಖ್ಯೆ 7 ಸಲ್ಲಿಸಿದ ಆರೋಪಕ್ಕೆ ಸಂಬಂಧಿಸಿದಂತೆ 10 ಮಂದಿಯ ವಿರುದ್ಧ ದಾಖಲಾಗಿರುವ ಮೂರು ಪ್ರಕರಣಗಳ ಪೊಲೀಸ್ ತನಿಖೆಗೆ ಕರ್ನಾಟಕ ಹೈಕೋರ್ಟ ತಡೆ ನೀಡಿದೆ.

ಅರ್ಜಿಗಳ ಸಿಂಧುತ್ವದ ಕುರಿತು ಮೊದಲು ಚುನಾವಣಾ ನೋಂದಣಾಧಿಕಾರಿ ವಿಚಾರಣೆ ನಡೆಸಬೇಕು. ಆ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಪೊಲೀಸ್ ತನಿಖೆ ಮುಂದುವರಿಸಬಾರದು ಎಂದು ಮಂಗಳವಾರ ನ್ಯಾಯಪೀಠ ಸೂಚಿಸಿದೆ.

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಆಕ್ಷೇಪಣೆ ಸಲ್ಲಿಸಲು ಅಥವಾ ಈಗಾಗಲೇ ಇರುವ ಹೆಸರನ್ನು ತೆಗೆದುಹಾಕಲು ಅರ್ಜಿ ಸಂಖ್ಯೆ 7 ಬಳಸಲಾಗುತ್ತದೆ. ನಕಲಿ ಸಹಿ ಹಾಗೂ ಸುಳ್ಳು ಮಾಹಿತಿ ಬಳಸಿ ದೊಡ್ಡ ಪ್ರಮಾಣದಲ್ಲಿ ಇಂತಹ ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂಬ ಆರೋಪದ ಮೇಲೆ ಪ್ರಕರಣಗಳು ದಾಖಲಾಗಿದ್ದವು.

ವಿಚಾರಣೆ ವೇಳೆ ಅರ್ಜಿಗಳಿಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಸಂರಕ್ಷಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶಿಸಿದ ನ್ಯಾಯಾಲಯ, 1960ರ ಮತದಾರರ ನೋಂದಣಿ ನಿಯಮಗಳ ಪ್ರಕಾರ ಅರ್ಜಿಗಳ ಸಿಂಧುತ್ವವನ್ನು ಮೊದಲು ಪರಿಶೀಲಿಸಬೇಕು ಎಂದು ತಿಳಿಸಿದೆ. ಇದೇ ರೀತಿಯ ಎರಡು ಪ್ರಕರಣಗಳ ತನಿಖೆಗೂ ಅಕ್ಟೋಬರ್‌ನಲ್ಲಿ ತಡೆ ನೀಡಲಾಗಿತ್ತು.

ಸರಕಾರದ ವಿರೋಧ: ಮತದಾನದ ಹಕ್ಕು ಅತ್ಯಂತ ಮೌಲ್ಯಯುತವಾಗಿದ್ದು, ನಕಲಿ ದಾಖಲೆಗಳ ಮೂಲಕ ಅರ್ಹ ಮತದಾರರ ಹೆಸರುಗಳನ್ನು ಅಳಿಸುವ ಪ್ರಯತ್ನಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ರಾಜ್ಯ ಸರಕಾರ ವಾದಿಸಿತು. ಪೊಲೀಸ್ ತನಿಖೆಗೆ ತಡೆ ನೀಡುವುದನ್ನೂ ವಿರೋಧಿಸಿತು.

ಆದರೆ, ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟರು ಅರ್ಜಿ ಸಂಖ್ಯೆ 7 ಸಲ್ಲಿಸಲು ಅರ್ಹರಾಗಿದ್ದು, ಅವುಗಳ ಸತ್ಯಾಸತ್ಯತೆ ಪರಿಶೀಲಿಸುವುದು ಚುನಾವಣಾ ನೋಂದಣಾಧಿಕಾರಿಯ ಜವಾಬ್ದಾರಿ ಎಂದು ಅರ್ಜಿದಾರರು ಪ್ರತಿಪಾದಿಸಿದರು.

ತಿಳಿದಿದ್ದರೂ ಸುಳ್ಳು ಲಿಖಿತ ಘೋಷಣೆ ಸಲ್ಲಿಸಿದವರಿಗೆ ಒಂದು ವರ್ಷದವರೆಗೆ ಜೈಲು ಶಿಕ್ಷೆ ಅಥವಾ ದಂಡ ಇಲ್ಲವೇ ಎರಡನ್ನೂ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ನ್ಯಾಯಾಲಯ ಗಮನಿಸಿತು.

ಚುನಾವಣಾ ನೋಂದಣಾಧಿಕಾರಿಯ ವಿಚಾರಣೆ ಪೂರ್ಣಗೊಂಡ ಬಳಿಕ ಹೆಚ್ಚಿನ ಪೊಲೀಸ್ ತನಿಖೆಯ ಅಗತ್ಯವಿದೆಯೇ ಎಂಬುದನ್ನು ನಿರ್ಧರಿಸಬೇಕು ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ದೇಶದ 19 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಪ್ರಸ್ತುತ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ನಡೆಯುತ್ತಿದ್ದು, ಅರ್ಹ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡುವ ಸಾಧ್ಯತೆ ಕುರಿತು ಆತಂಕ ವ್ಯಕ್ತವಾಗಿದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST