LIVE TV LocalCrimeNationalInternationalPoliticsFinancialEducationTechnologyEntertainmentSportsHealthFeatureTravelingBeautyRecipes
National News

ತಿರಂಗಾ ರ‍್ಯಾಲಿಗೂ ಮುನ್ನ ಬಂಧಿತರಾಗಿದ್ದ ಅಭಿಜೀತ ದೀಪ್ಕೆಗೆ ಜಾಮೀನು

ಹೊಸದಿಲ್ಲಿ, ಅ. 17: ರಾಷ್ಟ್ರ ರಾಜಧಾನಿಯಲ್ಲಿ ‘ಲೆಹ್ರಾ ದೋ ತಿರಂಗಾ’ ರ‍್ಯಾಲಿಗೂ ಮುನ್ನ ಮುಂಜಾಗ್ರತಾ ಕ್ರಮವಾಗಿ ಬಂಧಿತರಾಗಿದ್ದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ ದೀಪ್ಕೆ ಅವರಿಗೆ ಶನಿವಾರ ಷರತ್ತುಬದ್ಧ ಜಾಮೀನು ಮಂಜೂರಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಪೊಲೀಸ್ ಠಾಣೆಯ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ.

ಶುಕ್ರವಾರ (ಅ. 16) ದೆಹಲಿಯಲ್ಲಿ ಆಯೋಜಿಸಲಾಗಿದ್ದ ತಿರಂಗಾ ರ‍್ಯಾಲಿಗೂ ಮುನ್ನ ಅಭಿಜೀತ ದೀಪ್ಕೆ ಹಾಗೂ ಅಖಿಲ ಭಾರತ ವಿದ್ಯಾರ್ಥಿಗಳ ಸಂಘದ (ಎಐಎಸ್‌ಎ) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ಅವರನ್ನು ಪೊಲೀಸರು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದಿದ್ದರು.

ಶನಿವಾರ ಮಂದಿರ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (ಎಸ್‌ಇಎಂ) ಮುಂದೆ ದೀಪ್ಕೆಯನ್ನು ಹಾಜರುಪಡಿಸಲು ನಿರ್ಧರಿಸಲಾಗಿತ್ತು. ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಬೇಕೇ ಅಥವಾ ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕೇ ಎಂಬುದನ್ನು ಮ್ಯಾಜಿಸ್ಟ್ರೇಟ್ ನಿರ್ಧರಿಸಬೇಕಿತ್ತು. ಬಳಿಕ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರಾಗಿದೆ ಎಂದು ವರದಿಯಾಗಿದೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್‌ಎಸ್‌ಎಸ್) ಸೆಕ್ಷನ್ 163ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದ ಪೊಲೀಸರು, ದೀಪ್ಕೆಯನ್ನು ದೆಹಲಿಯ ಅವರ ನಿವಾಸದಿಂದ ವಶಕ್ಕೆ ಪಡೆದಿದ್ದರು. ಬಂಧನದ ಬಳಿಕ ವಕೀಲರನ್ನು ಸಂಪರ್ಕಿಸಲು ಅವಕಾಶ ನೀಡದೆ ಅಜ್ಞಾತ ಸ್ಥಳಕ್ಕೆ ಕರೆದೊಯ್ಯಲಾಗಿದೆ ಎಂದು ಸಿಜೆಪಿ ಪ್ರತಿನಿಧಿಗಳು ಆರೋಪಿಸಿದ್ದರು.

ಇದೇ ವೇಳೆ ಶುಕ್ರವಾರ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ಕನ್ನಾಟ್ ಪ್ಲೇಸ್ ಸೇರಿದಂತೆ ದೆಹಲಿಯ ವಿವಿಧ ಪ್ರದೇಶಗಳಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿದ ಆರೋಪದ ಮೇಲೆ ಪೊಲೀಸರು ಹಲವು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST