LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿ

ಹೊಸದಿಲ್ಲಿ, ಮೇ 15 : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ ಸದ್ಯಕ್ಕೆ ಜಾಮೀನು ನೀಡಲು ನಿರಾಕರಿಸಿದ್ದು, ಒಂದು ವರ್ಷದೊಳಗೆ ವಿಚಾರಣಾ ಪ್ರಕ್ರಿಯೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದೆ.

ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಪರ್ದಿವಾಲಾ ಹಾಗೂ ವಿಜಯ್‌ ಬಿಷ್ಣೋಯಿ ಅವರಿದ್ದ ದ್ವಿಸದಸ್ಯ ಪೀಠ ದರ್ಶನ್‌ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿ ಈ ಆದೇಶ ನೀಡಿತು.

ಒಂದು ವರ್ಷದೊಳಗೆ ವಿಚಾರಣೆ ಪೂರ್ಣಗೊಳಿಸಬೇಕು. ಸಾಧ್ಯವಾದರೆ ದಿನನಿತ್ಯ ವಿಚಾರಣೆ ನಡೆಸಿ ಪ್ರಕರಣವನ್ನು ಶೀಘ್ರ ಮುಕ್ತಾಯಗೊಳಿಸಬೇಕು ಎಂದು ನ್ಯಾಯಪೀಠ ಸೂಚಿಸಿದೆ.

ಈ ಅವಧಿಯಲ್ಲಿ ವಿಚಾರಣೆ ಪೂರ್ಣಗೊಳ್ಳದಿದ್ದರೆ ಅಥವಾ ಪ್ರಕರಣದಲ್ಲಿ ಪ್ರಗತಿ ಕಾಣದಿದ್ದರೆ ದರ್ಶನ್‌ ಮತ್ತೆ ಜಾಮೀನಿಗೆ ಅರ್ಜಿ ಸಲ್ಲಿಸಬಹುದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಮಧ್ಯಂತರ ಜಾಮೀನು ಕೋರಿ ದರ್ಶನ್‌ ಪರ ಹಿರಿಯ ವಕೀಲ ಮುಕುಲ್‌ ರೋಹಟಗಿ ವಾದ ಮಂಡಿಸಿ, ಜೈಲಿನಲ್ಲಿ ದರ್ಶನ್‌ ಅವರನ್ನು ಕ್ವಾರಂಟೈನ್‌ ಸೆಲ್‌ನಲ್ಲಿ ಇರಿಸಲಾಗಿದ್ದು, ಕುಟುಂಬ ಸದಸ್ಯರನ್ನು ಕೂಡ ಗಾಜಿನ ತಡೆಗೋಡೆ ಮೂಲಕ ಮಾತ್ರ ಭೇಟಿ ಮಾಡಲು ಅವಕಾಶ ನೀಡಲಾಗುತ್ತಿದೆ ಎಂದು ಹೇಳಿದರು.

9 ತಿಂಗಳಿನಿಂದ ಜೈಲಿನಲ್ಲಿರುವ ದರ್ಶನ್‌ಗೆ ಇತರ ಕೈದಿಗಳಿಂದ ತೊಂದರೆಯಾಗುತ್ತಿದೆ. ಹೀಗಾಗಿ ಜಾಮೀನು ನೀಡಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಕ್ವಾರಂಟೈನ್‌ ಸೆಲ್‌ ಕೂಡ ಜೈಲಿನ ಭಾಗವೇ ಆಗಿದೆ. ವಿಶೇಷ ಸೌಲಭ್ಯ ಸಿಗಬಾರದು ಎಂಬ ಕಾರಣಕ್ಕೆ ಅಲ್ಲಿ ಇರಿಸಿರಬಹುದು ಎಂದು ಅಭಿಪ್ರಾಯಪಟ್ಟಿತು.

ಜೈಲು ನಿಯಮಾವಳಿ ಪ್ರಕಾರ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಸೂಚಿಸಲಾಗುವುದು. ಆದರೆ ಸದ್ಯಕ್ಕೆ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತು.

ಒಂದು ವರ್ಷದೊಳಗೆ 272 ಸಾಕ್ಷಿಗಳ ಪೈಕಿ ಪ್ರಮುಖ 60 ಸಾಕ್ಷಿಗಳ ವಿಚಾರಣೆ ಪೂರ್ಣಗೊಳಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ.

ವಿಚಾರಣೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಸೆಷನ್ಸ್‌ ನ್ಯಾಯಾಲಯಕ್ಕೆ ಹೊಸ ನ್ಯಾಯಾಧೀಶರನ್ನು ನಿಯೋಜಿಸಲು ಹೈಕೋರ್ಟ್‌ಗೆ ಸೂಚನೆ ನೀಡಲಾಗಿದೆ.

ಜೈಲು ನಿಯಮಾವಳಿ ಪ್ರಕಾರ ದರ್ಶನ್‌ಗೆ ಅಗತ್ಯ ಸೌಲಭ್ಯಗಳನ್ನು ಜೈಲು ಅಧೀಕ್ಷಕರು ಒದಗಿಸಬೇಕು ಎಂದು ನ್ಯಾಯಪೀಠ ಹೇಳಿದೆ.

ಜಾಮೀನು ಅರ್ಜಿ ತಿರಸ್ಕೃತವಾದ ಹಿನ್ನೆಲೆಯಲ್ಲಿ ದರ್ಶನ್‌ ಅಭಿಮಾನಿಗಳಲ್ಲಿ ನಿರಾಸೆ ಮೂಡಿದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು