LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಬಾಟಲ್, ಕ್ಯಾನ್ ಗಳಲ್ಲಿ ಪೆಟ್ರೋಲ್, ಡೀಸೆಲ್ ಮಾರಾಟ ನಿಷೇಧ

ಬೆಳಗಾವಿ : ಇಂಧನದ ಅಭಾವವಾಗುವ ವದಂತಿಯ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಅನಗತ್ಯ ಸಂಗ್ರಹಣೆ ತಡೆಯುವ ಉದ್ದೇಶದಿಂದ ಬೆಳಗಾವಿ ನಗರದಲ್ಲಿ ಪೆಟ್ರೋಲ್ ಬಂಕ್‌ಗಳಲ್ಲಿ ಬಾಟಲಿಗಳು, ಕ್ಯಾನ್‌ಗಳು ಸೇರಿದಂತೆ ಯಾವುದೇ ಪಾತ್ರೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟವನ್ನು ನಿಷೇಧಿಸಿ ನಗರ ಪೊಲೀಸ್ ಆಯುಕ್ತ ಭೂಷಣ ಬೋರಸೆ ಆದೇಶ ಹೊರಡಿಸಿದ್ದಾರೆ.


ನಗರದ ಕೆಲವು ಭಾಗಗಳಲ್ಲಿ ಇಂಧನ ಕೊರತೆ ಉಂಟಾಗುವ ವದಂತಿಯ ಹಿನ್ನೆಲೆಯಲ್ಲಿ ಜನರು ಬಾಟಲಿಗಳಲ್ಲಿ ಇಂಧನ ಸಂಗ್ರಹಿಸುವ ಪ್ರವೃತ್ತಿ ಹೆಚ್ಚಾಗುವ ಸಾಧ್ಯತೆ ಇದೆ. ಇದರಿಂದ ಕೃತಕ ಅಭಾವ ಸೃಷ್ಟಿಯಾಗುವ ಜೊತೆಗೆ ಸಾರ್ವಜನಿಕ ಸುರಕ್ಷತೆಗೆ ಧಕ್ಕೆ ಉಂಟಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ, ಬೆಳಗಾವಿಯ ಎಲ್ಲಾ ಪೆಟ್ರೋಲ್ ಬಂಕ್ ಮಾಲೀಕರು ಮತ್ತು ಸಿಬ್ಬಂದಿಗಳು ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಲಾಗಿದೆ.


ನಗರದಾದ್ಯಂತ ಹೊಯ್ಸಳ ಮತ್ತು ಪೊಲೀಸ್ ವಾಹನಗಳು 24 ಗಂಟೆಗಳ ಕಾಲ ಗಸ್ತಿನಲ್ಲಿರಲಿದ್ದು, ಇಂಧನ ಕೇಂದ್ರಗಳಿಗೆ ಸಂಪೂರ್ಣ ರಕ್ಷಣೆ ನೀಡಲಿವೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಡುಹಂದಿಗಳ ದಾಳಿಗೆ ಕಬ್ಬು ಬೆಳೆ ನಾಶಗದ್ದಲದ ನಡುವೆಯೇ ಮುಕ್ತಾಯ ಕಂಡ ಸಂಸತ್ ಅಧಿವೇಶನ: ಚರ್ಚೆಯಿಲ್ಲದೆ 11 ಮಸೂದೆಗಳ ಅಂಗೀಕಾರ300 ಅಡಿ ಕುಸಿದ ವಿಮಾನ, ಪೈಲಟ್ ಗಾಂಜಾ ಸೇವನೆ ಪತ್ತೆ!ಮಾನವ ಹಕ್ಕುಗಳ ಪಾಠ ನಿಲ್ಲಿಸಿ; ಫ್ರಾನ್ಸ್ ವಿರುದ್ಧ ಇರಾನ್ ಕಿಡಿ25 ಬಿಜೆಪಿ ನಾಯಕರು, ಹಿಂದುತ್ವ ಕಾರ್ಯಕರ್ತರ ವಿರುದ್ಧದ ಪ್ರಕರಣ ಹಿಂಪಡೆಯಲು ನ್ಯಾಯಾಲಯದ ಅನುಮತಿ!ದೇಶಕ್ಕೇ ಮಾದರಿಯಾಗುವಂತೆ ಗಣೇಶೋತ್ಸವ ಆಚರಿಸೋಣಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್‌ ರೇವಣ್ಣ ಬಳಿ ಮೊಬೈಲ್‌, ಪೆನ್‌ಡ್ರೈವನಲ್ಲಿ ಅಶ್ಲೀಲ ವಿಡಿಯೋ ಪತ್ತೆ ; ವಿಐಪಿ ಸೆಲ್‌ನಿಂದ ಸಾಮಾನ್ಯ ಬ್ಯಾರಕ್‌ಗೆ ಸ್ಥಳಾಂತರಲಡಾಖ್‌ನ ಲೇಹ್‌ನಲ್ಲಿ 5.5 ತೀವ್ರತೆಯ ಭೂಕಂಪದೇಶಭಕ್ತಿಯ ಸರ್ಟಿಫಿಕೇಟ್ ನೀಡುವ ಮುನ್ನ ಆರ್‌ಎಸ್‌ಎಸ್‌ ತ್ರಿವರ್ಣ ಧ್ವಜದ ಇತಿಹಾಸ ಹೇಳಲಿ: ಪ್ರಿಯಾಂಕ್ ಖರ್ಗೆಖರ್ಗೆ ರ‍್ಯಾಲಿ ನಡೆದ ಸ್ಥಳದಲ್ಲಿ ‘ಶುದ್ಧೀಕರಣ’ ಹವನ; ಬಿಜೆಪಿ–ಕಾಂಗ್ರೆಸ್ ನಡುವೆ ವಾಕ್ಸಮರ