LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬಸವ ಜಯಂತಿ ಮಹೋತ್ಸವ: 26ರಂದು ಬೆಳಗಾವಿಯಲ್ಲಿ ಬೃಹತ್ ಮೆರವಣಿಗೆ

ಬೆಳಗಾವಿ, ಏ. 23 : ವಿಶ್ವಗುರು ಜಗಜ್ಯೋತಿ ಬಸವೇಶ್ವರರ ಜಯಂತಿ ಅಂಗವಾಗಿ ರವಿವಾರ ೨೬ರಂದು ಬೆಳಗಾವಿಯಲ್ಲಿ ಭವ್ಯ ಬೃಹತ್ ಮೆರವಣಿಗೆ ಹಾಗೂ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಬಸವ ಜಯಂತಿ ಉತ್ಸವ ಸಮಿತಿಯ ಸಂಚಾಲಕ ಬಸವರಾಜ ರೊಟ್ಟಿ ತಿಳಿಸಿದ್ದಾರೆ.


ಗುರುವಾರ ಪತ್ರಿಕಾ ಪರಿಷತ್ತಿನಲ್ಲಿ ಮಾತನಾಡಿದ ಅವರು, ಸಂಜೆ 4 ಗಂಟೆಗೆ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಿಂದ ಮೆರವಣಿಗೆ ಪ್ರಾರಂಭವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದೆ. ಮೆರವಣಿಗೆಯ ಪ್ರಮುಖ ಆಕರ್ಷಣೆಯಾಗಿ ಬಸವಣ್ಣನವರ ಮೂರ್ತಿ ಹೊತ್ತ ಡಿಜಿಟಲ್ ಆನೆ ಭಾಗವಹಿಸಲಿದ್ದು, ಇದು ಜನರಲ್ಲಿ ವಿಶೇಷ ಗಮನ ಸೆಳೆಯಲಿದೆ.


ಪಲ್ಲಕ್ಕಿಯಲ್ಲಿ ವಚನ ಕಟ್ಟುಗಳ ಮೆರವಣಿಗೆ ನಡೆಯಲಿದ್ದು, ಬಸವಣ್ಣನವರ ವಚನಗಳನ್ನು ಜನರಿಗೆ ತಲುಪಿಸುವ ಪ್ರಯತ್ನ ಮಾಡಲಾಗಿದೆ. ಉಡುಪಿಯ ಚಂಡೆ ಮದ್ದಳೆ ಕಲಾವಿದರ ವಾದ್ಯ ಪ್ರದರ್ಶನ ಮೆರವಣಿಗೆಯಲ್ಲಿ ಸಂಪ್ರದಾಯದ ಸೊಬಗು ಹೆಚ್ಚಿಸಲಿದ್ದು, ಧಾರವಾಡ ಜಿಲ್ಲೆಯ ಮದನಭಾವಿಯಿಂದ ೪೦ ಜನರ ತಂಡದ ವಚನಾಧಾರಿತ ಕೋಲಾಟ ಜನರನ್ನು ಆಕರ್ಷಿಸಲಿದೆ. ದಾವಣಗೆರೆಯ ಬಸವ ಲೋಕ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮವೂ ನಡೆಯಲಿದೆ.


ವಿವಿಧ ಮಹಿಳಾ ಸಂಘಟನೆಗಳ 60 ಸದಸ್ಯರಿಂದ ವಚನಾಧಾರಿತ ನೃತ್ಯ ಪ್ರದರ್ಶನ ಹಮ್ಮಿಕೊಳ್ಳಲಾಗಿದ್ದು, ಬಸವಣ್ಣನವರ ತತ್ವಗಳನ್ನು ನೃತ್ಯ ರೂಪದಲ್ಲಿ ಜನರಿಗೆ ಪರಿಚಯಿಸಲಾಗುತ್ತದೆ. ವಿವಿಧ ಸಂಘ ಸಂಸ್ಥೆಗಳ ರೂಪಕ ವಾಹನಗಳು, ಸಾಂಸ್ಕೃತಿಕ ವೇಷಭೂಷಣಗಳು ಮೆರವಣಿಗೆಯಲ್ಲಿ ಪಾಲ್ಗೊಂಡು ಮಹೋತ್ಸವಕ್ಕೆ ಮತ್ತಷ್ಟು ಮೆರುಗು ನೀಡಲಿವೆ.


ಮೆರವಣಿಗೆ ಕಾಕತಿ ವೇಸ, ಗಣಪತಿ ಗಲ್ಲಿ, ಮಾರುತಿ ಗಲ್ಲಿ, ರಾಮದೇವ ಗಲ್ಲಿ, ಕಾಲೇಜು ರಸ್ತೆ ಸೇರಿದಂತೆ ನಗರದ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿ ಲಿಂಗರಾಜ ಕಾಲೇಜು ಆವರಣದಲ್ಲಿ ಸಮಾಪ್ತಿಯಾಗಲಿದೆ. ಮಹಿಳಾ ಘಟಕಗಳು, ಯುವಕ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳ ಸಾವಿರಾರು ಸದಸ್ಯರು ಮೆರವಣಿಗೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.


ಮೆರವಣಿಗೆಯ ನಂತರ ಲಿಂಗರಾಜ ಕಾಲೇಜು ಆವರಣದಲ್ಲಿ ಬೆಳಕು ಪ್ರದರ್ಶನ, ಪಟಾಕಿ ಪ್ರದರ್ಶನ ಸೇರಿದಂತೆ ವಿವಿಧ ಆಕರ್ಷಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಗಳು ಸಾರ್ವಜನಿಕರಿಗೆ ಮನರಂಜನೆ ನೀಡಲಿವೆ ಎಂದು ಆಯೋಜಕರು ತಿಳಿಸಿದ್ದಾರೆ.


ಜಯಂತಿ ಅಂಗವಾಗಿ ಬಸವೇಶ್ವರರ ಸಮಾನತೆ, ಶ್ರಮ ಹಾಗೂ ನೈತಿಕ ಮೌಲ್ಯಗಳ ಸಂದೇಶವನ್ನು ಸಮಾಜದ ಎಲ್ಲ ವರ್ಗಗಳಿಗೆ ತಲುಪಿಸುವ ಉದ್ದೇಶದಿಂದ ಪೂಜೆ, ಅಭಿಷೇಕ, ಮೆರವಣಿಗೆ ಹಾಗೂ ಬಸವಾದಿ ಶರಣರ ಆಧಾರಿತ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಬೆಳಿಗ್ಗೆ ಬಸವೇಶ್ವರರ ಪ್ರತಿಮೆಗೆ ವಿಶೇಷ ಪೂಜೆ, ಅಭಿಷೇಕ ಸೇರಿದಂತೆ ಧಾರ್ಮಿಕ ವಿಧಿಗಳು ನೆರವೇರಲಿವೆ.


ಮೆರವಣಿಗೆ ಬಳಿಕ ಲಿಂಗರಾಜ ಕಾಲೇಜು ಮೈದಾನದಲ್ಲಿ ಭಾಗವಹಿಸುವ ಬಸವ ಭಕ್ತರಿಗೆ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿದೆ. ಸಂಜೆ ಧಾರ್ಮಿಕ ಸಭೆ ನಡೆಯಲಿದ್ದು, ಬಸವಣ್ಣನವರ ಜೀವನ, ತತ್ವ ಹಾಗೂ ಸಮಾಜಮುಖಿ ಸಂದೇಶಗಳ ಕುರಿತು ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಯಶಸ್ಸಿಗಾಗಿ ಆಯೋಜಕರು ಸಕಲ ಸಿದ್ಧತೆಗಳನ್ನು ಕೈಗೊಂಡಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಹೋತ್ಸವವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ.


ಪತ್ರಿಕಾ ಪರಿಷತ್ತಿನಲ್ಲಿ ಮುರುಗೇಂದ್ರಗೌಡ ಪಾಟೀಲ, ಅಶೋಕ ಮಳಗಲಿ, ಈರಣ್ಣ ದಯಣ್ಣವರ, ಶಂಕರ ಗುಡಸ, ಮನೋಹರ ಪಡುಕಲಕಟ್ಟಿ, ರಮೇಶ ತುಬಚಿ, ಮುರುಗೆಪ್ಪ ಬಾಳಿ, ಹಾಂತೇಶ ಗುಡಸ, ಕೆ. ಶರಣ ಪ್ರಸಾದ, ಆನಂದ ಗುಡಸ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ