LIVE TV LocalCrimeNationalInternationalPoliticsBusinessFinancialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

‘ಬಸವಮಂಟಪ’ ಕೃತಿ ಮುಟ್ಟುಗೋಲಿಗೆ ಖಂಡ್ರೆ ಆಗ್ರಹ

ಬೆಂಗಳೂರು, ನ. 19: ವಿಶ್ವಗುರು ಬಸವಣ್ಣನವರು ಹಾಗೂ ಲಿಂಗಾಯತ ಸಮುದಾಯವನ್ನು ಅವಹೇಳನ ಮಾಡಲಾಗಿದೆ ಎಂದು ಆರೋಪಿಸಿ, ಲೇಖಕ ರವಿ ಹಂಜ್ ಅವರ ‘ಬಸವಮಂಟಪ’ ಕೃತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿರುವ ವಿಡಿಯೊಗಳನ್ನು ತೆಗೆದುಹಾಕಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ, ಸಚಿವ ಈಶ್ವರ ಬಿ. ಖಂಡ್ರೆ ಒತ್ತಾಯಿಸಿದ್ದಾರೆ.

ಈ ಕುರಿತು ಗುರುವಾರ ಹೇಳಿಕೆ ನೀಡಿರುವ ಅವರು, ಸಚಿವನಾಗಿ ಕೃತಿಯೊಂದನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಬಹಿರಂಗವಾಗಿ ಒತ್ತಾಯಿಸುವುದು ಸೂಕ್ತವಲ್ಲ ಎಂಬ ಅರಿವಿದೆ. ಆದರೆ, ಆಧಾರರಹಿತ ಆರೋಪಗಳ ಮೂಲಕ ಬಸವಣ್ಣನವರ ಅನುಯಾಯಿಗಳು ಹಾಗೂ ಲಿಂಗಾಯತ ಸಮುದಾಯದ ಭಾವನೆಗಳಿಗೆ ಧಕ್ಕೆ ಉಂಟುಮಾಡಿರುವ ಕೃತಿ ಸಮಾಜದ ಸ್ವಾಸ್ಥ್ಯ ಕದಡುವಂತಿದೆ. ಹೀಗಾಗಿ ಕೃತಿ ಮುಟ್ಟುಗೋಲಿಗೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರನ್ನು ಒತ್ತಾಯಿಸುವುದಾಗಿ ತಿಳಿಸಿದ್ದಾರೆ.

ಸಂವಿಧಾನ ನೀಡಿರುವ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಗೌರವಿಸುತ್ತೇನೆ. ಆದರೆ, ಬಸವಣ್ಣನವರನ್ನು ಕೊಲೆಗಡುಕ, ದರೋಡೆಕೋರ ಎಂದು ಬಿಂಬಿಸುವುದು ಹಾಗೂ ಬಿಜ್ಜಳನ ಖಜಾನೆ ದುರುಪಯೋಗಪಡಿಸಿಕೊಂಡು ಶರಣ ದಾಸೋಹ ನಡೆಸಿದ್ದಾರೆ ಎಂಬ ಆರೋಪಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಲಿಂಗಾಯತರನ್ನು ಅವಹೇಳನಕಾರಿಯಾಗಿ ಸಂಬೋಧಿಸಿರುವುದು ವಿಶ್ವಾದ್ಯಂತ ಇರುವ ಬಸವಭಕ್ತರಿಗೆ ನೋವುಂಟುಮಾಡಿದೆ. ಸಮರ್ಪಕ ಸಂಶೋಧನೆಯಿಲ್ಲದೆ ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪದಡಿ ರವಿ ಹಂಜ್ ವಿರುದ್ಧ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಖಂಡ್ರೆ ಆಗ್ರಹಿಸಿದ್ದಾರೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST