LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕದನ ವಿರಾಮ ಉಲ್ಲಂಘನೆಗೆ ತಕ್ಕ ಉತ್ತರ: ಅಮೆರಿಕಕ್ಕೆ ಇರಾನ್ ಎಚ್ಚರಿಕೆ

ತೆಹರಾನ್‌, ಮೇ 26 : ಇರಾನ್ ವಿರುದ್ಧ ಮತ್ತೊಮ್ಮೆ ದಾಳಿ ನಡೆದರೆ ಅದಕ್ಕೆ ಮೊದಲಿಗಿಂತಲೂ ಹೆಚ್ಚು ಭಾರೀ ಹಾಗೂ ಹಿಂಸಾತ್ಮಕ ಪ್ರತಿಕ್ರಿಯೆ ನೀಡಲಾಗುವುದು ಎಂದು ಇರಾನ್ ಸೇನೆಯ ವಕ್ತಾರ ಅಬೋಲ್ಫಜ್ಲ್ ಶೇಕಾರ್ಚಿ ಎಚ್ಚರಿಕೆ ನೀಡಿದ್ದಾರೆ.

ಇರಾನ್‌ನ ಫಾರ್ಸ್ ಸುದ್ದಿ ಸಂಸ್ಥೆಗೆ ನೀಡಿದ ಹೇಳಿಕೆಯಲ್ಲಿ ಅವರು, ಮತ್ತೆ ಯುದ್ಧ ಪರಿಸ್ಥಿತಿ ನಿರ್ಮಾಣವಾದರೆ ಇರಾನ್ ದಾಳಿಗಳು ಪ್ರದೇಶದ ಗಡಿಗಳನ್ನು ಮೀರಿ ಇನ್ನಷ್ಟು ವ್ಯಾಪಕವಾಗಿ ವಿಸ್ತರಿಸಲಿವೆ ಎಂದು ಹೇಳಿದ್ದಾರೆ.

ಇದೇ ವೇಳೆ ಅಮೆರಿಕದ ಮಾನವರಹಿತ ವಿಮಾನ ಹಾಗೂ ಯುದ್ಧ ವಿಮಾನವೊಂದು ಇರಾನ್ ವಾಯುಪ್ರದೇಶ ಪ್ರವೇಶಿಸಿದೆ ಎಂದು ಟೆಹರಾನ್ ಆರೋಪಿಸಿದೆ. ಇರಾನ್‌ನ ಕ್ರಾಂತಿಕಾರಿ ಗಾರ್ಡ್ ಪಡೆ ವಾಯು ರಕ್ಷಣಾ ವ್ಯವಸ್ಥೆಗಳು ಅಮೆರಿಕದ ಮಾನವರಹಿತ ವಿಮಾನವನ್ನು ಹೊಡೆದುರುಳಿಸಿವೆ ಎಂದು ರಾಜ್ಯ ಮಾಧ್ಯಮಗಳು ವರದಿ ಮಾಡಿವೆ.

ವಾಯುಪ್ರದೇಶ ಪ್ರವೇಶಿಸಿದ್ದ ಯುದ್ಧ ವಿಮಾನದ ಮೇಲೂ ಗುಂಡಿನ ದಾಳಿ ನಡೆಸಲಾಗಿದೆ ಎಂದು ಇರಾನ್ ತಿಳಿಸಿದೆ. ಆದರೆ ಆ ಯುದ್ಧ ವಿಮಾನಕ್ಕೆ ಹಾನಿಯಾಗಿದೆಯೇ ಎಂಬ ಕುರಿತು ಇನ್ನೂ ಸ್ಪಷ್ಟ ಮಾಹಿತಿ ಬಹಿರಂಗವಾಗಿಲ್ಲ.

ಅಮೆರಿಕ ಸೇನೆಯ ಈ ಅತ್ಯಾಧುನಿಕ ಮಾನವರಹಿತ ವಿಮಾನವು ಸುಮಾರು 50 ಸಾವಿರ ಅಡಿ ಎತ್ತರದಲ್ಲಿ 27 ಗಂಟೆಗಳಿಗೂ ಹೆಚ್ಚು ಕಾಲ ಹಾರಾಟ ನಡೆಸಿ ಗುಪ್ತಚರ ಮಾಹಿತಿ ಸಂಗ್ರಹಿಸುವ ಸಾಮರ್ಥ್ಯ ಹೊಂದಿದೆ ಎಂದು ವರದಿಗಳು ತಿಳಿಸಿವೆ.

ಈ ನಡುವೆ ದಕ್ಷಿಣ ಇರಾನ್‌ನ ಕೆಲವು ಸೈನಿಕ ನೆಲೆಗಳ ಮೇಲೆ ಅಮೆರಿಕ ದಾಳಿ ನಡೆಸಿರುವುದಾಗಿ ಅಮೆರಿಕ ಸೇನೆ ಘೋಷಿಸಿದ ಕೆಲವೇ ಗಂಟೆಗಳ ಬಳಿಕ ಇರಾನ್ ಈ ತೀವ್ರ ಪ್ರತಿಕ್ರಿಯೆ ನೀಡಿದೆ.

ಯಾವುದೇ ಕದನ ವಿರಾಮ ಉಲ್ಲಂಘನೆ ಅಥವಾ ದಾಳಿಗೆ ತಕ್ಕ ಪ್ರತಿಕ್ರಿಯೆ ನೀಡುವ ಹಕ್ಕು ಇರಾನ್‌ಗೆ ಇದೆ ಎಂದು ಅಲ್ಲಿನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮ ಏಷ್ಯಾದ ಭದ್ರತಾ ಪರಿಸ್ಥಿತಿ ಕುರಿತು ಜಾಗತಿಕ ಮಟ್ಟದಲ್ಲಿ ಆತಂಕ ಮತ್ತಷ್ಟು ತೀವ್ರಗೊಂಡಿದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST