LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಬೆಳಗಾವಿಯ ಖ್ಯಾತ ಹೊಟೇಲ್‌ ಉದ್ಯಮಿ ಸುರೇಶ ನಾಯರಿ‌ ಹಠಾತ್‌ ನಿಧನ

ಬೆಳಗಾವಿ, 13; ಬೆಳಗಾವಿಯ ಖ್ಯಾತ ಹೊಟೇಲ್ ಉದ್ಯಮಿ, ಪ್ರತಿಷ್ಠಿತ ಶಭರಿ ಮತ್ತು ಹರ್ಷಾ ಹೊಟೇಲ್‌ ಮಾಲೀಕರಾದ ಸುರೇಶ ಗಣಪಯ್ಯ ನಾಯರಿ ಅವರು ಅನಾರೋಗ್ಯದ ಕಾರಣ ಸೋಮವಾರ  ರಾತ್ರಿ ಹಠಾತ್ ನಿಧನರಾದರು.‌ ಅವರಿಗೆ 52 ವರ್ಷ ವಯಸ್ಸಾಗಿತ್ತು.



ರಾಮತೀರ್ಥ ನಗರ ನಿವಾಸಿಯಾಗಿದ್ದ ಅವರನ್ನು ಕೆಲ ದಿನಗಳ ಹಿಂದೆಯಷ್ಟೇ ಅನಾರೋಗ್ಯದ ಕಾರಣ ಬೆಳಗಾವಿಯ ಕೆಎಲ್‌ ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸೋಮವಾರ ಸಂಜೆ ಅವರ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದ್ದರಿಂದ ವಿಮಾನದ ಮೂಲಕ ಬೆಂಗಳೂರಿಗೆ ಸಾಗಿಸಲು ನಿರ್ಧರಿಸಲಾಗಿತ್ತಾದರೂ ಅದೆಲ್ಲ ಕೂಡಿ ಬರದೇ ರಾತ್ರಿ 9.30ರ ಸುಮಾರಿಗೆ ಕೊನೆಯುಸಿರೆಳೆದರು ಎಂದು ತಿಳಿದು ಬಂದಿದೆ.



ದಿವಂಗತರು ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.



ಮೂಲತಃ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದವರಾದ ಸುರೇಶ ನಾಯರಿ ಅವರು ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರಿನಲ್ಲಿ ಮುಗಿಸಿ, 1987ರಲ್ಲಿ ಅಣ್ಣನೊಂದಿಗೆ ಬೆಳಗಾವಿಯಲ್ಲಿ ಪಾನ್ ಅಂಗಡಿ ಹಾಗೂ ಟೀ ಸ್ಟಾಲಿನಲ್ಲಿ ಕೆಲಸ ಆರಂಭಿಸಿದ್ದರು. 1991ರಲ್ಲಿ ಸ್ವಂತ ಉದ್ಯಮವನ್ನು ಕೆಎಲ್ ಇ ಆಸ್ಪತ್ರೆಯ ಹತ್ತಿರ ಅವರು ಪ್ರಾರಂಭಿಸಿ, ನಂತರ ಅಟೋ ನಗರದಲ್ಲಿ 2001ರಲ್ಲಿ ಹರ್ಷಾ ವೆಜ್ ಫ್ಯಾಮಿಲಿ ರೆಸ್ಟೊರೆಂಟ್, 2013ರಲ್ಲಿ ರಾಮದೇವ ಹೊಟೇಲ್ ಪಕ್ಕದಲ್ಲಿ ಶಬರಿ ಹೊಟೇಲ್, 2019ರಲ್ಲಿ ಶಿವಬಸವ ನಗರದ ಕೆಪಿಟಿಸಿಎಲ್ ಸಭಾಭವನ ಎದುರು ಶ್ರೀ ಸಾಯಿ ಶಭರಿ ಹೊಟೇಲ್ ಹೀಗೆ ಉದ್ಯಮ ಬೆಳೆಸುತ್ತ ಸಾಗಿದ್ದ ಅವರು ಇದೇ 2023,  ಮೇ‌ 25ರಂದು ಆಟೋ ನಗರದಲ್ಲಿ ಮೊದಲಿದ್ದ ಹರ್ಷಾ ಹೊಟೇಲ್ ನವೀಕರಿಸಿ ಅತ್ಯಾಧುನಿಕ ಸೌಲಭ್ಯವುಳ್ಳ, ಹೊಸ ವಿನ್ಯಾಸದೊಂದಿಗೆ‌ ಯಶಸ್ವಿಯಾಗಿ ಹೊಟೇಲ್ ನಡೆಸುತ್ತಿದ್ದರು.



ಅನೇಕ ಸಾಮಾಜಿಕ, ಧಾರ್ಮಿಕ ಚಟುವಟಿಕೆಗಳಲ್ಲಿ‌ ಸಕ್ರಿಯವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದ ಅವರು, ಗುರು ವಿವೇಕಾನಂದ ಸೊಸೈಟಿ ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು.‌



ದಿವಂಗತರ ಅಂತ್ಯಕ್ರಿಯೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದಲ್ಲಿ ನ.‌ 14ರಂದು ಸಂಜೆ 4 ಗಂಟೆಗೆ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ