ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೈಕ್-ಬೊಲೆರೊ ಡಿಕ್ಕಿಗೆ ಹೊತ್ತಿ ಉರಿದ ವಾಹನಗಳು : ಇಬ್ಬರ ಸಾವು 

ನರಗುಂದ : ಬೈಕ್ ಹಾಗೂ ಬೊಲೆರೊ ನಡುವೆ‌ ಸಂಭವಿಸಿದ ಭೀಕರ ಅಪಘಾತದಲ್ಲಿ ಬೊಲೆರೊ ಸುಟ್ಟು ಕರಕಲಾದರೆ ಬೈಕ್‌ನಲ್ಲಿದ್ದ ಇಬ್ಬರೂ ಮೃತಪಟ್ಟ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ.

ಕಾರು ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸುತ್ತಿದ್ದಂತೆಯೇ ಬೈಕ್‌ ಉರುಳಿ ಬಿದ್ದಿದೆ.ಬೈಕ್‌ ಸವಾರ ಸ್ಥಳದಲ್ಲೇ ಪ್ರಾಣ ಕಳೆದುಕೊಂಡರೆ ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆ ತೀವ್ರವಾಗಿ ಗಾಯಗೊಂಡರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಈ ನಡುವೆ ಅಪಘಾತಕ್ಕೆ ಒಳಗಾದ ಬೊಲೆರೊ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಅವರು ಕೆಳಗಿಳಿದ ಹಿನ್ನೆಲೆಯಲ್ಲಿ ಜೀವಾಪಾಯದಿಂದ ಪಾರಾದರು. ಅದರೆ, ಅವರೆಲ್ಲರೂ ಅಲ್ಲಿಂದ ಪರಾರಿಯಾಗಿದ್ದಾರೆ. ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.