ಬೆಳಗಾವಿ, ಅ. 1 : (ಸಮದರ್ಶಿ ಸುದ್ದಿ) - ಬೈಕ್ ಸವಾರನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ 19 ವರ್ಷದ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಗಾಂಧಿನಗರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ನಡೆದಿದೆ.
ಮಹಾಂತೇಶ ನಗರದ ದೃವಾ ಕರ್ಜಗಿ (19) ಮೃತಪಟ್ಟ ಯುವಕ. ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಅಪ್ಪಳಿಸಿದ್ದು, ಅಪಘಾತದ ತೀವ್ರತೆಗೆ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಘಟನೆ ಬೆಳಗಾವಿ ಉತ್ತರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.