LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ತ್ಯಾಜ್ಯ ನೀರು ನದಿ, ಹಳ್ಳ, ಕೊಳ್ಳಗಳಿಗೆ ಬಿಡುವುದರಿಂದ ಜನ, ಜೀವ ವೈವಿಧ್ಯತೆ ಅಪಾಯದಲ್ಲಿ –ಸುಪ್ರೀಮ ಕೋರ್ಟ

ಹೊಸದಿಲ್ಲಿ: ಉತ್ತರ ಪ್ರದೇಶದಲ್ಲಿ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳನ್ನು ಸ್ಥಾಪಿಸುವ ಮೂಲಕ ಕೊಳಚೆ ನೀರಿನ ಸಂಸ್ಕರಣೆಯಲ್ಲಿ ಶೇ 100ರಷ್ಟು ಗುರಿ ಸಾಧಿಸಲು ಇನ್ನಷ್ಟು ಕಾಲಾವಕಾಶ ನೀಡುವಂತೆ ಉತ್ತರಪ್ರದೇಶ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ ನೇತೃತ್ವದ ತ್ರಿಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿದ್ದು ಹಳ್ಳಿ, ಪಟ್ಟಣ ಹಾಗೂ ನಗರಗಳಲ್ಲಿ ಉತ್ಪತ್ತಿಯಾಗುತ್ತಿರುವ ಕೊಳಚೆ ನೀರಿನ ಸಂಸ್ಕರಣೆ ಕುರಿತು ಸುಪ್ರೀಮ ಕೋರ್ಟ್ ಗುರುವಾರ ತೀವ್ರ ಕಳವಳ ವ್ಯಕ್ತಪಡಿಸಿದೆ.



ಸಂಸ್ಕರಿಸದೇ ತ್ಯಾಜ್ಯ ನೀರನ್ನು ನದಿ ಹಾಗೂ ಹಳ್ಳ, ಕೊಳ್ಳಗಳಿಗೆ ಹರಿಸಲಾಗುತ್ತಿದೆ. ಮೂಲಕ ಜಲಮೂಲಗಳನ್ನೇ ಕಲುಷಿತಗೊಳಿಸಲಾಗುತ್ತಿದ್ದು, ಇದರ ಮೇಲೆ ಅವಲಂಬಿತವಾಗಿರುವ ನಾಗರಿಕರು ಹಾಗೂ ಜೀವ ವೈವಿಧ್ಯತೆ ಅಪಾಯಕ್ಕೆ ಸಿಲುಕಿದೆ ಎಂದು ನ್ಯಾಯಮೂರ್ತಿ ಪಿ.ಎಸ್‌.ನರಸಿಂಹ ಹಾಗೂ ಜೆ.ಬಿ.ಪಾರ್ದಿವಾಲಾ ಅವರನ್ನೊಳಗೊಂಡ ನ್ಯಾಯಪೀಠ ಆತಂಕ ವ್ಯಕ್ತಪಡಿಸಿದೆ.



ಉತ್ತರಪ್ರದೇಶದಲ್ಲಿ ಎಸ್ಟಿಪಿಗಳನ್ನು ಮೇಲ್ದರ್ಜೆಗೇರಿಸಲು ಹಾಗೂ ಅವುಗಳ ನಿರ್ವಹಣೆಗೆ ಅಗತ್ಯ ಅನುದಾನ ಒದಗಿಸಲಾಗುತ್ತಿದೆಯೇ, ಅವುಗಳ ಕಾರ್ಯಕ್ಷಮತೆ ಹೆಚ್ಚಿಸಲು ಸೂಕ್ತ ಕಾರ್ಯವಿಧಾನವನ್ನು ರೂಪಿಸಲಾಗಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳಿ ಎಂದು ನ್ಯಾಯಪೀಠವು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಗೆ (ಎನ್ಜಿಟಿ) ಸೂಚಿಸಿದೆರಾಜ್ಯದಲ್ಲಿ ಪ್ರತಿ ದಿನ 5,500 ದಶಲಕ್ಷ ಲೀಟರ್ಕೊಳಚೆ ನೀರು ಉತ್ಪತ್ತಿಯಾಗುತ್ತಿದೆ. ದೇಶದಲ್ಲೇ ಇದು ಅಧಿಕವಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
40 ದಿನದಲ್ಲೇ ತೀರ್ಪು; ಒಂದೂವರೆ ವರ್ಷದ ಮಗುವನ್ನು ಕ್ರೂರವಾಗಿ ಕೊಂದ ರಾಕ್ಷಸನಿಗೆ ಗಲ್ಲು ಶಿಕ್ಷೆಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಗೆ 16,925 ಹುದ್ದೆಗಳ ಮುಂದುವರಿಕೆಗೆ ಸರ್ಕಾರದ ಅನುಮೋದನೆಸಚಿವ ಸಂಪುಟ ವಿಸ್ತರಣೆಗೆ ಒತ್ತಡ ಇಲ್ಲ; ಪಕ್ಷದ ನಾಯಕರು ಕರೆದಾಗ ದಿಲ್ಲಿಗೆ ಹೋಗುತ್ತೇನೆ: ಡಿ.ಕೆ.ಶಿವಕುಮಾರಆಸ್ಟ್ರೇಲಿಯಾದಲ್ಲಿ ಯುವ ಕ್ರಿಕೆಟಿಗರೊಂದಿಗೆ ಮೋದಿ ಸಂವಾದಕೋರ್ಟ ಹಾಲ್‌ನಲ್ಲೇ ಕಾಗದ ಎಸೆದು ಸುಪ್ರೀಂ ಕೋರ್ಟ ಮುಖ್ಯ ನ್ಯಾಯಮೂರ್ತಿಗೆ ನಿಂದನೆದೇಶದಲ್ಲಿ ಪ್ರಶ್ನೆಗಳು ಉದ್ಭವಿಸಿದಾಗ ಪ್ರಧಾನಿ ಮೋದಿ ವಿದೇಶಕ್ಕೆ ಹೋಗುತ್ತಾರೆ: ಪ್ರಿಯಾಂಕ್ ಖರ್ಗೆಬಳ್ಳಾರಿಯಲ್ಲಿ ಎನ್‌ಐಎ ದಾಳಿ; ಉಗ್ರ ಚಟುವಟಿಕೆಗಳ ಸಂಚುಮೇವು ತರಲು ತೆರಳಿದ್ದ ವೃದ್ಧೆಯ ಮೇಲೆ ಅತ್ಯಾಚಾರ, ಬರ್ಬರ ಹತ್ಯೆಹೆಲ್ಮೆಟ್‌ನಿಂದ ಹಲ್ಲೆ ನಡೆಸಿ ಪತ್ನಿಯ ಬರ್ಬರ ಹತ್ಯೆವಾಯುದಾಳಿಗೆ ಪ್ರತಿಯಾಗಿ ಅಮೆರಿಕ ನೆಲೆಗಳ ಮೇಲೆ ಇರಾನ್ ಪ್ರತಿದಾಳಿ