ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

10 ಸಾವಿರ ಲೀಟರ್ ಉಚಿತ ನೀರು ಕೊಡುವ ನಿರ್ಧಾರ ಇನ್ನೂ ಮಾಡಿಲ್ಲ : ಬೊಮ್ಮಾಯಿ 

ಚಿತ್ರದುರ್ಗ: ಪ್ರತಿ ಮನೆಗೆ 10 ಸಾವಿರ ಲೀಟರ್ ಉಚಿತವಾಗಿ ನೀರು ಕೊಡುವ ಬಗ್ಗೆ ಸರ್ಕಾರ ನಿರ್ಧಾರ ಇನ್ನೂ ಮಾಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಮುರುಘಾ ಮಠದ ಕಾರ್ಯಕ್ರಮಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರು ಮಂಡಿ ಶಸ್ತ್ರಚಿಕಿತ್ಸೆ ಪಡೆದು ಆಸ್ಪತ್ರೆಯಲ್ಲಿದ್ದಾರೆ. ಹಾಗಾಗಿ ಕಾರ್ಯಕ್ರಮಗಳಿಗೆ ಹಾಜರಾಗುತ್ತಿಲ್ಲ ಎಂದು ಮುಖ್ಯ ಮಂತ್ರಿಗಳು ತಿಳಿಸಿದರು.

ಪ್ರತಿ ಮನೆಗೆ 10 ಸಾವಿರ ಲೀಟರ್ ಉಚಿತವಾಗಿ ನೀರು ಕೊಡುವ ಬಗ್ಗೆ ಸರ್ಕಾರ ಆಲೋಚನೆ ಇನ್ನೂ  ಮಾಡಿಲ್ಲ ಎಂದು ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಜೆಡಿಎಸ್ ಗೆ ಬಹುಮತ ಬಂದರೆ ಅಲ್ಪಸಂಖ್ಯಾತರನ್ನು ಮುಖ್ಯಮಂತ್ರಿ ಮಾಡುವುದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅದು ಅವರ ಪಕ್ಷದ ನಿರ್ಣಯ, ಅದರ ಬಗ್ಗೆ ಯಾವುದೇ ಹೇಳಿಕೆ ನೀಡುವುದಿಲ್ಲ ಎಂದರು.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.