LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಮೂಢನಂಬಿಕೆ ನಾನು ನಂಬುವುದಿಲ್ಲ ಎಂದು ಚಾಮರಾಜನಗರಕ್ಕೆ ಭೇಟಿ ಕೊಟ್ಟ ಬೊಮ್ಮಾಯಿ

ಚಾಮರಾಜನಗರ: ಚಾಮರಾಜನಗರಕ್ಕೆ ಬಂದಿರುವುದರಿಂದ ಶುಭ ಸೂಚನೆಯಾಗಿದೆ. ಯಾವುದೇ ಮೂಢನಂಬಿಕೆಗಳನ್ನು ನಾನು ನಂಬುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.



ಚಾಮರಾಜನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಚಾಮರಾಜನಗರಕ್ಕೆ ಭೇಟಿ ನೀಡಿದರೆ ಅಧಿಕಾರ ಹೋಗುತ್ತದೆ ಎಂದು ಯಾರೋ ಮೂಢನಂಬಿಕೆ ಬಿತ್ತಿದ್ದಾರೆ. ಇದು ಸುಳ್ಳು. ಎಲ್ಲಾ ಜನಪ್ರತಿನಿಧಿಗಳು ಕೂಡ ಚಾಮರಾಜನಗರಕ್ಕೆ ಭೇಟಿ ಕೊಡಬೇಕು. ಈ ಮೂಲಕ ಒಳ್ಳೆಯ ರೀತಿಯ ಬದಲಾವಣೆಯನ್ನು ಸಮಾಜದಲ್ಲಿ ತರಬೇಕು. ಇಲ್ಲಿನ ಮುಗ್ದ ಜನರ ಮುಖವನ್ನು ನೋಡಿದರೆ ಶಾಪವೂ ಕೂಡ ನಿವಾರಣೆಯಾಗುತ್ತದೆ ಎಂದು ಹೇಳುವ ಮೂಲಕ ಚಾಮರಾಜನಗರಕ್ಕೆ ಭೇಟಿ ನೀಡದ ಹಿಂದಿನ ಮುಖ್ಯಮಂತ್ರಿಗಳಿಗೆ ಟಾಂಗ್ ನೀಡಿದರು.



ನಾನು ಚಾಮರಾಜನಗರಕ್ಕೆ ಮೂರು ಬಾರಿ ಭೇಟಿ ನೀಡಿದ್ದೇನೆ. ಇಲ್ಲಿ ಬಂದ ಮೇಲೆ ರಾಜಕೀಯ ಶಕ್ತಿ ವೃದ್ಧಿಯಾಗಿದೆ. ನನ್ನ ಶಕ್ತಿ ಇಮ್ಮಡಿಯಾಗಿದೆ. ಚಾಮರಾಜನಗರಕ್ಕೆ ಎಷ್ಟು ಬಾರಿ ಕರೆದರೂ ಬರುತ್ತೇನೆ. ಜಿಲ್ಲೆಯ ಅಭಿವೃದ್ಧಿಗಾಗಿ ಏನೇ ಕೇಳಿದರೂ ಸರ್ಕಾರ ಸ್ಪಂದಿಸಲಿದೆ. ನಾನು ಆತ್ಮಸಾಕ್ಷಿಯಾಗಿ ಕೆಲಸ ಮಾಡುತ್ತಿದ್ದೇನೆ. ಜನಶಕ್ತಿ ಗೆಲ್ಲಬೇಕು. ಯಾವ ಟೀಕೆ ಬಂದರೂ ಅಂಜಲ್ಲ, ಅಳುಕಲ್ಲ, ಜಗ್ಗುವುದೂ ಇಲ್ಲ. ಸತ್ಯಮೇವ ಜಯತೆ ಎಂಬುದರಲ್ಲಿ ಬಲವಾದ ನಂಬಿಕೆಯಿದೆ ಎಂದು ಹೇಳಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ