ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನ. 9ರಂದು ಬೆಳಗಾವಿ ಜಿಲ್ಲೆಯ ೩ ಕಡೆ ಬೊಮ್ಮಾಯಿ, ಯಡಿಯೂರಪ್ಪ ಸಭೆ

ಬೆಳಗಾವಿ: ಇಂದಿನಿಂದ ಮತ್ತೆ ಬಿಜೆಪಿ ಜನಸಂಕಲ್ಪಯಾತ್ರೆ ಉಡುಪಿ, ಹಾವೇರಿ, ಬೆಳಗಾವಿ ಜಿಲ್ಲೆಗಳಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಇಂದು ದೆಹಲಿಯಿಂದ ಬೆಂಗಳೂರಿಗೆ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್ ಆಗಮಿಸಲಿದ್ದಾರೆ.

ಇನ್ನು ಎರಡನೇ ಹಂತದ ಜನ ಸಂಪರ್ಕ ಸಭೆ ಬೆಳಗಾವಿ ಜಿಲ್ಲೆಯಲ್ಲಿ 9ರಂದು ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬೆಳಗಾವಿ ಜಿಲ್ಲೆಯ ಮೂರು ಕಡೆಗಳಲ್ಲಿ ಸಭೆ ನಡೆಯಲಿದೆ. ರಾಯಭಾಗಕ್ಕೆ ತೆರಳಿ ಅಲ್ಲಿ ಜನ ಸಂಪರ್ಕ ಸಭೆಯಲ್ಲಿ ಮುಖ್ಯಮಂತ್ರಿ ಭಾಗಿಯಾಗಲಿದ್ದಾರೆ.

ಸಂಜೆ ಖಾನಾಪುರ ಪಟ್ಟಣದಲ್ಲಿ ಸಭೆ ನಡೆಯಲಿದ್ದು ಬಿಜೆಪಿ ನಾಯಕರೆಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಒಂದೇ ದಿನ ಮೂರು ಕಡೆ ಸಭೆ ಮಾಡುವುದರ ಮೂಲಕ ಜಿಲ್ಲೆಯ ಬಿಜೆಪಿ ಕಾರ್ಯಕರ್ತರನ್ನು ಒಗ್ಗೂಡಿಸಿ ಚುನಾವಣೆಯಲ್ಲಿ ಒಗ್ಗಟ್ಟಾಗಿ ಕೆಲಸ ಮಾಡುವಂತೆ ಸಂದೇಶ ನೀಡಲಿದ್ದಾರೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.