LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

BREAKING : ಅಕ್ರಮ ಭ್ರೂಣಲಿಂಗ ಪತ್ತೆ ಹಗರಣ  : ಮೂವರು ವೈದ್ಯರ ಬಂಧನ!

ಮಂಡ್ಯ, ಏಪ್ರಿಲ್ 29 : ಜಿಲ್ಲೆಯ ಕೆ.ಆರ್. ಪೇಟೆಯಲ್ಲಿ ಅಕ್ರಮವಾಗಿ ಭ್ರೂಣಲಿಂಗ ಪತ್ತೆ ನಡೆಸುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದು, ಈ ಸಂಬಂಧ ಮೂವರು ವೈದ್ಯರನ್ನು ಬಂಧಿಸಿದ್ದಾರೆ.

ಕೆ.ಆರ್. ಪೇಟೆಯ ಚೇತನ ಮೆಟರ್ನಿಟಿ ಸೆಂಟರ್‌ನ ದಿವ್ಯ ಚೇತನ್, ನಾವಿ ಡಯಾಗ್ನಾಸ್ಟಿಕ್ ಸೆಂಟರ್‌ನ ಹರ್ಷಿತ್ ಹಾಗೂ ಕುಶಲ್ ಡಯಾಗ್ನಾಸ್ಟಿಕ್ ಸೆಂಟರ್‌ನ ಹರೀಶ ಅವರನ್ನು ಬಂಧಿಸಲಾಗಿದೆ. ಸ್ತ್ರೀರೋಗ ತಜ್ಞೆ ಪ್ರಿಯಾಂಕಾ ತಲೆಮರೆಸಿಕೊಂಡಿದ್ದು, ಅವರಿಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ.

ಸುಮಾರು 31ಕ್ಕೂ ಹೆಚ್ಚು ಅಪ್ರಾಪ್ತ ಗರ್ಭಿಣಿಯರಿಗೆ ಕಾನೂನುಬಾಹಿರವಾಗಿ ಭ್ರೂಣಲಿಂಗ ಪತ್ತೆಗಾಗಿ ಸ್ಕ್ಯಾನಿಂಗ್ ನಡೆಸಿದ ಗಂಭೀರ ಆರೋಪ ಇವರ ಮೇಲಿದೆ. ಅಪ್ರಾಪ್ತ ಹೆಣ್ಣುಮಕ್ಕಳು ಗರ್ಭಿಣಿಯರಾಗಿ ಬಂದ ಸಂದರ್ಭಗಳಲ್ಲಿ ನಿಯಮಾನುಸಾರ ಪೊಲೀಸರಿಗೆ ಮಾಹಿತಿ ನೀಡಬೇಕಾಗಿದ್ದರೂ, ಹಣದ ಆಸೆಗಾಗಿ ವೈದ್ಯರು ವಿಷಯವನ್ನು ಮುಚ್ಚಿಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಉಪಲೋಕಾಯುಕ್ತರ ಆದೇಶದಂತೆ ಮಂಡ್ಯ, ಮೈಸೂರು ಹಾಗೂ ರಾಮನಗರದ ಲೋಕಾಯುಕ್ತ ಪೊಲೀಸರು ಜಂಟಿಯಾಗಿ ದಾಳಿ ನಡೆಸಿದ ವೇಳೆ ಈ ಅಕ್ರಮ ಚಟುವಟಿಕೆ ಬೆಳಕಿಗೆ ಬಂದಿದೆ. ತನಿಖೆಯ ಸಂದರ್ಭದಲ್ಲಿ ಕುಶಲ್ ಡಯಾಗ್ನಾಸ್ಟಿಕ್ ಸೆಂಟರ್‌ನಲ್ಲಿ ಸಾವಿರಾರು ಸ್ಕ್ಯಾನಿಂಗ್ ವರದಿಗಳ ದಾಖಲೆಗಳನ್ನು ಉದ್ದೇಶಪೂರ್ವಕವಾಗಿ ಅಳಿಸಿರುವುದು ಪತ್ತೆಯಾಗಿದೆ.

ಈ ಸಂಬಂಧ ಕೆ.ಆರ್. ಪೇಟೆ ಪಟ್ಟಣ ಮತ್ತು ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಒಟ್ಟು 12 ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಸರ್ಕಾರಿ ವೈದ್ಯರು, ಆಶಾ ಕಾರ್ಯಕರ್ತೆಯರು ಹಾಗೂ ಖಾಸಗಿ ವ್ಯಕ್ತಿಗಳ ವಿರುದ್ಧವೂ ತನಿಖೆ ಮುಂದುವರಿದಿದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಧುಚಂದ್ರದ ಹತ್ಯೆ ಪ್ರಕರಣದಲ್ಲಿ ತಿರುವು ಸೋನಮ್ ರಘುವಂಶಿಗೆ ಜಾಮೀನು, 10 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆBIG NEWS : ರಾಜ್ಯದ ಗ್ರಾಮ ಪಂಚಾಯತಿಗಳ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕಡಿವಾಣ: ಜಿಪಿಎಸ್ ಟ್ರ್ಯಾಕಿಂಗ್ ಶಿಫಾರಸುBREAKING : ಅಕ್ರಮ ಭ್ರೂಣಲಿಂಗ ಪತ್ತೆ ಹಗರಣ  : ಮೂವರು ವೈದ್ಯರ ಬಂಧನ!SHOCKING : ಮದುವೆಯಾಗಲು ಹುಡುಗಿ ಸಿಗದಿದ್ದಕ್ಕೆ ಮನನೊಂದು ಯುವಕನ ಆತ್ಮಹತ್ಯೆ!ರಣಭೀಕರ ಬಿಸಿಲಿಗೆ ರಾಜ್ಯ ತಲ್ಲಣ:ವಿಜಯಪುರದಲ್ಲಿ ಬಿಸಿಲಿನ ಬೇಗೆಗೆ 15 ವರ್ಷದ ಬಾಲಕ ಬಲಿಸಾವಿನ ಪುರಾವೆ ಕೇಳಿದ ಬ್ಯಾಂಕ್‌; ಸಮಾಧಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ವ್ಯಕ್ತಿ!ಯುವತಿಯ ಮೃತದೇಹ ನಗ್ನಾವಸ್ಥೆಯಲ್ಲಿ ಪತ್ತೆ!ರಾಷ್ಟ್ರ ಗೌರವ ಮತ್ತು ರಾಜತಾಂತ್ರಿಕತೆಅಥಣಿ ತಾಲೂಕಿನ ಹಳ್ಳಿಯೊಂದರ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಪ್ರಾರ್ಥನಾ ರಾಜ್ಯಕ್ಕೆ ಪ್ರಥಮಬಸವ ಜಯಂತಿ ಮಹೋತ್ಸವ: 26ರಂದು ಬೆಳಗಾವಿಯಲ್ಲಿ ಬೃಹತ್ ಮೆರವಣಿಗೆ