LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
International News

ಇರಾನ್‌ ಯುದ್ಧದ ಕಾರಣ ಪುತ್ರನ ಮದುವೆಗೂ ಹೋಗಲಾಗುತ್ತಿಲ್ಲ: ಟ್ರಂಪ್‌

ವಾಷಿಂಗ್ಟನ್‌, ಮೇ.22 : ಇರಾನ್‌ ವಿರುದ್ಧದ ಯುದ್ಧ ಸನ್ನಿವೇಶದ ಕಾರಣದಿಂದಾಗಿ ತನ್ನ ಮಗನ ಮದುವೆ ಕಾರ್ಯಕ್ರಮದಲ್ಲೂ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಬೇಸರ ವ್ಯಕ್ತಪಡಿಸಿದ್ದಾರೆ.

48 ವರ್ಷದ ಡೊನಾಲ್ಡ್ ಟ್ರಂಪ್ ಜೂನಿಯರ್‌ ಈ ವಾರಾಂತ್ಯದಲ್ಲಿ ಎರಡನೇ ವಿವಾಹವಾಗಲಿದ್ದು, ಬಹಾಮಾಸ್‌ನಲ್ಲಿ ಬೆಟ್ಟಿನಾ ಆಂಡರ್ಸನ್‌ ಅವರನ್ನು ವರಿಸಲಿದ್ದಾರೆ ಎಂದು ಅಮೆರಿಕದ ಮಾಧ್ಯಮಗಳು ವರದಿ ಮಾಡಿವೆ.

ಇದೇ ವೇಳೆಯಲ್ಲಿ ಇರಾನ್‌ನೊಂದಿಗಿನ ಯುದ್ಧ ಅಂತ್ಯಗೊಳಿಸುವ ಕುರಿತು ಟ್ರಂಪ್‌ ಒಪ್ಪಂದ ರೂಪಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಪುತ್ರನ ಮದುವೆಯಲ್ಲಿ ಪಾಲ್ಗೊಳ್ಳುವಿರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮದುವೆಗೆ ಹಾಜರಾಗಬೇಕೆಂದು ಕುಟುಂಬದವರು ಬಯಸಿದ್ದಾರೆ. ಆದರೆ ಇದು ಖಾಸಗಿ ವಿಷಯವಾಗಿದ್ದು, ಸಾಧ್ಯವಾದರೆ ಹೋಗಲು ಪ್ರಯತ್ನಿಸುತ್ತೇನೆ ಎಂದು ತಿಳಿಸಿದ್ದಾರೆ.

ನಾನು ಅವರಿಗೆ ಈಗ ಸಮಯ ಅನುಕೂಲಕರವಾಗಿಲ್ಲ ಎಂದು ಹೇಳಿದ್ದೇನೆ. ನನ್ನ ಮುಂದೆ ಇರಾನ್‌ ಸೇರಿದಂತೆ ಹಲವು ಗಂಭೀರ ವಿಷಯಗಳಿವೆ. ಯುದ್ಧದಂತಹ ಪರಿಸ್ಥಿತಿಯಲ್ಲಿ ನಾನು ಮದುವೆಗೆ ಹೋದರೆ ಅದನ್ನು ಮಾಧ್ಯಮಗಳು ಹೇಗೆ ಬಿಂಬಿಸುತ್ತವೆ ಎಂಬುದು ನನಗೆ ಗೊತ್ತಿದೆ. ಆದರೂ ಪುತ್ರನ ಮದುವೆ ಚೆನ್ನಾಗಿ ನಡೆಯಲಿ ಎಂಬುದು ನನ್ನ ಆಶಯ ಎಂದು ಟ್ರಂಪ್‌ ಹೇಳಿದ್ದಾರೆ.

ಡೊನಾಲ್ಡ್ ಟ್ರಂಪ್ ಜೂನಿಯರ್‌ ಅವರು ಟ್ರಂಪ್‌ ಕುಟುಂಬದ ಐಷಾರಾಮಿ ರಿಯಲ್‌ ಎಸ್ಟೇಟ್‌ ಸಂಸ್ಥೆಯಲ್ಲಿ ಕಾರ್ಯನಿರ್ವಾಹಕ ಉಪಾಧ್ಯಕ್ಷರಾಗಿದ್ದು, ತಮ್ಮ ತಂದೆಯ ಬಲಪಂಥೀಯ ರಾಜಕೀಯ ನಿಲುವುಗಳ ಪ್ರಮುಖ ಪ್ರತಿಪಾದಕರಾಗಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣಸಮಾಜದ ಜಟಿಲ ಸಮಸ್ಯೆಗಳ ಪರಿಹಾರಕ್ಕೆ ಸಂಘಟನೆಗಳು ಮುಂದಾಗಲಿ: ಡಾ. ಅಲ್ಲಮಪ್ರಭು ಶ್ರೀ