LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Sports News

ಮಹಮುದ ಗವಾನ್ ಮದರಸಾಕ್ಕೆ ನುಗ್ಗಿ ದುರ್ಗಾ ಪೂಜೆ; ೯ ಜನರ ವಿರುದ್ಧ ಪ್ರಕರಣ

ಬೀದರ‌ : ದಸರಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ  ಗುಂಪೊಂದು ೧೪೬೦ರಲ್ಲಿ ನಿರ್ಮಿಸಲಾಗಿರುವ ಪಾರಂಪರಿಕ ಮದರಸಾವೊಂದಕ್ಕೆ ನುಗ್ಗಿ ದುರ್ಗಾ ಪೂಜೆ ಮಾಡಿದ ಘಟನೆ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.



ಈ ಸಂಬಂಧ ಒಂಭತ್ತು ಜನರ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿದ್ದು, ನಾಲ್ವರನ್ನು ಮಾತ್ರ ಬಂಧಿಸಲಾಗಿದೆ. ಬೀದರ‌ನ ಹಲವಾರು ಮುಸ್ಲಿಂ ಸಂಘಟನೆಗಳು ಘಟನೆಯನ್ನು ಖಂಡಿಸಿವೆ. ಎಲ್ಲರನ್ನೂ ಬಂಧಿಸದಿದ್ದರೆ ಪ್ರತಿಭಟನೆ ನಡೆಸುವುದಾಗಿ ಮುಸ್ಲಿಂ ಸಂಘಟನೆಗಳು ಬೆದರಿಕೆ ಹಾಕಿವೆ.



https://twitter.com/asadowaisi/status/1578040642386567174?t=w3VLJX2c2S7c4svMTCZl0A&s=19



1460 ರ ದಶಕದಲ್ಲಿ ನಿರ್ಮಿಸಲಾದ ಬೀದರ‌ನಲ್ಲಿರುವ ಮಹಮುದ ಗವಾನ್ ಮದರಸಾ ಭಾರತೀಯ ಪುರಾತತ್ವ ಸಮೀಕ್ಷೆಯ ಅಡಿಯಲ್ಲಿ ಗೊತ್ತುಪಡಿಸಿದ ಪಾರಂಪರಿಕ ತಾಣವಾಗಿದೆ. ಈ ರಚನೆಯನ್ನು ರಾಷ್ಟ್ರೀಯ ಪ್ರಾಮುಖ್ಯತೆಯ ಸ್ಮಾರಕಗಳಲ್ಲಿ ಪಟ್ಟಿ ಮಾಡಲಾಗಿದೆ.



ಪೂಜೆ ಮಾಡಲು ಒಳಗೆ ಈ ಗುಂಪು ಮದರಸಾದ ಬೀಗ ಒಡೆದು ಒಳಗೆ ನುಗ್ಗಿದೆ. ಇದಕ್ಕೂ ಮುನ್ನ ಮದರಸಾದ ಮೆಟ್ಟಿಲುಗಳ ಮೇಲೆ ನಿಂತು ಅವರು "ಹಿಂದೂ ಧರ್ಮ ಕೀ ಜೈ" ಘೋಷಣೆಗಳನ್ನು ಕೂಗಿದ್ದಾರೆ. ಇದರ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾಗಳಲ್ಲಿ ವೈರಲ್‌ ಆಗುತ್ತಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತೀಶ ಜಾರಕಿಹೊಳಿ, ಆಪ್ತರ ಮನೆಗಳಲ್ಲಿ ಇಡಿ ಶೋಧ ಅಂತ್ಯಸತೀಶ ಜಾರಕಿಹೊಳಿ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ: ಲಕ್ಷ್ಮಿ ಹೆಬ್ಬಾಳಕರಡಿ.ಕೆ. ಶಿವಕುಮಾರ ತಾಯಿಗೆ ನೋಟಿಸ್ ನೀಡಿಲ್ಲಮತ್ತೆ ಗಾಯಗೊಂಡ ಹರ್ಷಿತ ರಾಣಾ: ಅಫ್ಘಾನಿಸ್ತಾನ ಸರಣಿ, ಏಷ್ಯನ್ ಗೇಮ್ಸ್‌ನಿಂದ ಹೊರಕ್ಕೆಎಸ್‌ಐಆರ್‌ ಅಚ್ಚರಿ: ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!14 ವರ್ಷದ ನಿಶುಗೆ ಅತ್ಯಾಚಾರ ಬೆದರಿಕೆ: ತಕ್ಷಣ ರಕ್ಷಣೆಗೆ ಸುಪ್ರೀಂ ಕೋರ್ಟ ಸೂಚನೆ‘ನನ್ನನ್ನು ಪ್ರಚಾರದ ಸಾಧನವಾಗಿ ಬಳಸಲಾಗಿದೆ’: ಭಾರತ ಸರ್ಕಾರದ ವಿರುದ್ಧ ವಿಜಯ ಮಲ್ಯ ಆರೋಪಉಳಿದ ಭರವಸೆಗಳ ಈಡೇರಿಕೆಗೆ ವೇಗ ನೀಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಸಲಹೆಎಸ್‌ಐಆರ್ : ಡಿ.ಕೆ. ಶಿವಕುಮಾರ ತಾಯಿ ಸೇರಿ ಹಲವು ಗಣ್ಯರಿಗೆ ನೋಟಿಸ್ಗರ್ಬಾದಲ್ಲಿ ಮುಸ್ಲಿಮರಿಗೆ ನಿಷೇಧ ಸರಿಯಲ್ಲ; ಸಂವಿಧಾನ ಎಲ್ಲರಿಗೂ ಸಮಾನ ಹಕ್ಕು ನೀಡಿದೆ: ಅಠಾವಳೆ