ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಡಿ.ಕೆ.ಶಿವಕುಮಾರ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.

ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್ ಅವರ ಕನಕಪುರ, ದೊಡ್ಡಆಲಹಳ್ಳಿ, ಸಂತೆ ಕೋಡಿಹಳ್ಳಿ ಮನೆ, ಜಮೀನು ಮತ್ತಿತರರ ಸ್ಥಳಗಳಿಗೆ ತೆರಳಿ ಆಸ್ತಿ-ಪಾಸ್ತಿ ಮತ್ತು ಅದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಸಿಬಿಐ ಅಧಿಕಾರಿಗಳು ಕನಕಪುರ ತಹಶೀಲ್ದಾರ ಹಾಗೂ ಪೋಲೀಸರ ಜತೆಗೆ ತೆರಳಿದ್ದಾರೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.