LIVE TV LocalCrimeNationalInternationalPoliticsFinancialEducationTechnologyEntertainmentSportsHealthFeatureTravelingBeautyRecipes
National News

ದಾಂಡಿಯಾ ನೃತ್ಯದಿಂದ ನವರಾತ್ರಿಗೆ ಮೆರಗು

ಬಣ್ಣಬಣ್ಣದ ಸಾಂಪ್ರದಾಯಿಕ ಉಡುಗೆಗಳಲ್ಲಿ ಮಹಿಳೆಯರ ಸಂಭ್ರಮ

ಅಳ್ನಾವರ, ಅ. 15 (ಸಮದರ್ಶಿ ಸುದ್ದಿ): ಪಟ್ಟಣದಲ್ಲಿ ನವರಾತ್ರಿ ಉತ್ಸವದ ಸಂಭ್ರಮ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ದಾಂಡಿಯಾ ನೃತ್ಯ ಹಬ್ಬದ ಮೆರಗನ್ನು ಇಮ್ಮಡಿಗೊಳಿಸಿದೆ.

ಪಟ್ಟಣದ ಇಂದಿರಾ ನಗರದ ಶ್ರೀ ಅಂಬಾ ಭವಾನಿ ಮಹಿಳಾ ಮಂಡಳಿ ವತಿಯಿಂದ ಗುರುವಾರ ರಾತ್ರಿ ಆಯೋಜಿಸಿದ್ದ ದಾಂಡಿಯಾ ನೃತ್ಯ ಕಾರ್ಯಕ್ರಮದಲ್ಲಿ ಮಹಿಳೆಯರು ಹಾಗೂ ಯುವತಿಯರು ಬಣ್ಣಬಣ್ಣದ ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿ, ಸಂಗೀತದ ಲಯಕ್ಕೆ ಹೆಜ್ಜೆ ಹಾಕಿ ಸಂಭ್ರಮಿಸಿದರು.

ಆಕರ್ಷಕ ಸಂಗೀತ, ವರ್ಣರಂಜಿತ ಉಡುಪುಗಳು ಹಾಗೂ ಸಾಂಪ್ರದಾಯಿಕ ನೃತ್ಯ ಕಾರ್ಯಕ್ರಮಕ್ಕೆ ವಿಶೇಷ ಕಳೆ ತಂದವು. ಯುವಕ-ಯುವತಿಯರು, ಮಹಿಳೆಯರು ಹಾಗೂ ಮಕ್ಕಳು ಉತ್ಸಾಹದಿಂದ ಪಾಲ್ಗೊಂಡು ಹಬ್ಬದ ಸಂತಸ ಹಂಚಿಕೊಂಡರು.

ನವರಾತ್ರಿ ಅಂಗವಾಗಿ ಸಂಜೆ ಶ್ರೀ ಅಂಬಾ ಭವಾನಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಭಕ್ತಿಗೀತೆಗಳ ಗಾಯನ, ಮಂಗಳಾರತಿ ನೆರವೇರಿಸಿ ಭಕ್ತರಿಗೆ ಪ್ರಸಾದ ವಿತರಿಸಲಾಯಿತು.

ಶಕ್ತಿ ದೇವಿಯ ಆರಾಧನೆಯೊಂದಿಗೆ ನಡೆದ ದಾಂಡಿಯಾ ನೃತ್ಯವು ಭಕ್ತಿ ಮತ್ತು ಸಂಭ್ರಮದ ಸಂಗಮವಾಗಿ ಗಮನ ಸೆಳೆಯಿತು. ಸಾಂಪ್ರದಾಯಿಕ ಆಚರಣೆಗಳ ಮೂಲಕ ಸಾಂಸ್ಕೃತಿಕ ಪರಂಪರೆಯನ್ನು ಉಳಿಸುವುದರ ಜತೆಗೆ ಜನರಲ್ಲಿ ಒಗ್ಗಟ್ಟು ಮತ್ತು ಸೌಹಾರ್ದ ಬೆಳೆಸುವ ಸಂದೇಶವನ್ನು ಕಾರ್ಯಕ್ರಮ ಸಾರಿತು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST