LIVE TV LocalCrimeNationalInternationalPoliticsFinancialEducationTechnologyEntertainmentSportsHealthFeatureTravelingBeautyRecipes
State News

ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಕೇಂದ್ರ ಬದ್ಧ: ಪ್ರಲ್ಹಾದ ಜೋಶಿ

ಹುಬ್ಬಳ್ಳಿ, ಅ. 17 (ಸಮದರ್ಶಿ ಸುದ್ದಿ): ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆ ದೊರೆಯಬೇಕು. ಅದೇ ವೇಳೆ ಗ್ರಾಹಕರ ಮೇಲೂ ಹೆಚ್ಚಿನ ಹೊರೆ ಬೀಳಬಾರದು. ಈ ಎರಡೂ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ರೈತರ ಸಮಸ್ಯೆ ಪರಿಹರಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಬ್ಬು ಬೆಳೆಗಾರರ ಸಮಸ್ಯೆಗಳ ಪರಿಶೀಲನೆಗೆ ಸಮಿತಿ ರಚಿಸುವ ಕುರಿತು ದೆಹಲಿಗೆ ಆಗಮಿಸಿದ್ದ ರೈತರೊಂದಿಗೆ ಚರ್ಚಿಸಲಾಗಿತ್ತು. ರೈತರು ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಎರಡು ದಿನಗಳಲ್ಲೇ ಸಮಿತಿ ರಚಿಸಿ, ಆದಷ್ಟು ಬೇಗ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದರು.

ರೈತರು ಸಹಕರಿಸಿದರೆ ನಾಲ್ಕೈದು ದಿನಗಳಲ್ಲಿ ಸಮಿತಿ ಕರ್ನಾಟಕಕ್ಕೆ ಭೇಟಿ ನೀಡಲು ಸಿದ್ಧವಿದೆ. ಕಬ್ಬು ಬೆಳೆಗಾರರು ನಮ್ಮವರೇ ಆಗಿದ್ದು, ಅವರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಎಲ್ಲ ಪ್ರಯತ್ನ ಮಾಡಲಾಗುವುದು. ಹಬ್ಬದ ಹಿನ್ನೆಲೆಯಲ್ಲಿ ರೈತರು ಪ್ರತಿಭಟನೆ ಕೈಬಿಟ್ಟು ಮನೆಗಳಿಗೆ ಮರಳಬೇಕು ಎಂದು ಮನವಿ ಮಾಡಿದರು.

ಕಬ್ಬಿನಿಂದ ಉತ್ಪಾದನೆಯಾಗುವ ಎಥೆನಾಲ್ ಅನ್ನು ಕೇಂದ್ರ ಸರ್ಕಾರ ಖರೀದಿಸುತ್ತಿದೆ. ಆದರೆ, ಇತರ ಮೂಲಗಳಿಂದ ಉತ್ಪಾದನೆಯಾಗುವ ಎಲ್ಲ ಎಥೆನಾಲ್ ಖರೀದಿಸಲು ಸಾಧ್ಯವಿಲ್ಲ. ರೈತರ ಹಿತಾಸಕ್ತಿಯೊಂದಿಗೆ ಗ್ರಾಹಕರ ಹಿತವನ್ನೂ ಕಾಪಾಡಬೇಕಾಗಿದೆ ಎಂದು ಹೇಳಿದರು.

ಕಬ್ಬಿಗೆ ರಾಜ್ಯ ಸಲಹಾ ಬೆಲೆ (ಎಸ್‌ಎಪಿ) ನಿಗದಿಪಡಿಸುವಂತೆ ಕಳೆದ ವರ್ಷವೇ ಮುಖ್ಯಮಂತ್ರಿಗೆ ಮನವಿ ಮಾಡಲಾಗಿತ್ತು. ಕಬ್ಬಿನ ತೂಕ ಹಾಗೂ ಸಕ್ಕರೆ ಇಳುವರಿ ಪ್ರಮಾಣದ ಲೆಕ್ಕಾಚಾರದಲ್ಲಿ ನಡೆಯುವ ವಂಚನೆ ತಡೆಯಲು ಕ್ರಮ ಕೈಗೊಳ್ಳುವಂತೆಯೂ ತಿಳಿಸಲಾಗಿತ್ತು. ಈ ವಿಷಯದಲ್ಲಿ ಕೇಂದ್ರ ಸರ್ಕಾರ ಅಗತ್ಯ ಸಹಕಾರ ನೀಡಲಿದೆ ಎಂದು ಜೋಶಿ ತಿಳಿಸಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST