LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕೇಂದ್ರ–ಸಿಜೆಪಿ ಸಂಧಾನ : ವಿದ್ಯಾರ್ಥಿಗಳ ಹೋರಾಟ ಅಂತ್ಯ

Advertisement

ಹೊಸದಿಲ್ಲಿ, ಜುಲೈ 25: ಕಳೆದ ಹಲವು ದಿನಗಳಿಂದ ದೇಶದ ರಾಜಧಾನಿಯಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದ ವಿದ್ಯಾರ್ಥಿಗಳ ಬೃಹತ್ ಹೋರಾಟಕ್ಕೆ ಕೊನೆಗೂ ತೆರೆಬಿದ್ದಿದೆ. ಕೇಂದ್ರ ಸರ್ಕಾರದ ಹಿರಿಯ ಸಚಿವರೊಂದಿಗೆ ನಡೆದ ನಿರ್ಣಾಯಕ ಸಂಧಾನ ಸಭೆಯಲ್ಲಿ ಪ್ರತಿಭಟನಾಕಾರರು ಮುಂದಿಟ್ಟಿದ್ದ ಪ್ರಮುಖ ಬೇಡಿಕೆಗಳಿಗೆ ಸರ್ಕಾರ ಸಮ್ಮತಿ ಸೂಚಿಸಿದ ಹಿನ್ನೆಲೆಯಲ್ಲಿ, ತಮ್ಮ ಸುದೀರ್ಘ ಹೋರಾಟವನ್ನು ತಕ್ಷಣದಿಂದಲೇ ಹಿಂಪಡೆಯುತ್ತಿರುವುದಾಗಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಘೋಷಿಸಿದೆ.

ಸಂಧಾನ ಸಭೆಯ ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಜೆ.ಪಿ. ನಡ್ಡಾ, ವಿದ್ಯಾರ್ಥಿಗಳ ಮನವಿಗಳಿಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ವಿವಿಧ ಬೇಡಿಕೆಗಳ ಕುರಿತು ನಿರ್ದಿಷ್ಟ ಭರವಸೆಗಳನ್ನು ನೀಡಲಾಗಿದೆ ಎಂದು ಹೇಳಿದರು.

ಪ್ರತಿಭಟನೆಗೆ ಸಂಬಂಧಿಸಿದಂತೆ ದಾಖಲಾದ ಎಲ್ಲ ಎಫ್‌ಐಆರ್‌ಗಳ ಪ್ರತಿಗಳನ್ನು ಪ್ರತಿಭಟನಾಕಾರರಿಗೆ ಒದಗಿಸಲಾಗುವುದು. ಯಾವುದೇ ವಿದ್ಯಾರ್ಥಿಯ ವಿರುದ್ಧ ದಂಡನಾತ್ಮಕ ಅಥವಾ ಪ್ರತೀಕಾರದ ಕ್ರಮ ಕೈಗೊಳ್ಳುವುದಿಲ್ಲ ಎಂದು ಸರ್ಕಾರ ಭರವಸೆ ನೀಡಿದೆ.

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಿಂದ ತೊಂದರೆಗೊಳಗಾದ ವಿದ್ಯಾರ್ಥಿಗಳು ಮತ್ತು ಕುಟುಂಬಗಳಿಗೆ ನಿಯಮಾನುಸಾರ ಗರಿಷ್ಠ ಪ್ರಮಾಣದ ಪರಿಹಾರ ಒದಗಿಸುವ ಬದ್ಧತೆಯನ್ನು ಸರ್ಕಾರ ವ್ಯಕ್ತಪಡಿಸಿದೆ.

ಸಿಜೆಪಿ ಸಲ್ಲಿಸಿರುವ ಐದು ಅಂಶಗಳ ಬೇಡಿಕೆಗಳ ಪಟ್ಟಿಯನ್ನು ಗಂಭೀರವಾಗಿ ಪರಿಶೀಲಿಸಿ, ಅವುಗಳ ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಸಂಧಾನದ ಬಳಿಕ ಮಾತನಾಡಿದ ಸಿಜೆಪಿ ರಾಷ್ಟ್ರೀಯ ವಕ್ತಾರ ಅಶುತೋಷ ರಾಂಕಾ, "ನಾವು ಮುಂದಿಟ್ಟಿದ್ದ ಎಲ್ಲಾ ನ್ಯಾಯಯುತ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ. ಆದ್ದರಿಂದ ಜಂತರ್‌ ಮಂತರ್‌ನಲ್ಲಿ ನೆರೆದಿರುವ ಎಲ್ಲ ವಿದ್ಯಾರ್ಥಿಗಳು ಮತ್ತು ಹೋರಾಟಗಾರರು ತಕ್ಷಣವೇ ಪ್ರತಿಭಟನೆ ಅಂತ್ಯಗೊಳಿಸಿ, ಶಾಂತಿಯುತವಾಗಿ ತಮ್ಮ ಮನೆಗಳಿಗೆ ತೆರಳಬೇಕು. ಮುಂದಿನ ಹಂತದ ಕಾರ್ಯಕ್ರಮಗಳ ಬಗ್ಗೆ ಶೀಘ್ರದಲ್ಲೇ ಮಾಹಿತಿ ನೀಡಲಾಗುವುದು" ಎಂದು ಹೇಳಿದರು.

ಸಭೆಯ ಅಂತ್ಯದಲ್ಲಿ ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಹಾಗೂ ಜಿತೇಂದ್ರ ಸಿಂಗ್ ಅವರು ಸಿಜೆಪಿಯ ಪ್ರಮುಖ ವಕ್ತಾರರಾದ ಸೌರವ ದಾಸ್ ಮತ್ತು ಅಶುತೋಷ ರಾಂಕಾ ಅವರೊಂದಿಗೆ ಹಸ್ತಲಾಘವ ಮಾಡಿ ಸಂಧಾನ ಯಶಸ್ವಿಯಾದುದನ್ನು ಅಧಿಕೃತಗೊಳಿಸಿದರು. ಇದರೊಂದಿಗೆ ದೆಹಲಿಯಲ್ಲಿ ಹಲವು ದಿನಗಳಿಂದ ಉದ್ವಿಗ್ನ ವಾತಾವರಣಕ್ಕೆ ಕಾರಣವಾಗಿದ್ದ ವಿದ್ಯಾರ್ಥಿಗಳ ಪ್ರತಿಭಟನೆಗೆ ಅಂತ್ಯ ಬಿದ್ದಿದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಜಾಪ್ರಭುತ್ವ ಮತ್ತು ವಿದ್ಯಾರ್ಥಿಗಳ ಗೆಲುವು : ವಿಪಕ್ಷಗಳ ಸ್ವಾಗತ'ವಂದೇ ಮಾತರಂ' ಅಪಮಾನಕ್ಕೆ ಶಿಕ್ಷೆ; ರಾಜ್ಯಸಭೆಯಲ್ಲಿ ವಿಧೇಯಕಧರ್ಮೇಂದ್ರ ಪ್ರಧಾನ ರಾಜೀನಾಮೆ ಬಳಿಕ ಜಂತರ್‌ ಮಂತರ್‌ನಲ್ಲಿ ಸಂಭ್ರಮಆರೆಸ್ಸೆಸ್ ಶಿಕ್ಷಣ ವ್ಯವಸ್ಥೆಯನ್ನು ದುರ್ಬಲಗೊಳಿಸಿದೆ: ರಾಹುಲ್ ಗಾಂಧಿಸ್ವಯಂಸೇವಕ ಜುನೈದ ಮನೆ ಮೇಲೆ ಯುಪಿ ಪೊಲೀಸ್ ದಾಳಿಗೆ ಸಿಜೆಪಿ ಖಂಡನೆವಿದ್ಯಾರ್ಥಿಗಳ ಭಾವನೆಗೆ ಗೌರವ ನೀಡಿ ಪ್ರಧಾನ ಸ್ಥಾನತ್ಯಾಗ: ವಿಜಯೇಂದ್ರಧರ್ಮೇಂದ್ರ ಪ್ರಧಾನ ರಾಜೀನಾಮೆ ವಿದ್ಯಾರ್ಥಿ–ಯುವಜನರ ಗೆಲುವು: ಸಿದ್ದರಾಮಯ್ಯಕೇಂದ್ರ–ಸಿಜೆಪಿ ಸಂಧಾನ : ವಿದ್ಯಾರ್ಥಿಗಳ ಹೋರಾಟ ಅಂತ್ಯಇದು ಪ್ರಜಾಪ್ರಭುತ್ವದ ಗೆಲುವು: ಸೋನಮ್ ವಾಂಗ್ಚುಕಮೋದಿ ಸರ್ಕಾರದಲ್ಲಿ ಅಪರೂಪದ ಬೆಳವಣಿಗೆ; ರಾಜೀನಾಮೆ ನೀಡಿದ ಎರಡನೇ ಸಚಿವ ಧರ್ಮೇಂದ್ರ ಪ್ರಧಾನ