LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಚಂದ್ರಚೂಡ ಪ್ರಮಾಣ ವಚನ ಸ್ವೀಕಾರ 

ಹೊಸದಿಲ್ಲಿ: ದೇಶದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಧನಂಜಯ ಯಶವಂತ‌ ಚಂದ್ರಚೂಡ‌ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ.



ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಚಂದ್ರಚೂಡ‌ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಡಿ. ವೈ ಚಂದ್ರಚೂಡ ಅವರು 2024ರ ನವೆಂಬರ್‌ 10ರ ವರೆಗೆ ನ್ಯಾಯಮೂರ್ತಿ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರದಲ್ಲಿ ಇರಲಿದ್ದಾರೆ.



2016 ಮೇ 13ರಂದು ಸುಪ್ರೀಮ ಕೋರ್ಟ‌ನ ನ್ಯಾಯಾಧೀಶರಾಗಿ ಚಂದ್ರಚೂಡ‌ ನೇಮಕವಾಗಿದ್ದರು. ಅದಕ್ಕೂ ಹಿಂದೆ ಅಲಹಾಬಾದ‌ ಹೈಕೋರ್ಟ‌ನ ಮುಖ್ಯ ನ್ಯಾಯಮೂರ್ತಿಯಾಗಿ, ಬಾಂಬೆ ಹೈಕೋರ್ಟ‌ನ ನ್ಯಾಯಮೂರ್ತಿಯಾಗಿ ಅಧಿಕಾರದಲ್ಲಿದ್ದರು.



ದೇಶದ 16ನೇ ಮು‌ಖ್ಯ ನ್ಯಾಯಮೂರ್ತಿಯಾಗಿದ್ದ ನ್ಯಾಯಮೂರ್ತಿ ಯಶವಂತ ವಿಷ್ಣು ಚಂದ್ರಚೂಡ‌ ಅವರ ಪುತ್ರರಾಗಿರುವ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ‌ ಅವರು, 44 ವರ್ಷಗಳ ಬಳಿಕ ತಂದೆ ಅಲಂಕರಿ‌ಸಿದ್ದ ಸ್ಥಾನ‌ವನ್ನು ವಹಿಸಿಕೊಂಡಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹವಳದ ದಿಬ್ಬಗಳ ನಡುವೆ ರಾಹುಲ್ ಸಾಹಸರೂಪಾಯಿ 100 ತಲುಪಿದರೂ ಆತಂಕ ಬೇಡ ಎಂದ ಮೋದಿಯ ಆರ್ಥಿಕ ಸಲಹೆಗಾರ್ತಿ : ವ್ಯಾಪಕ ಟೀಕೆಅಮೂಲ್ಯ ಪರಿಸರ ಸಂಪತ್ತಿಗೆ ಬೆದರಿಕೆ ಒಡ್ಡಿದ ಯೋಜನೆ ಗ್ರೇಟ್ ನಿಕೋಬಾರ್ ಯೋಜನೆಭಿನ್ನಾಭಿಪ್ರಾಯ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದ ಸಿಎಂಖಾತೆ ಹಂಚಿಕೆ ಕಿಡಿ: ಮುನಿಯಪ್ಪ ಅಸಮಾಧಾನ, ಖಾತೆ ವಹಿಸಿಕೊಳ್ಳಲು ನಿರಾಕರಣೆಗುಂಡಿನ ದಾಳಿಗೆ ನಲುಗಿದ ಮಣಿಪುರ : ಮೂವರು ನಾಗರಿಕರ ಹತ್ಯೆ, 7 ಮನೆಗಳಿಗೆ ಬೆಂಕಿ ರೆಪೊ ದರದಲ್ಲಿ ಬದಲಾವಣೆ ಇಲ್ಲಖಾತೆ ಹಂಚಿಕೆ ಬಗ್ಗೆ ಅಸಮಾಧಾನ; ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿಖಾತೆಗಳ ಹಂಚಿಕೆ ಕಸರತ್ತು ಪೂರ್ಣ, ಯಾರಿಗೆ ಯಾವ ಖಾತೆ? ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆ