LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಸ್ಟಾಲಿನ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ವಿಜಯ

 

ಚೆನ್ನೈ, ಮೇ 11 : ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ ಅವರು ಸೋಮವಾರ ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ಅವರನ್ನು ಚೆನ್ನೈನ ಅಲ್ವಾರ್‌ಪೇಟೆಯಲ್ಲಿರುವ ನಿವಾಸದಲ್ಲಿ ಭೇಟಿ ಮಾಡಿದರು.

ಇತ್ತೀಚಿನ ವಿಧಾನಸಭಾ ಚುನಾವಣೆಯ ಬಳಿಕ ಇಬ್ಬರು ನಾಯಕರು ಮೊದಲ ಬಾರಿಗೆ ಮುಖಾಮುಖಿಯಾಗಿರುವುದು ರಾಜಕೀಯ ವಲಯದಲ್ಲಿ ಗಮನಸೆಳೆದಿದೆ.

ಎಪ್ರಿಲ್ 23ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ವಿಜಯ್ ಅವರು ಸ್ಟಾಲಿನ್ ಅವರನ್ನು ಭೇಟಿಯಾಗಿದ್ದಾರೆ. ಸೋಮವಾರ ನಡೆದ ಮೊದಲ ವಿಧಾನಸಭಾ ಅಧಿವೇಶನದ ಬಳಿಕ ಈ ಭೇಟಿ ನಡೆಯಿತು.

ವಿಜಯ್ ಅವರು ಸ್ಟಾಲಿನ್ ನಿವಾಸಕ್ಕೆ ಆಗಮಿಸಿದ ವೇಳೆ ಮಾಜಿ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಆತ್ಮೀಯವಾಗಿ ಸ್ವಾಗತಿಸಿದರು. ಬಳಿಕ ಎಂ.ಕೆ. ಸ್ಟಾಲಿನ್ ಕೂಡ ವಿಜಯ್ ಅವರನ್ನು ಬರಮಾಡಿಕೊಂಡು ಅಪ್ಪಿಕೊಂಡರು.

ಭೇಟಿಯ ವೇಳೆ ಇಬ್ಬರು ನಾಯಕರು ಹೂಗುಚ್ಛ ವಿನಿಮಯ ಮಾಡಿಕೊಂಡು ಪರಸ್ಪರ ರೇಷ್ಮೆ ಶಾಲು ಹೊದಿಸಿ ಗೌರವ ಸೂಚಿಸಿದರು. ಸಭೆಯಲ್ಲಿ ಸೌಹಾರ್ದಯುತ ಮಾತುಕತೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಮತ್ತು ವಿಜಯ ನೇತೃತ್ವದ ಟಿವಿಕೆ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಚುನಾವಣೆಯಲ್ಲಿ ಡಿಎಂಕೆ ಜಯ ಸಾಧಿಸಿತ್ತು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯ ಸರ್ಕಾರದ ವೈಫಲ್ಯ ಬಯಲಿಗೆಳೆಯಲು ಸೆ. 1ರಿಂದ ಬಿಜೆಪಿ ಪಾದಯಾತ್ರೆ: ವಿಜಯೇಂದ್ರಜನರ ಆರೋಗ್ಯಕ್ಕಿಂತ ಆಹಾರ ಕಂಪನಿಗಳ ಲಾಬಿ ಮೇಲು! ‘ರೆಡ್‌ ಅಲರ್ಟ್‌’ ಲೇಬಲ್‌ ಪ್ರಸ್ತಾವದಿಂದ ಹಿಂದೆ ಸರಿದ ಸರ್ಕಾರಎಸ್‌ಐಆರ್‌ ಕರಡು ಪಟ್ಟಿಗೆ ನಾಗರಿಕ ಸಂಘಟನೆಗಳ ವಿರೋಧ; ಸೆಪ್ಟೆಂಬರ್‌ 1ರಂದು ಚುನಾವಣಾ ಆಯೋಗ ಚಲೋಅವಧಿ ಮೀರಿದ ಚಾಕೊಲೇಟ್‌ಗಾಗಿ ಕಸದ ರಾಶಿಗೆ ಮುಗಿಬಿದ್ದ ಜನ; ವಿಡಿಯೊ ವೈರಲ್ಅತ್ಯಾಚಾರಿ ಗುರ್ಮೀತ್ ಸಿಂಗ್‌ಗೆ ಮತ್ತೆ ಪೆರೋಲ್; 17ನೇ ಬಾರಿ ಜೈಲಿನಿಂದ ಹೊರಗೆಆಹಾರ ಧಾನ್ಯವನ್ನು ಕಡಿಮೆ ದರದಲ್ಲಿ ನೀಡಿ ಎಥೆನಾಲ್‌ ಖರೀದಿ: ಕೇಂದ್ರದ ವಿಚಿತ್ರ ನೀತಿಗೆ ಪ್ರಿಯಾಂಕ್‌ ಖರ್ಗೆ ಪ್ರಶ್ನೆಪಾಟ್ನಾದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ: ಪೊಲೀಸರೊಂದಿಗೆ ಘರ್ಷಣೆಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ ‘ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್’ ಸೀರತ್ ಅಭಿಯಾನದೆಹಲಿಯಲ್ಲಿ ರಸ್ತೆ ಅಪಘಾತ: ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಸೇರಿ ಆರು ಮಂದಿಗೆ ಗಾಯಶಾಲೆ ಸರಿಪಡಿಸುವ ಹೋರಾಟಕ್ಕೆ ಹಿಂಸೆಯ ಉತ್ತರ! ರಾಜಸ್ಥಾನದಲ್ಲಿ ಸಿಜೆಪಿ ತಂಡದ ಮೇಲೆ ದಾಳಿ