LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಸಿಜೆಪಿ ಪ್ರತಿಭಟನೆ ತೀವ್ರ; ಅಮಿತ್ ಶಾ ಭೇಟಿಯಾದ ಧರ್ಮೇಂದ್ರ ಪ್ರಧಾನ

ಹೊಸದಿಲ್ಲಿ, ಜುಲೈ 20: ನೀಟ್–ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿನ ಅಕ್ರಮಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಸೋಮವಾರ ಮಹತ್ವದ ಮಾತುಕತೆ ನಡೆಸಿದರು.

ಸಂಸತ್ ಭವನ ಸಂಕೀರ್ಣದಲ್ಲಿರುವ ಅಮಿತ್ ಶಾ ಅವರ ಕಚೇರಿಯಲ್ಲಿ ಈ ಭೇಟಿ ನಡೆದಿದ್ದು, ಯಾವ ವಿಷಯದ ಕುರಿತು ಚರ್ಚೆಯಾಯಿತು ಎಂಬ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ನೀಟ್–ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ನೈತಿಕ ಹೊಣೆ ಹೊತ್ತು ಧರ್ಮೇಂದ್ರ ಪ್ರಧಾನ ಅವರು ರಾಜೀನಾಮೆ ನೀಡಬೇಕು ಅಥವಾ ಅವರನ್ನು ವಜಾಗೊಳಿಸಬೇಕು ಎಂದು ಸಿಜೆಪಿ ಆಗ್ರಹಿಸುತ್ತಿದೆ.

ಜೂನ್ 20ರಿಂದ ಹೊಸದಿಲ್ಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾದ ಹಿನ್ನೆಲೆಯಲ್ಲಿ ಸೋಮವಾರ 'ಸಂಸತ್ ಚಲೋ' ಪ್ರತಿಭಟನೆಯನ್ನೂ ಹಮ್ಮಿಕೊಳ್ಳಲಾಗಿದೆ.

ಈ ನಡುವೆ, ಪ್ರತಿಭಟನಾಕಾರರೊಂದಿಗೆ ಸಂವಾದ ನಡೆಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಕೇಂದ್ರ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಸಿಜೆಪಿ ವಕ್ತಾರರಾದ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಅವರೊಂದಿಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದಾರೆ. ಸಭೆಯಲ್ಲಿ ಪ್ರತಿಭಟನಾಕಾರರ ಪ್ರಮುಖ ಬೇಡಿಕೆಗಳ ಕುರಿತು ಚರ್ಚೆ ನಡೆದಿದ್ದು, ಸೂಕ್ತ ಮಟ್ಟದಲ್ಲಿ ಪರಿಶೀಲನೆ ನಡೆಸುವುದಾಗಿ ನಡ್ಡಾ ಭರವಸೆ ನೀಡಿರುವುದಾಗಿ ಸಿಜೆಪಿ ತಿಳಿಸಿದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST