LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಶಾಲಾ ಮಕ್ಕಳ ಬ್ಯಾಗ್ ಗಳಲ್ಲಿ ಕಾಂಡೋಮ್, ಗರ್ಭ ನಿರೋಧಕ ಮಾತ್ರೆ, ಮದ್ಯ ಪತ್ತೆ 

ಬೆಂಗಳೂರು: ವಿವಿಧ ಶಾಲೆಗಳ ಮಕ್ಕಳ ಬ್ಯಾಗ್​ಗಳಲ್ಲಿ ಹಲವು ಆಘಾತಕಾರಿ ವಸ್ತುಗಳಿರುವುದು ಬೆಳಕಿಗೆ ಬಂದಿದ್ದು, ಶಾಲಾ ಸಿಬ್ಬಂದಿಯಲ್ಲಿ ಆಘಾತ ಉಂಟು ಮಾಡಿದೆ.



ಮಕ್ಕಳ ಏಕಾಗ್ರತೆ ಮತ್ತು ಕಲಿಕೆಗೆ ಸ್ಮಾರ್ಟ್​ಫೋನ್​ಗಳಿಂದ ಭಂಗ ಬರುತ್ತಿದೆ. ಇದೇ ಕಾರಣಕ್ಕೆ ಶಾಲೆಗಳಿಗೆ ಸ್ಮಾರ್ಟ ​ಫೋನ್ ತರುವಂತಿಲ್ಲ ಎಂಬ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮುಂದಾಗಿರುವ ಹಲವು ಶಾಲೆಗಳಲ್ಲಿ ವಿದ್ಯಾರ್ಥಿಗಳ  ಬ್ಯಾಗ್​ಗಳನ್ನು ತಪಾಸಣೆಗೆ ಒಳಪಡಿಸುತ್ತಿವೆ. ಈ ವೇಳೆ ಕೆಲ ಮಕ್ಕಳ ಬ್ಯಾಗ್​ಗಳಲ್ಲಿ ಸ್ಮಾರ್ಟ್​ಫೋನ್​ಗಳು, ಜೊತೆಗೆ ಕಾಂಡೋಮ್​ಗಳು, ಗರ್ಭನಿರೋಧಕ ಮಾತ್ರೆಗಳು, ಲೈಟರ್​ಗಳು, ಸಿಗರೇಟ್​ಗಳು, ಮತ್ತೇರಿಸುವ ವಾಸನೆ ಹೊಂದಿರುವ ವೈಟ್​ನರ್​ಗಳು ಮತ್ತು ಹೆಚ್ಚಿನ ಮೊತ್ತದ ನಗದು ಪತ್ತೆಯಾಗಿವೆ.



ಈ ಬೆಳವಣಿಗೆಯು ಹಲವು ಶಾಲೆಗಳ ಬೋಧಕ ಸಿಬ್ಬಂದಿಯಲ್ಲಿ ಆಘಾತ ಉಂಟು ಮಾಡಿದೆ. ತರಗತಿಗೆ ವಿದ್ಯಾರ್ಥಿಗಳು ಮೊಬೈಲ್ ಫೋನ್ ತರುತ್ತಾರೆ, ಅದರಿಂದ ಕಿರಿಕಿರಿ ಆಗುತ್ತಿದೆ ಎಂದು ಶಿಕ್ಷಕರು ಇತ್ತೀಚೆಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ವಿದ್ಯಾರ್ಥಿಗಳ ಬ್ಯಾಗ್ ಗಳನ್ನು ಪರಿಶೀಲಿಸುವಂತೆ ಕರ್ನಾಟಕ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ ತನ್ನ ಸದಸ್ಯ ಶಾಲೆಗಳಿಗೆ ಸೂಚಿಸಿತ್ತು.



ಪ್ರೌಢಶಾಲೆಗಳ 8, 9 ಮತ್ತು 10ನೇ ತರಗತಿಯ ಕೆಲ ವಿದ್ಯಾರ್ಥಿಗಳ ಬ್ಯಾಗ್ ಗಳಲ್ಲಿ ಕಾಂಡೋಮ್ ಗಳು, ಗರ್ಭ ನಿರೋಧಕ ಮಾತ್ರೆಗಳು, ಸಿಗರೇಟಗಳು, ವೈಟನರ್ ಮುಂತಾದ ವಸ್ತುಗಳು ಸಿಕ್ಕಿವೆ. ಓರ್ವ ವಿದ್ಯಾರ್ಥಿಯ ನೀರಿನ ಬಾಟಲಿಯಲ್ಲಿ ಸಾರಾಯಿ ಪತ್ತೆಯಾಗಿದೆ.



ಈ ವಿಷಯವನ್ನು ಈಗಾಗಲೇ ಶಿಕ್ಷಕರು ಸಂಬಂಧಪಟ್ಟ ಪಾಲಕರಿಗೆ ತಿಳಿಸಿದ್ದಾರೆ. ತಪ್ಪಿತಸ್ಥ ವಿದ್ಯಾರ್ಥಿಗಳನ್ನು ಶಾಲೆಯಿಂದ ಹೊರಹಾಕುವ ಬದಲು ಅವರಿಗೆ ಕೌನ್ಸಲಿಂಗ್ ಕೊಡಿಸಲು ಶಾಲೆ ಆಡಳಿತ ಮಂಡಳಿ ಮತ್ತು ಪಾಲಕರು ಮುಂದಾಗಿದ್ದಾರೆ.



10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳ ಬ್ಯಾಗ್ ನಲ್ಲಿ ಕಾಂಡೋಮ್ ಸಿಕ್ಕಿದೆ. ಶಿಕ್ಷಕರು ಕೇಳಿದಾಗ, ಇದು ನನ್ನದಲ್ಲ, ಫ್ರೆಂಡ್ ದು ಎಂದು ಕುಂಟು ನೆಪ ಹೇಳಿದ್ದಾಳೆ. ಈ ವಿಷಯವನ್ನು ಕಾಮ್ಸ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ ಧೃಢಪಡಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣಸಮಾಜದ ಜಟಿಲ ಸಮಸ್ಯೆಗಳ ಪರಿಹಾರಕ್ಕೆ ಸಂಘಟನೆಗಳು ಮುಂದಾಗಲಿ: ಡಾ. ಅಲ್ಲಮಪ್ರಭು ಶ್ರೀ