ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮತದಾರರ ಪಟ್ಟಿ ದುರುಪಯೋಗ ಪ್ರಕರಣ; ಪೊಲೀಸ ಆಯುಕ್ತರಿಗೆ ದೂರು ನೀಡಿದ ಕಾಂಗ್ರೆಸ್

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ದುರುಪಯೋಗ ಪಡಿಸಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ನಗರ ಪೊಲೀಸ  ಆಯುಕ್ತ ಪ್ರತಾಪ ರೆಡ್ಡಿ ಅವರಿಗೆ ದೂರು ನೀಡಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ ಸುರ್ಜೇವಾಲಾ ಸೇರಿದಂತೆ ರಾಜ್ಯ ಕಾಂಗ್ರೆಸ್ ನಾಯಕರು  ಆಯುಕ್ತರನ್ನು ಭೇಟಿಯಾಗಿ ರಾಜ್ಯ ಬಿಜೆಪಿ ಸರ್ಕಾರದ ಮುಖ್ಯಮಂತ್ರಿ, ಸಚಿವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ರಾಜ್ಯ ಸರ್ಕಾರ ಮತದಾರರ ಹಕ್ಕು ಕಿತ್ತುಕೊಳ್ಳುತ್ತಿದೆ. ಮತದಾರರ ಪಟ್ಟಿ ಪರಿಷ್ಕರಣೆ ನೆಪದಲ್ಲಿ ಮತದಾರರ ಖಾಸಗಿ ಮಾಹಿತಿಗಳನ್ನು ಸಂಗ್ರಹಿಸಿ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಮತದಾರರ ಪಟ್ಟಿಯಿಂದ ಈಗಾಗಲೇ 6000 ಹೆಸರನ್ನೇ ಡಿಲಿಟ್ ಮಾಡಲಾಗಿದೆ. ಎರಡು ಖಾಸಗಿ ಸಂಸ್ಥೆಗಳ ಮೂಲಕ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ದೂರು ನೀಡಿದ್ದಾರೆ.

ಆಯುಕ್ತರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ ಅವರು, ವೋಟರ್ ಐಡಿ ಅಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರು ಸೇರಿದಂತೆ ಎಲ್ಲರನ್ನು ಬಂಧಿಸಬೇಕು. ಅಕ್ರಮದ ಹೊಣೆ ಹೊತ್ತು ಮೊದಲು ಮುಖ್ಯಮಂತ್ರಿ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.

ಕಾನೂನು ಪ್ರಕಾರ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಆಯುಕ್ತರು ಹೇಳಿದ್ದಾರೆ. ಮುಖ್ಯಮಂತ್ರಿ, ಸಚಿವರು, ಶಾಸಕರನ್ನು ಬಂಧಿಸಬಾರದು ಅಂತ ಇದೆಯಾ? ಮೊದಲು ಕ್ರಮ ಜರುಗಿಸಲಿ ಎಂದು ಒತ್ತಾಯಿಸಿದರು.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.