LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಎಸ್‌ಐಆರ್ ಕುರಿತು ಕಾಂಗ್ರೆಸ್ ಆರೋಪಗಳಲ್ಲಿ ಹುರುಳಿಲ್ಲ: ಅಶ್ವತ್ಥನಾರಾಯಣ

ಬೆಳಗಾವಿ, ಅ.28: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಕಾನೂನುಬದ್ಧವಾಗಿ ನಡೆದಿದ್ದು, ಈ ಕುರಿತು ಕಾಂಗ್ರೆಸ್ ಮಾಡುತ್ತಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ ಎಂದು ಬಿಜೆಪಿ ಶಾಸಕ ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯುನ್ಮಾನ ಮತಯಂತ್ರ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಚುನಾವಣೆಗೆ ಸಂಬಂಧಿಸಿದ ಪ್ರತಿಯೊಂದು ವಿಷಯದಲ್ಲೂ ಕಾಂಗ್ರೆಸ್ ನಿರಂತರವಾಗಿ ಆರೋಪ ಮಾಡುತ್ತಿದೆ. ಪ್ರತಿ ಚುನಾವಣೆಯಲ್ಲೂ ಅಕ್ರಮ ನಡೆದಿದೆ ಎಂದು ದೂರುವ ಕಾಂಗ್ರೆಸ್ ನಾಯಕರು, ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದಿದ್ದು ಹೇಗೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಪ್ರಶ್ನಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ಜನರಲ್ಲಿ ಅಪನಂಬಿಕೆ ಮೂಡಿಸಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಇದನ್ನು ವಿರೋಧಿಸಿ ಬಿಜೆಪಿ ‘ಪ್ರಜಾಪ್ರಭುತ್ವವನ್ನು ಉಳಿಸಿ, ಅರಾಜಕತೆಯನ್ನು ಅಳಿಸಿ’ ಎಂಬ ಅಭಿಯಾನ ಹಮ್ಮಿಕೊಂಡಿದೆ ಎಂದು ತಿಳಿಸಿದರು.

ಹಿಂದಿನ ವಿಧಾನಪರಿಷತ್ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಿದ್ದ ಕಾಂಗ್ರೆಸ್ ಈಗ ಜನಬೆಂಬಲ ಕಳೆದುಕೊಳ್ಳುತ್ತಿದೆ. ರಾಜ್ಯ ಸರ್ಕಾರ ಆಂತರಿಕ ಅಧಿಕಾರ ಸಂಘರ್ಷದಲ್ಲಿ ಮುಳುಗಿದ್ದು, ಜನಪರ ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಟೀಕಿಸಿದರು.

ರಾಜ್ಯಸಭೆಯ ಮಾಜಿ ಸದಸ್ಯ ಈರಣ್ಣ ಕಡಾಡಿ ಮಾತನಾಡಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಚನ್ನಮ್ಮನ ಕಿತ್ತೂರು ಹಾಗೂ ಬೆಳಗಾವಿಯಲ್ಲಿ ಸಭೆ ನಡೆಸಿ ಕಬ್ಬು ಬೆಳೆಗಾರರ ಕಣ್ಣೊರೆಸುವ ಪ್ರಯತ್ನ ಮಾಡಿದ್ದಾರೆ. ಕಬ್ಬಿಗೆ ರಾಜ್ಯ ಸಲಹಾ ಬೆಲೆ (ಎಸ್‌ಎಪಿ) ಘೋಷಿಸದೆ ರೈತರನ್ನು ನಿರಾಸೆಗೊಳಿಸಿದ್ದಾರೆ ಎಂದು ಆರೋಪಿಸಿದರು.

ಮಾಜಿ ಶಾಸಕ ಸಂಜಯ ಪಾಟೀಲ, ಬಿಜೆಪಿ ಮುಖಂಡರಾದ ಡಾ. ರವಿ ಪಾಟೀಲ, ಗೀತಾ ಸುತಾರ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಸಾಧಿಸಿದ ಯಶಸ್ಸಿನ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಬೆಳಗಾವಿಯಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಿತ್ತೂರು ಬಳಿ ಭೀಕರ ರಸ್ತೆ ಅಪಘಾತ: ಪತಿ, ಪತ್ನಿ ಹಾಗೂ ಅಳಿಯನ ದುರ್ಮರಣಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಶೂನ್ಯ: ಪ್ರಧಾನಿ ಮೋದಿ ವ್ಯಂಗ್ಯಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ.3ರಷ್ಟು ಹೆಚ್ಚಳ20 ನಿಮಿಷಗಳಲ್ಲಿ ಅಂಬ್ಯುಲೆನ್ಸ್ ತಲುಪದಿದ್ದರೆ ದಂಡ; ಪ್ರತಿ ತಾಲೂಕಿನಲ್ಲಿ 5 ಹಾಸಿಗೆಗಳ ತೀವ್ರ ನಿಗಾ ಘಟಕಪರಿಷತ್ ಚುನಾವಣೆ ಸೋಲು: ಅಧ್ಯಯನ ಮಾಡಿ ತಪ್ಪು ಸರಿಪಡಿಸಿಕೊಳ್ಳುತ್ತೇವೆಸಹಕಾರಿ ಸಂಘಗಳ ಲೆಕ್ಕಪರಿಶೋಧನೆಗೆ 6 ತಿಂಗಳ ಡಿಪ್ಲೊಮಾ ಕೋರ್ಸಎಸ್‌ಐಆರ್ ಕುರಿತು ಕಾಂಗ್ರೆಸ್ ಆರೋಪಗಳಲ್ಲಿ ಹುರುಳಿಲ್ಲ: ಅಶ್ವತ್ಥನಾರಾಯಣಸಕ್ಕರೆ ಎಂಎಸ್‌ಪಿ ಹೆಚ್ಚಳಕ್ಕೆ ಆಗ್ರಹಿಸಿ ಗೋದಾಮುಗಳಿಗೆ ಬೀಗಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರ