ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ 

ಹೊಸದಿಲ್ಲಿ: ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದೆ. ಮಲ್ಲಿಕಾರ್ಜುನ ಖರ್ಗೆ ಮತ್ತು ಸಂಸದ ಶಶಿ ತರೂರ ನಡುವೆ ನೇರ ಹಣಾಹಣಿ ಇದೆ.

20 ವರ್ಷಗಳ ನಂತರ ಮೊದಲ ಬಾರಿಗೆ ಕಾಂಗ್ರೆಸ್ ಗಾಂಧಿಯೇತರ ಅಧ್ಯಕ್ಷನನ್ನು ಹೊಂದಲು ಸಜ್ಜಾಗಿದ್ದು ಬೆಳಗ್ಗೆ 10 ಗಂಟೆಯಿಂದ ಸಂಜೆ 4ರ ತನಕ ಮತದಾನ ನಡೆಯಲಿದೆ. ಅಕ್ಟೋಬರ 19ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಕರ್ನಾಟಕದವರೇ ಆದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇರಳದ ಸಂಸದ ಶಶಿ ತರೂರ್ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಸುಮಾರು 9000 ಕ್ಕೂ ಅಧಿಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರತಿನಿಧಿಗಳು ಮತ ಚಲಾವಣೆ ಮಾಡುವ ಅರ್ಹತೆ ಪಡೆದುಕೊಂಡಿದ್ದಾರೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.