LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ನೀಟ್ ಅಕ್ರಮ, ನಿರುದ್ಯೋಗ ವಿರುದ್ಧ ಕಾಂಗ್ರೆಸ್ ರಣಕಹಳೆ: ರಾಹುಲ್ ನೇತೃತ್ವದಲ್ಲಿ ವಿದ್ಯಾರ್ಥಿ ಸಮಾವೇಶ

ಹೊಸದಿಲ್ಲಿ, ಜೂನ್ 13 : ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳು ಹಾಗೂ ನಿರುದ್ಯೋಗದ ವಿರುದ್ಧ ಕಾಂಗ್ರೆಸ್ ರಾಷ್ಟ್ರವ್ಯಾಪಿ ಅಭಿಯಾನ ಆರಂಭಿಸಲು ತೀರ್ಮಾನಿಸಿದ್ದು, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಮುಂದಿನ ಒಂದು ತಿಂಗಳ ಅವಧಿಯಲ್ಲಿ ನಾಲ್ಕು ವಿದ್ಯಾರ್ಥಿ ಸಮಾವೇಶಗಳನ್ನು ಆಯೋಜಿಸಲಿದೆ.

ಮೊದಲ ವಿದ್ಯಾರ್ಥಿ ಸಮಾವೇಶವು ಜೂನ್ 17ರಂದು ದೇಶದ ಪ್ರವೇಶ ಪರೀಕ್ಷಾ ತರಬೇತಿ ಕೇಂದ್ರಗಳ ಪ್ರಮುಖ ತಾಣವಾದ ರಾಜಸ್ಥಾನದ ಕೋಟಾದಲ್ಲಿ ನಡೆಯಲಿದೆ. ಜೂನ್ 11ರಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಭಿಯಾನದ ಮೂಲಕ ನೀಟ್ ಪರೀಕ್ಷೆಯ ವಿಕೇಂದ್ರೀಕರಣ, ಪರೀಕ್ಷಾ ಶುಲ್ಕ ರದ್ದು, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಡಲು ಕಾಂಗ್ರೆಸ್ ಮುಂದಾಗಿದೆ.

ಈ ಕುರಿತು ಮಾಹಿತಿ ನೀಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ, ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳು, ನಿರುದ್ಯೋಗ ಹಾಗೂ ಮೋದಿ ಸರ್ಕಾರದಿಂದ ಯುವಕರಿಗೆ ಆಗುತ್ತಿರುವ ವ್ಯವಸ್ಥಿತ ದ್ರೋಹದ ವಿರುದ್ಧ ಈ ಅಭಿಯಾನ ಕೇಂದ್ರೀಕೃತವಾಗಲಿದೆ ಎಂದು ಹೇಳಿದರು.

ಪ್ರಶ್ನೆಪತ್ರಿಕೆ ಸೋರಿಕೆ, ಹೆಚ್ಚುತ್ತಿರುವ ಪರೀಕ್ಷಾ ವೆಚ್ಚ ಹಾಗೂ ಪಾರದರ್ಶಕ ನೇಮಕಾತಿ ಮತ್ತು ಶಿಕ್ಷಣ ವ್ಯವಸ್ಥೆ ಕಲ್ಪಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂಬುದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಅಭಿಯಾನ ಮಾಡಲಿದೆ ಎಂದು ಅವರು ತಿಳಿಸಿದರು. ಅಭಿಯಾನದ ಭಾಗವಾಗಿ ಎನ್‌ಎಸ್‌ಯುಐ, ಯುವ ಕಾಂಗ್ರೆಸ್ ಹಾಗೂ ರಾಜ್ಯ, ಜಿಲ್ಲಾ ಮತ್ತು ಸ್ಥಳೀಯ ಘಟಕಗಳ ಮೂಲಕ ವಿದ್ಯಾರ್ಥಿಗಳನ್ನು ಸಂಘಟಿಸಲು ರಾಹುಲ್ ಗಾಂಧಿ ಕರೆ ನೀಡಿದ್ದಾರೆ ಎಂದು ಹೇಳಿದರು.

ಜುಲೈ 10ರಂದು ಅಲಹಾಬಾದ, ಜುಲೈ 11ರಂದು ಪಾಟ್ನಾ ಹಾಗೂ ಜುಲೈ 14ರಂದು ಹೊಸದಿಲ್ಲಿಯಲ್ಲಿ ವಿದ್ಯಾರ್ಥಿ ಸಮಾವೇಶಗಳು ನಡೆಯಲಿವೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅನುಭವಿಗಳಿಂದ ಹೊಸ ಮುಖಗಳವರೆಗೆ: ಸಚಿವ ಸಂಪುಟ ಸೇರಿದ 19 ಶಾಸಕರ ರಾಜಕೀಯ ಪಯಣಮಳೆ ಅಬ್ಬರಕ್ಕೆ ರಾಜ್ಯ ತತ್ತರ : ಜಲಾಶಯಗಳು ಭರ್ತಿ, ನದಿ-ಹಳ್ಳಗಳು ಅಪಾಯದ ಮಟ್ಟಕ್ಕೆಸಂಪುಟ ವಿಸ್ತರಣೆಯಲ್ಲೇ ಕೊನೆ ಕ್ಷಣದ ಬದಲಾವಣೆ: 19 ಮಂದಿಗೆ ಮಾತ್ರ ಸ್ಥಾನಕಾಂಗ್ರೆಸ್ ಮೇಲಿನ ನಂಬಿಕೆ ಕುಸಿದಿದೆ : ತನ್ವೀರ ಸೇಠ್ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಮೊದಲ ರಾಜಕೀಯ ಗೆಲುವುಗೋವಾದಲ್ಲಿ ಹೊಸ ಕಟ್ಟುನಿಟ್ಟಿನ ನಿಯಮ: ಈ ತಪ್ಪು ಮಾಡಿದರೆ ₹1 ಲಕ್ಷದವರೆಗೆ ದಂಡಗರ್ಭಪಾತ ಜಾಲದ ಬೆಚ್ಚಿಬೀಳಿಸುವ ಸತ್ಯ: ‘ಗಂಡು ಮಗು’ ಔಷಧಿ ಹೆಸರಿನಲ್ಲಿ ವಂಚನೆ"ನಾನೂ ಸಚಿವ ಸ್ಥಾನದಿಂದ ವಂಚಿತನಾಗಿದ್ದೆ": ಅಸಮಾಧಾನಿತ ಶಾಸಕರಿಗೆ ಡಿ.ಕೆ.ಶಿವಕುಮಾರ ಸಮಾಧಾನಡಿ.ಕೆ. ಸಂಪುಟ ವಿಸ್ತರಣೆ : 19 ಸಚಿವರ ಪ್ರಮಾಣ ವಚನ, ಮಹಿಳೆಯರಿಗೆ ಸಿಗಲಿಲ್ಲ ಅವಕಾಶ ರಾಮಮಂದಿರ ದೇಣಿಗೆ ಕಳ್ಳತನ, ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ : ಸಂಸತ್ ಆವರಣದಲ್ಲಿ ವಿರೋಧ ಪಕ್ಷಗಳ ಪ್ರತಿಭಟನೆ