LIVE TV LocalCrimeNationalInternationalPoliticsBusinessFinancialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಕ್ಷೇತ್ರ ಮರುವಿಂಗಡಣೆ: ಡಿಎಂಕೆ ನಿಲುವಿಗೆ ಕಾರ್ತಿ ಪ್ರಶ್ನೆ

ಹೊಸದಿಲ್ಲಿ, ನ. 27: ಈ ಹಿಂದೆ ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ವಿರೋಧಿಸಿದ್ದ ಡಿಎಂಕೆ ಇದೀಗ ಅದನ್ನು ಬೆಂಬಲಿಸಲು ನಿರ್ಧರಿಸಿದರೆ, ತನ್ನ ನಿಲುವು ಬದಲಾವಣೆಗೆ ಕಾರಣವೇನೆಂಬುದನ್ನು ಸ್ಪಷ್ಟಪಡಿಸಬೇಕು ಎಂದು ಕಾಂಗ್ರೆಸ್‌ ನಾಯಕ ಕಾರ್ತಿ ಚಿದಂಬರಂ ಆಗ್ರಹಿಸಿದ್ದಾರೆ.

ನ. 30ರಿಂದ ಆರಂಭವಾಗಲಿರುವ ಸಂಸತ್ತಿನ ವಿಶೇಷ ಅಧಿವೇಶನದ ಹಿನ್ನೆಲೆಯಲ್ಲಿ ಶುಕ್ರವಾರ ಪ್ರತಿಕ್ರಿಯಿಸಿದ ಅವರು, ಮಸೂದೆಯನ್ನು ವಿರೋಧಿಸುತ್ತಿದ್ದ ಡಿಎಂಕೆ ಇದೀಗ ಬೆಂಬಲಿಸಲು ಮುಂದಾದರೆ, ಅಂತಹ ನಿರ್ಧಾರಕ್ಕೆ ಕಾರಣವಾದ ಪರಿಸ್ಥಿತಿಗಳು ಹಾಗೂ ಪರಿಗಣನೆಗಳನ್ನು ಪಕ್ಷವೇ ವಿವರಿಸಬೇಕು ಎಂದು ಹೇಳಿದರು.

‘ನ್ಯಾಯಯುತ ಕ್ಷೇತ್ರ ಮರುವಿಂಗಡಣೆ’ ಎಂಬ ಪರಿಕಲ್ಪನೆಯೇ ತಪ್ಪು ಕಲ್ಪನೆಗೆ ಎಡೆಮಾಡಿಕೊಡುವಂತಿದೆ. ರಾಜ್ಯಗಳ ನಡುವಿನ ಪ್ರಾತಿನಿಧ್ಯದ ಅನುಪಾತವನ್ನು ಯಥಾಸ್ಥಿತಿಯಲ್ಲಿ ಉಳಿಸಿಕೊಂಡರೂ ಒಟ್ಟು ಸ್ಥಾನಗಳ ಸಂಖ್ಯೆಯೂ ಮುಖ್ಯವಾಗುತ್ತದೆ. ಈ ದೃಷ್ಟಿಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯಲ್ಲಿ ರಾಜಕೀಯ ಲಾಭಕ್ಕೆ ಅನುಗುಣವಾಗಿ ಚುನಾವಣಾ ಕ್ಷೇತ್ರಗಳ ಗಡಿಗಳನ್ನು ಮರುರೂಪಿಸುವ ಅಪಾಯವೂ ಇದೆ. ಇದರಿಂದ ಚುನಾವಣಾ ನಕ್ಷೆಯು ಬಿಜೆಪಿಗೆ ಅನುಕೂಲವಾಗುವಂತೆ ಬದಲಾಗಬಹುದು. ವಿಶೇಷವಾಗಿ ಉತ್ತರ ಭಾರತ ಹಾಗೂ ಇತರ ಕೆಲವು ರಾಜ್ಯಗಳಲ್ಲಿ ಬಿಜೆಪಿಗೆ ಹೆಚ್ಚಿನ ಅನುಕೂಲವಾಗುವ ಸಾಧ್ಯತೆಯಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಕ್ಷೇತ್ರ ಮರುವಿಂಗಡಣೆಯು ತಮಿಳುನಾಡಿನ ಮೇಲೆ ನೇರ ಪರಿಣಾಮ ಬೀರದೇ ಇರಬಹುದು. ಆದರೆ ದೇಶದಾದ್ಯಂತ ಅದರ ಪರಿಣಾಮ ಉಂಟಾಗಲಿದ್ದು, ಚುನಾವಣಾ ಫಲಿತಾಂಶಗಳ ಮೇಲೂ ಪ್ರಭಾವ ಬೀರಲಿದೆ ಎಂದು ಕಾರ್ತಿ ಚಿದಂಬರಂ ಹೇಳಿದರು.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST