LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಆನ್‌ಲೈನ್ ರಿಫಂಡ್ ನೆಪದಲ್ಲಿ ಸೈಬರ್ ವಂಚನೆ: ₹1 ಲಕ್ಷ ಫ್ರೀಜ್ ಮಾಡಿದ ಸಿಇಎನ್ ಪೊಲೀಸರು

 

ಬೆಳಗಾವಿ, ಆ. 1: ಆನ್‌ಲೈನ್‌ನಲ್ಲಿ ಖರೀದಿಸಿದ ವಸ್ತುವಿಗೆ ಬದಲಾಗಿ ಬೇರೆ ವಸ್ತು ಬಂದ ಹಿನ್ನೆಲೆಯಲ್ಲಿ ರಿಫಂಡ್ ಪಡೆಯಲು ಮುಂದಾದ ಬೆಳಗಾವಿಯ ವ್ಯಕ್ತಿಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು ₹1 ಲಕ್ಷ ಕಳೆದುಕೊಂಡಿದ್ದು, ತಕ್ಷಣ ಕಾರ್ಯಪ್ರವೃತ್ತರಾದ ಸಿಇಎನ್ ಪೊಲೀಸರು ವಂಚಕರು ವರ್ಗಾಯಿಸಿಕೊಂಡಿದ್ದ ಹಣವನ್ನು ಯಶಸ್ವಿಯಾಗಿ ಫ್ರೀಜ್ ಮಾಡಿದ್ದಾರೆ.

ನಗರದ ಗಣೇಶಪುರ ನಿವಾಸಿಯೊಬ್ಬರು ಆನ್‌ಲೈನ್‌ನಲ್ಲಿ ಖರೀದಿಸಿದ್ದ ವಸ್ತುವಿಗೆ ಬದಲಾಗಿ ಬೇರೆ ವಸ್ತು ಬಂದ ಹಿನ್ನೆಲೆಯಲ್ಲಿ ಕಸ್ಟಮರ್ ಕೇರ್ ಸಂಖ್ಯೆಗೆ ಕರೆ ಮಾಡಿದ್ದರು. ಈ ವೇಳೆ ಕಸ್ಟಮರ್ ಕೇರ್ ಸಿಬ್ಬಂದಿ ಎಂದು ನಂಬಿಕೆ ಮೂಡಿಸಿದ ವಂಚಕರು ರಿಫಂಡ್ ನೀಡುವುದಾಗಿ ಹೇಳಿ ಬ್ಯಾಂಕ್ ಹಾಗೂ ಯುಪಿಐ ಸಂಬಂಧಿತ ಮಾಹಿತಿಯನ್ನು ಪಡೆದು ಅವರ ಖಾತೆಯಿಂದ ₹1 ಲಕ್ಷ ವರ್ಗಾಯಿಸಿಕೊಂಡಿದ್ದರು.

ಈ ಕುರಿತು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ನಗರ ಪೊಲೀಸ್ ಆಯುಕ್ತ ಭೂಷಣ ಬೋರಸೆ, ದೂರು ಬಂದ ತಕ್ಷಣವೇ ಸಿಇಎನ್ ಪೊಲೀಸರು ಅಗತ್ಯ ಕ್ರಮ ಕೈಗೊಂಡು ವಂಚಕರು ವರ್ಗಾಯಿಸಿಕೊಂಡಿದ್ದ ಹಣವನ್ನು ಫ್ರೀಜ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದರು.

ಆನ್‌ಲೈನ್‌ನಲ್ಲಿ ರಿಫಂಡ್, ಕಸ್ಟಮರ್ ಕೇರ್ ಅಥವಾ ಬ್ಯಾಂಕ್ ಹೆಸರಿನಲ್ಲಿ ಬರುವ ಕರೆಗಳನ್ನು ಸಾರ್ವಜನಿಕರು ಅಂಧವಾಗಿ ನಂಬಬಾರದು. ಬ್ಯಾಂಕ್ ವಿವರ, ಒಟಿಪಿ, ಯುಪಿಐ ಪಿನ್ ಅಥವಾ ಸ್ಕ್ರೀನ್ ಹಂಚಿಕೆ ಮಾಡುವಂತೆ ಯಾರಾದರೂ ಕೇಳಿದರೆ ಯಾವುದೇ ಕಾರಣಕ್ಕೂ ಮಾಹಿತಿ ನೀಡಬಾರದು ಎಂದು ಅವರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಡುಹಂದಿಗಳ ದಾಳಿಗೆ ಕಬ್ಬು ಬೆಳೆ ನಾಶಗದ್ದಲದ ನಡುವೆಯೇ ಮುಕ್ತಾಯ ಕಂಡ ಸಂಸತ್ ಅಧಿವೇಶನ: ಚರ್ಚೆಯಿಲ್ಲದೆ 11 ಮಸೂದೆಗಳ ಅಂಗೀಕಾರ300 ಅಡಿ ಕುಸಿದ ವಿಮಾನ, ಪೈಲಟ್ ಗಾಂಜಾ ಸೇವನೆ ಪತ್ತೆ!ಮಾನವ ಹಕ್ಕುಗಳ ಪಾಠ ನಿಲ್ಲಿಸಿ; ಫ್ರಾನ್ಸ್ ವಿರುದ್ಧ ಇರಾನ್ ಕಿಡಿ25 ಬಿಜೆಪಿ ನಾಯಕರು, ಹಿಂದುತ್ವ ಕಾರ್ಯಕರ್ತರ ವಿರುದ್ಧದ ಪ್ರಕರಣ ಹಿಂಪಡೆಯಲು ನ್ಯಾಯಾಲಯದ ಅನುಮತಿ!ದೇಶಕ್ಕೇ ಮಾದರಿಯಾಗುವಂತೆ ಗಣೇಶೋತ್ಸವ ಆಚರಿಸೋಣಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್‌ ರೇವಣ್ಣ ಬಳಿ ಮೊಬೈಲ್‌, ಪೆನ್‌ಡ್ರೈವನಲ್ಲಿ ಅಶ್ಲೀಲ ವಿಡಿಯೋ ಪತ್ತೆ ; ವಿಐಪಿ ಸೆಲ್‌ನಿಂದ ಸಾಮಾನ್ಯ ಬ್ಯಾರಕ್‌ಗೆ ಸ್ಥಳಾಂತರಲಡಾಖ್‌ನ ಲೇಹ್‌ನಲ್ಲಿ 5.5 ತೀವ್ರತೆಯ ಭೂಕಂಪದೇಶಭಕ್ತಿಯ ಸರ್ಟಿಫಿಕೇಟ್ ನೀಡುವ ಮುನ್ನ ಆರ್‌ಎಸ್‌ಎಸ್‌ ತ್ರಿವರ್ಣ ಧ್ವಜದ ಇತಿಹಾಸ ಹೇಳಲಿ: ಪ್ರಿಯಾಂಕ್ ಖರ್ಗೆಖರ್ಗೆ ರ‍್ಯಾಲಿ ನಡೆದ ಸ್ಥಳದಲ್ಲಿ ‘ಶುದ್ಧೀಕರಣ’ ಹವನ; ಬಿಜೆಪಿ–ಕಾಂಗ್ರೆಸ್ ನಡುವೆ ವಾಕ್ಸಮರ