ಹುಕ್ಕೇರಿ, ಮಾ. 24 : ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಸಾಲದ ಒತ್ತಡದಿಂದ ಮನನೊಂದ ಹೊಟೇಲ್ ಮಾಲೀಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ವರದಿಯಾಗಿದೆ.
ಪಟ್ಟಣದ ಹಳೇ ಬಸ್ ನಿಲ್ದಾಣದ ಸಮೀಪ ಹನುಮಾನ್ ಹೊಟೇಲ್ ನಡೆಸುತ್ತಿದ್ದ ರಾಮ ಹಳ್ಳೂರಿ ಮೃತಪಟ್ಟವರು ಎಂದು ತಿಳಿದು ಬಂದಿದೆ. ಕಳೆದ ಕೆಲವು ದಿನಗಳಿಂದ ವಾಣಿಜ್ಯ ಸಿಲಿಂಡರ್ ಲಭ್ಯವಾಗದ ಕಾರಣ ಅವರು ಹೊಟೇಲ್ ಮುಚ್ಚಿದ್ದರು ಎನ್ನಲಾಗಿದೆ.
ಹೊಟೇಲ್ ಮುಚ್ಚಿದ ಪರಿಣಾಮ ಆದಾಯ ಕಡಿಮೆಯಾಗಿ, ಹಣಕಾಸಿನ ವ್ಯವಹಾರಗಳಲ್ಲಿ ತೊಂದರೆ ಉಂಟಾಗಿತ್ತು. ಇದಕ್ಕೆ ಸೇರಿ ಸಾಲದ ಬಡ್ಡಿ ಒತ್ತಡ ಹೆಚ್ಚಾದ ಕಾರಣ ಮನನೊಂದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.