LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

9ನೇ ತರಗತಿ ವಿದ್ಯಾರ್ಥಿಗಳಿಂದ ಹಲ್ಲೆಗೊಳಗಾಗಿದ್ದ 5ನೇ ತರಗತಿ ಬಾಲಕನ ಸಾವು!

ವಿಜಯಪುರ, ೭:  ಇಂದಿನ ಮಕ್ಕಳಿಗೆ, ಯುವಕರಿಗೆ ಏನಾಗಿದೆ ತಿಳಿಯದಾಗಿದೆ.  ವಿಜಯಪುರದ ಯೋಗಾಪುರದ ಶ್ರೀ ಸತ್ಯ ಸಾಯಿಬಾಬಾ ಶಿಕ್ಷಣ ಸಂಸ್ಥೆಯ ಶಾಲೆಯಲ್ಲಿ ಕೈಗಡಿಯಾರದ ವಿವಾದಕ್ಕೆ ಸಂಬಂಧಿಸಿದ ಗಲಾಟೆಯೊಂದರಲ್ಲಿ 5ನೇ ತರಗತಿಯ 11 ವರ್ಷದ ಬಾಲಕ ಅನ್ಸ ಸುನೀಲ ದಾರುಣವಾಗಿ ಸಾವನ್ನಪ್ಪಿದ್ದಾನೆ. 9ನೇ ತರಗತಿಯ ಮೂವರು ವಿದ್ಯಾರ್ಥಿಗಳು ಅನ್ಸ ಮೇಲೆ ತೀವ್ರ ಹಲ್ಲೆ ನಡೆಸಿ, ಆತನ ಕೈಗಡಿಯಾರವನ್ನು ಕಿತ್ತುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.



ಬಿಹಾರ ಮೂಲದ ಸುನೀಲ ಮತ್ತು ಶೃತಿ ದಂಪತಿ ತಮ್ಮ ಮಗ ಅನ್ಸ ಉತ್ತಮ ಶಿಕ್ಷಣ ಪಡೆಯಬೇಕೆಂದು ವಿಜಯಪುರದ ಯೋಗಾಪುರಕ್ಕೆ ಸ್ಥಳಾಂತರಗೊಂಡಿದ್ದರು.  ವಿಜಯಪುರದಲ್ಲಿ ಸುನೀಲ ಪಾನಿಪುರಿ ಮಾರಾಟ ಮಾಡಿ ಕುಟುಂಬವನ್ನು ಪೋಷಿಸುತ್ತ ತಮ್ಮ ಮಗನನ್ನು ವಿಜಯಪುರ ಹೊರಹೊಲಯದ ಶ್ರೀ ಸತ್ಯ ಸಾಯಿಬಾಬಾ ಶಿಕ್ಷಣ ಸಂಸ್ಥೆಯ ಪೂರ್ವ ಪ್ರಾಥಮಿಕ ಮತ್ತು ಪ್ರೌಢ ಶಾಲೆಗೆ ಸೇರಿಸಿದ್ದರು. ಆದರೆ, ಕಳೆದ ಐದು ದಿನಗಳ ಹಿಂದೆ ಶಾಲೆಯಲ್ಲಿ ನಡೆದ ಘಟನೆಯೊಂದರಲ್ಲಿ, ಅನ್ಸ ಧರಿಸಿದ್ದ ಕೈಗಡಿಯಾರದ ವಿಚಾರಕ್ಕೆ 9ನೇ ತರಗತಿಯ ಮೂವರು ವಿದ್ಯಾರ್ಥಿಗಳು ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.



ಹಲ್ಲೆಯಿಂದ ಅಸ್ವಸ್ಥಗೊಂಡ ಬಾಲಕನನ್ನು ಪೋಷಕರು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಐದು ದಿನಗಳ ನಂತರ ಅನ್ಸ ಮೃತಪಟ್ಟಿದ್ದಾನೆ. ಈ ಘಟನೆಯ ಬಗ್ಗೆ ಶಾಲಾ ಮುಖ್ಯಸ್ಥರಿಗೆ ಮಾಹಿತಿ ನೀಡಿದ್ದರೂ ಅವರು ಸೂಕ್ತ ಕ್ರಮ ಕೈಗೊಳ್ಳದಿರುವುದೇ ಬಾಲಕನ ಸಾವಿಗೆ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ.



ಶಾಲೆ ಮುಂದೆ ಪ್ರತಿಭಟನೆ:



ಬಾಲಕನ ಸಾವಿನ ಸುದ್ದಿ ತಿಳಿದ ಕೂಡಲೇ ಪೋಷಕರು ಮತ್ತು ಸ್ಥಳೀಯರು ಶಾಲೆಯ ಮುಂಭಾಗದಲ್ಲಿ ಶವವಿಟ್ಟು ಪ್ರತಿಭಟನೆ ನಡೆಸಿದರು. ಶಾಲೆಯ ಗೇಟ್ ಬಳಿ ಜನಸಾಗರ ಸೇರಿತ್ತು. ಸ್ಥಳೀಯರು ಮತ್ತು ಬಾಲಕನ ಕುಟುಂಬಸ್ಥರು ಶಾಲಾ ಆಡಳಿತ ಮಂಡಳಿಯ ವಿರುದ್ಧ ಘೋಷಣೆ ಕೂಗಿ, ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಶಾಲಾ ಆಡಳಿತ ಮಂಡಳಿಯ ಸಿಬ್ಬಂದಿ ಮತ್ತು ಅಧ್ಯಕ್ಷರು ಶಾಲೆಗೆ ಬೀಗ ಹಾಕಿ ಪರಾರಿಯಾದರು ಎಂದು ಎನ್ನಲಾಗಿದೆ.



ಘಟನೆಯ ಸುದ್ದಿ ತಿಳಿದ ಕೂಡಲೇ ವಿಜಯಪುರ ಡಿವೈಎಸ್‌ಪಿ ಬಸವರಾಜ ಯಲಿಗಾರ, ಗೋಲಗುಂಬಜ ಇನ್ಸ್‌ಪೆಕ್ಟರ ಮಲ್ಲಯ್ಯ ಮಠಪತಿ ಸೇರಿದಂತೆ 20ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದರು. ಪೊಲೀಸರು ಪೋಷಕರು ಮತ್ತು ಸ್ಥಳೀಯರೊಂದಿಗೆ ಮಾತುಕತೆ ನಡೆಸಿ ದೂರು ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದಾಗ ಪ್ರತಿಭಟನೆಯನ್ನು ಕೈಬಿಟ್ಟ ಜನರು ಬಾಲಕನ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲು ಸಹಕರಿಸಿದರು.



ಗೋಲಗುಂಬಜ ಪೊಲೀಸರು ಈ ಘಟನೆಯ ಬಗ್ಗೆ ತನಿಖೆ ಆರಂಭಿಸಿದ್ದು ಮರಣೋತ್ತರ ಪರೀಕ್ಷೆಯ ವರದಿಯ ನಂತರ ಬಾಲಕನ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ. ಹಿರಿಯ ವಿದ್ಯಾರ್ಥಿಗಳ ಹಲ್ಲೆಯಿಂದಲೇ ಸಾವು ಸಂಭವಿಸಿತೇ ಇಲ್ಲವೇ ಬೇರೆ ಕಾರಣವಿದೆಯೇ ಎಂಬುದು ತನಿಖೆಯಿಂದ ಸ್ಪಷ್ಟವಾಗಲಿದೆ.



ಆದರೆ ಈ ಘಟನೆಗೆ ಶಾಲಾ ಆಡಳಿತ ಮಂಡಳಿಯ ನಿರ್ಲಕ್ಷ್ಯವೇ ಕಾರಣ ಎಂದು ಮೃತ ಬಾಲಕನ ಪೋಷಕರು ಮತ್ತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣಸಮಾಜದ ಜಟಿಲ ಸಮಸ್ಯೆಗಳ ಪರಿಹಾರಕ್ಕೆ ಸಂಘಟನೆಗಳು ಮುಂದಾಗಲಿ: ಡಾ. ಅಲ್ಲಮಪ್ರಭು ಶ್ರೀ