LIVE TV LocalCrimeNationalInternationalPoliticsBusinessFinancialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

18ರಿಂದ ಅನುದಾನಿತ ಶಾಲಾ-ಕಾಲೇಜು ಬಂದ್‌ಗೆ ನಿರ್ಧಾರ

ಬೆಳಗಾವಿ, ನ. 12: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನವೆಂಬರ್ 17ರಂದು ಧಾರವಾಡದಲ್ಲಿ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ನಡೆಯಲಿರುವ ಮುಷ್ಕರಕ್ಕೆ ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. ಬೇಡಿಕೆಗಳು ಈಡೇರದಿದ್ದರೆ ನವೆಂಬರ್ 18ರಿಂದ ಅನಿರ್ದಿಷ್ಟಾವಧಿಗೆ ಅನುದಾನಿತ ಶಾಲಾ-ಕಾಲೇಜುಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅನುದಾನಿತ ಶಾಲಾ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಸ್. ಗಡದವರ, ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರ ಬಹುದಿನಗಳ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ನಿರಂತರವಾಗಿ ನಿರ್ಲಕ್ಷಿಸುತ್ತಿದೆ. ಹಲವು ಬಾರಿ ಮನವಿ ಸಲ್ಲಿಸಿದರೂ ಸ್ಪಂದನೆ ದೊರೆತಿಲ್ಲ. ಹೀಗಾಗಿ ಹೋರಾಟ ಅನಿವಾರ್ಯವಾಗಿದೆ ಎಂದರು.

2006ರ ಮಾರ್ಚ್ 1ರ ನಂತರ ನೇಮಕಗೊಂಡ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸಬೇಕು. ನ್ಯಾಯಾಲಯದ ಆದೇಶದಂತೆ ಕಾಲ್ಪನಿಕ ವೇತನ ಸೌಲಭ್ಯ ಕಲ್ಪಿಸಬೇಕು. 2015ರಿಂದ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು.

2006ರ ಏಪ್ರಿಲ್ 1ಕ್ಕೂ ಮೊದಲು ನೇಮಕಾತಿ ಅಧಿಸೂಚನೆ ಹೊರಡಿಸಿ, ನಂತರ ನೇಮಕಾತಿ ಆದೇಶ ಪಡೆದ ನೌಕರರಿಗೂ ಹಳೆಯ ಪಿಂಚಣಿ ಯೋಜನೆಯ ಸೌಲಭ್ಯ ವಿಸ್ತರಿಸಬೇಕು. ಸರ್ಕಾರಿ ನೌಕರರಿಗೆ ದೊರೆಯುತ್ತಿರುವ ಆರೋಗ್ಯ ಸಂಜೀವಿನಿ ಯೋಜನೆ ಹಾಗೂ ಮಹಿಳಾ ಸಿಬ್ಬಂದಿಗೆ ನೀಡಲಾಗುವ ಋತುಚಕ್ರ ರಜೆ ಸೌಲಭ್ಯವನ್ನು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೂ ಅನ್ವಯಿಸಬೇಕು ಎಂದು ಆಗ್ರಹಿಸಿದರು.

ಶಾಲೆಗಳ ಮಾನ್ಯತೆ ನವೀಕರಣ ಸರಳಗೊಳಿಸಲು ಒತ್ತಾಯ

ಅನುದಾನಿತ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಸಂಬಂಧಿಸಿದ ಅಗ್ನಿ ಸುರಕ್ಷತೆ, ಕಟ್ಟಡ ಪರವಾನಗಿ, ಶಿಕ್ಷಕ-ವಿದ್ಯಾರ್ಥಿ ಅನುಪಾತ ಸೇರಿದಂತೆ ವಿವಿಧ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಬೇಕು. ಮಾನ್ಯತೆ ನವೀಕರಣ ಪ್ರಕ್ರಿಯೆಯನ್ನು ಸರಳಗೊಳಿಸಬೇಕು. ಅನುದಾನಿತ ಶಾಲೆಗಳ ಮೂರು ಕಿ.ಮೀ. ವ್ಯಾಪ್ತಿಯ ಹೊರಗೆ ಮಾತ್ರ ಪ್ರಧಾನಮಂತ್ರಿ ಶ್ರೀ ಹಾಗೂ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಬೇಕು ಎಂದು ಒತ್ತಾಯಿಸಿದರು.

ಶಿಕ್ಷಕರ ಮೇಲೆ ಹೆಚ್ಚುತ್ತಿರುವ ದಾಖಲೆ ನಿರ್ವಹಣೆಯ ಹೊರೆಯನ್ನು ಕಡಿಮೆ ಮಾಡಬೇಕು. ಬ್ರಿಡ್ಜ್ ಕೋರ್ಸ್, ಮೂಲಭೂತ ಸಾಕ್ಷರತೆ ಮತ್ತು ಸಂಖ್ಯಾಜ್ಞಾನ, ಕಲಿಕಾ ಸಾಧನೆ ಮೌಲ್ಯಮಾಪನ ಸೇರಿದಂತೆ ವಿವಿಧ ಶೈಕ್ಷಣಿಕ ಚಟುವಟಿಕೆಗಳ ದಾಖಲೆ ನಿರ್ವಹಣೆಯನ್ನು ಸರಳೀಕರಿಸಬೇಕು. ತೃತೀಯ ಭಾಷೆಯನ್ನು ರದ್ದುಗೊಳಿಸುವ ನಿರ್ಧಾರವನ್ನು ಸರ್ಕಾರ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಸರ್ಕಾರ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ನವೆಂಬರ್ 18ರಿಂದ ಅನುದಾನಿತ ಶಾಲಾ-ಕಾಲೇಜುಗಳನ್ನು ಅನಿರ್ದಿಷ್ಟಾವಧಿಗೆ ಬಂದ್ ಮಾಡಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಎಸ್.ಸಿ. ಮಾಲಗಾವಿ, ಎಸ್.ಐ. ಸಂಭಾಳ, ಬಿ.ಕೆ. ಯರಗಟ್ಟಿ, ಬಿ.ಬಿ. ಪಾಟೀಲ, ಬಿ.ಪಿ. ಲಮಾಣಿ, ಎಂ.ಎಂ. ಹುಲಗಬಾಳಿ, ಆರ್.ಆರ್. ಮಧಾಳೆ ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೆಪಿಎಸ್‌ಸಿ ಪರೀಕ್ಷೆ: ಚುನಾವಣೆಯಂತೆ ಕಟ್ಟುನಿಟ್ಟಿನ ವ್ಯವಸ್ಥೆಮೋದಿಗೆ ಪ್ರಶ್ನೆ ಕೇಳಿದ್ದ ನಾರ್ವೆ ಪತ್ರಕರ್ತೆಯ ಭಾರತ ಪ್ರವಾಸಕ್ಕೆ ಕೊನೇ ಕ್ಷಣದಲ್ಲಿ ತಡೆಉತ್ತರ ಪ್ರದೇಶದಲ್ಲಿ ಹೊಸ ರಾಜಕೀಯ ಸಮೀಕರಣ: ಒವೈಸಿ–ಆಜಾದ ಮೈತ್ರಿಮೆಟ್ರೊ ಉದ್ಘಾಟನೆಯಲ್ಲಿ ಭಾಷಣಕ್ಕೆ ಅವಕಾಶ ನಿರಾಕರಣೆ: ಕೃಷ್ಣಬೈರೇಗೌಡ ಕಿಡಿದೇಶದ ಯಶೋಗಾಥೆಗಳಿಗೆ ಮಾಧ್ಯಮಗಳು ಆದ್ಯತೆ ನೀಡಲಿ: ಪ್ರಧಾನಿ ಮೋದಿ₹7 ಕೋಟಿ ನೀಡದಿದ್ದರೆ ಕೇಜ್ರಿವಾಲ್, ಪುತ್ರಿಯ ಹತ್ಯೆ: ಬಿಷ್ಣೋಯಿ ಗ್ಯಾಂಗ್ ಬೆದರಿಕೆಹಾಲು, ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಜೆಡಿಎಸ್ ಪ್ರತಿಭಟನೆ18ರಿಂದ ಅನುದಾನಿತ ಶಾಲಾ-ಕಾಲೇಜು ಬಂದ್‌ಗೆ ನಿರ್ಧಾರಹೊಲದಲ್ಲಿ ಇಳಿದ ಬೆಳಗಾವಿಗೆ ಬರುತ್ತಿದ್ದ ಹೆಲಿಕಾಪ್ಟ ರ್ಬರ ಪರಿಹಾರ ವಿತರಣೆಯಲ್ಲಿನ ಲೋಪ ಸರಿಪಡಿಸಲು ಸೂಚನೆ