ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಿಜೆಪಿ ಶಾಸಕ ಸವದಿ ವಿರುದ್ಧ ನೂರಾರು ಕೋಟಿ ಅಕ್ರಮ ಆಸ್ತಿ ಗಳಿಕೆ ಆರೋಪ; ತನಿಖೆಗೆ ಆಗ್ರಹ

ಬಾಗಲಕೋಟ: ತೇರದಾಳ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಸವದಿ ಅವರು ನೂರಾರು ಕೋಟಿ ರೂ. ಅಕ್ರಮ ಆಸ್ತಿ ಗಳಿಸಿದ್ದಾರೆ. ಅವರ ವಿರುದ್ಧ ತನಿಖೆ ನಡೆಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ತೇರದಾಳದ ಹಳಿಂಗಳಿ ನಿವಾಸಿ ರಾಜು ದೇಸಾಯಿ ಎಂಬುವವರು ಆಸ್ತಿ ಪಹಣಿ ಪತ್ರದ ಸಮೇತ ಸಿದ್ದು ಸವದಿ ವಿರುದ್ಧ ಆರೋಪ ಮಾಡಿದ್ದಾರೆ. ಮೂರು ವರ್ಷಗಳಲ್ಲಿ ಶಾಸಕರು ನೂರಾರು ಎಕರೆ ಭೂಮಿ ಖರೀದಿ ಮಾಡಿದ್ದಾರೆ. 156 ಎಕರೆ ಜಮೀನು ಖರೀದಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಮೂರು ವರ್ಷಗಳಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಜಮೀನು ಖರೀದಿಗೆ ಶಾಸಕರ ಬಳಿ ಹಣ ಎಲ್ಲಿಂದ ಬಂತು ಎಂಬುದರ ಬಗ್ಗೆ ತನಿಖೆಯಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.