LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಮಾರಕ ಮಾಂಜಾಗೆ ಕಡಿವಾಣ ಹಾಕಲು ಆಗ್ರಹ

ಬೆಳಗಾವಿ, ಅ. 5 : (ಸಮದರ್ಶಿ ಸುದ್ದಿ) - ಬೆಳಗಾವಿ ನಗರ ಹಾಗೂ ಜಿಲ್ಲೆಯಲ್ಲಿ ಗಾಳಿಪಟ ಹಾರಿಸಲು ಬಳಸುವ ಅಪಾಯಕಾರಿ ಮಾಂಜಾ ದಾರಿಯಿಂದ ಪದೇ ಪದೇ ಸಾವು-ನೋವುಗಳು ಸಂಭವಿಸುತ್ತಿದ್ದು, ಇದನ್ನು ತಡೆಯಲು ಜಿಲ್ಲಾಡಳಿತ ತುರ್ತು ಹಾಗೂ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಬೆಳಗಾವಿ ಜಿಲ್ಲಾ ಘಟಕ ಆಗ್ರಹಿಸಿದೆ.

ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿರುವ ಪಕ್ಷವು, ಈ ವರ್ಷ ಬೆಳಗಾವಿಯಲ್ಲಿ ಮಾಂಜಾ ದಾರಿಯಿಂದ ಸಂಭವಿಸಿದ ಘಟನೆಗಳಲ್ಲಿ ಮೂವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇತ್ತೀಚೆಗೆ 19 ವರ್ಷದ ಧ್ರುವ ಸಂತೋಷ ಕಾರ್ಗಿ ಅವರು ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ಸಂದರ್ಭದಲ್ಲಿ ಮಾಂಜಾ ದಾರಿಯಿಂದ ಕುತ್ತಿಗೆಗೆ ಗಂಭೀರ ಗಾಯವಾಗಿ ಮೃತಪಟ್ಟಿರುವ ಘಟನೆ ಸಾರ್ವಜನಿಕರ ಸುರಕ್ಷತೆಯ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಿದೆ ಎಂದು ತಿಳಿಸಿದೆ.

ಅಪಾಯಕಾರಿ ಸಿಂಥೆಟಿಕ್/ಚೈನೀಸ್ ಮಾಂಜಾ ದಾರದ ಮಾರಾಟ ಹಾಗೂ ಬಳಕೆಯ ಮೇಲೆ ನಿಬಂಧನೆಗಳಿದ್ದರೂ ಅದರ ಮಾರಾಟ ಮತ್ತು ಬಳಕೆ ಮುಂದುವರಿಯುತ್ತಿದೆ. ಇದರಿಂದ ವಿಶೇಷವಾಗಿ ದ್ವಿಚಕ್ರ ವಾಹನ ಸವಾರರು, ಪಾದಚಾರಿಗಳು, ಮಕ್ಕಳು ಹಾಗೂ ಪಕ್ಷಿಗಳಿಗೆ ಗಂಭೀರ ಅಪಾಯ ಎದುರಾಗಿದೆ ಎಂದು ಮನವಿಯಲ್ಲಿ ಕಳವಳ ವ್ಯಕ್ತಪಡಿಸಲಾಗಿದೆ.

ನಿಷೇಧಿತ ಹಾಗೂ ಅಪಾಯಕಾರಿ ಮಾಂಜಾ ದಾರದ ಮಾರಾಟ, ದಾಸ್ತಾನು ಮತ್ತು ಬಳಕೆಯ ವಿರುದ್ಧ ಜಿಲ್ಲಾಡಳಿತ ತಕ್ಷಣ ವಿಶೇಷ ಕಾರ್ಯಾಚರಣೆ ನಡೆಸಿ ದಾರಿಯನ್ನು ವಶಪಡಿಸಿಕೊಳ್ಳಬೇಕು. ಅದರ ತಯಾರಕರು, ಪೂರೈಕೆದಾರರು, ಮಾರಾಟಗಾರರು ಹಾಗೂ ಬಳಕೆದಾರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

ಬೆಳಗಾವಿಗೆ ನಿಷೇಧಿತ ಮಾಂಜಾ ಎಲ್ಲಿಂದ ಮತ್ತು ಹೇಗೆ ಪೂರೈಕೆಯಾಗುತ್ತಿದೆ ಎಂಬುದನ್ನು ಪತ್ತೆಹಚ್ಚಿ ಸರಬರಾಜು ಜಾಲವನ್ನು ತಕ್ಷಣ ತಡೆಯಬೇಕು. ಗಾಳಿಪಟ ಹಾರಿಸುವ ಪ್ರದೇಶಗಳು, ಮಾರುಕಟ್ಟೆಗಳು ಹಾಗೂ ಅಂಗಡಿಗಳಲ್ಲಿ ಪೊಲೀಸ್ ಮತ್ತು ಸಂಬಂಧಿತ ಇಲಾಖೆಗಳ ಮೂಲಕ ನಿಯಮಿತ ತಪಾಸಣೆ ನಡೆಸಿ ಕಟ್ಟುನಿಟ್ಟಿನ ಮೇಲ್ವಿಚಾರಣೆ ಮಾಡಬೇಕು ಎಂದು ಆಗ್ರಹಿಸಲಾಗಿದೆ.

2026ರಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಮಾಂಜಾ ದಾರಿಯಿಂದ ಸಂಭವಿಸಿದ ಸಾವು ಮತ್ತು ಗಾಯಗಳ ಅಧಿಕೃತ ಅಂಕಿಅಂಶಗಳನ್ನು ಪರಿಶೀಲಿಸಿ ಸಾರ್ವಜನಿಕಗೊಳಿಸಬೇಕು. ಕಾನೂನು ಉಲ್ಲಂಘನೆ ಅಥವಾ ನಿರ್ಲಕ್ಷ್ಯ ಕಂಡುಬಂದಲ್ಲಿ ಹೊಣೆಗಾರರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಪಾಯಕಾರಿ ಮಾಂಜಾದ ದುಷ್ಪರಿಣಾಮಗಳ ಕುರಿತು ತಕ್ಷಣ ಸಾರ್ವಜನಿಕ ಜಾಗೃತಿ ಅಭಿಯಾನ ನಡೆಸುವುದರ ಜೊತೆಗೆ, ಅದರ ಮಾರಾಟ ಅಥವಾ ಬಳಕೆಯ ಬಗ್ಗೆ ಸಾರ್ವಜನಿಕರು ದೂರು ನೀಡಲು ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಪಕ್ಷ ಒತ್ತಾಯಿಸಿದೆ.

ಮತ್ತಷ್ಟು ಅಮಾಯಕ ಜೀವಗಳು ಬಲಿಯಾಗದಂತೆ ಸಾರ್ವಜನಿಕ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತ ಈ ವಿಷಯವನ್ನು ತುರ್ತಾಗಿ ಪರಿಗಣಿಸಿ ಅಗತ್ಯ ಕಠಿಣ ಕ್ರಮ ಕೈಗೊಳ್ಳಬೇಕೆಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಆಗ್ರಹಿಸಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಡಿಲು ಬಡಿದು ಎರಡು ಹಸು ಸಾವುಐಎಚ್‌ಆರ್‌ಸಿ ಬೆಳಗಾವಿ ಜಿಲ್ಲಾ ಮಂಡಳಿ ಅಧ್ಯಕ್ಷರಾಗಿ ಅಬ್ದುಲ್ ಅಜೀಜ ಶೇಖ ನೇಮಕಚುಳಕಿಯಲ್ಲಿ ಜಿಲ್ಲಾ ಮಟ್ಟದ ಕಬಡ್ಡಿ-ಖೋಖೋ ಕ್ರೀಡಾಕೂಟಕ್ಕೆ ಚಾಲನೆಮೊಬೈಲ್ ಟವರ್ ಆಮಿಷ, ಫೇಸ್‌ಬುಕ್ ಲಿಂಕ್: ಅಥಣಿಯ ಇಬ್ಬರು ರೈತರಿಗೆ ₹4.04 ಲಕ್ಷ ವಂಚನೆಅಥಣಿ ಲಾಡ್ಜನಲ್ಲಿ ವೇಶ್ಯಾವಾಟಿಕೆ ಆರೋಪ: ಮಹಿಳೆ ರಕ್ಷಣೆ, ಓರ್ವ ಬಂಧನಹಸುಗಳಿಗೆ ಮೇವು ಹಾಕುವ ವಿಚಾರಕ್ಕೆ ಜಗಳ: ಪತ್ನಿಯನ್ನು ಕುಡಗೋಲಿನಿಂದ ಕೊಚ್ಚಿ ಹತ್ಯೆಬಿಜೆಪಿ ಮುಖಂಡ ರವಿ ಪಾಟೀಲಗೆ ನಿರೀಕ್ಷಣಾ ಜಾಮೀನುಮೋದಿ-ಶಾ ಸೂಚನೆಯಂತೆ ಸಂವಿಧಾನ, ಪ್ರಜಾಪ್ರಭುತ್ವಕ್ಕೆ ದ್ರೋಹ: ಕಾಂಗ್ರೆಸ್ಮಹಿಳಾ ಪತ್ರಕರ್ತೆಯರ ಪೊಲೀಸರ ಲೈಂಗಿಕ ಕಿರುಕುಳ ; ಎಫ್‌ಐಆರ್‌ಗೆ ಒತ್ತಾಯಿಸಿದವರು ವಶಕ್ಕೆಇದು ಗುಜರಾತ್, ಯುಪಿ ಅಲ್ಲ; ಕಾನೂನು ಮುರಿದರೆ ಪರಿಣಾಮ ಎದುರಿಸಿ: ಪ್ರಿಯಾಂಕ್ ಖರ್ಗೆ