LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಮೀಸಲಾತಿಗೆ ಆಗ್ರಹಿಸಿ ಹೆದ್ದಾರಿ ತಡೆದು ಪ್ರತಿಭಟನೆ; ಸಂಚಾರಕ್ಕೆ ಅಡಚಣಿ

ಬೆಳಗಾವಿ ‌: ತಮ್ಮ ಸಮುದಾಯವನ್ನು 2ಎ ಮೀಸಲಾತಿ ಗುಂಪಿನಲ್ಲಿ ಸೇರಿಸಲು ಬಿಜೆಪಿ ಸರಕಾರ ಹಿಂಜರಿಯುತ್ತಿದೆ ಎಂದು ಆರೋಪಿಸಿ ಪಂಚಮಸಾಲಿ ಸಮುದಾಯದವರು ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿಯ ಟೋಲ್ ನಾಕಾ ಬಳಿ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಇದರಿಂದ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡು ಜನ ತೊಂದರೆಗೆ ಒಳಗಾದರು.



ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪಂಚಮಸಾಲಿಗಳು ತಮ್ಮ ಅಸಮಾಧಾನ ವ್ಯಕ್ತ ಪಡಿಸಿದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹತ್ತರಗಿಯ ಟೋಲ್ ಗೇಟ್ ಬಳಿ ಬಿಗಿ ಪೊಲೀಸ್ ಬಂದೋಬಸ್ತ ಮಾಡಲಾಗಿದೆ.



ಪಂಚಮಸಾಲಿ 2 ಎ ಮೀಸಲಾತಿ ಹೋರಾಟದ ಭಾಗವಾಗಿ ಪಂಚಮಸಾಲಿ ಸಮುದಾಯದವರು ರಾಜ್ಯದಾದ್ಯಂತ ರಾಜ್ಯ ಮತ್ತು ರಾಷ್ಟ್ರ ಹೆದ್ದಾರಿಗಳನ್ನು ತಡೆದು ಪ್ರತಿಭಟನೆ ನಡೆಸುವಂತೆ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ್ದರು.



ಓರ್ವ ಇನ್ಸಪೆಕ್ಟರ್, ಇಬ್ಬರು ಸಹಾಯಕ ಇನ್ಸಪೆಕ್ಟರ್ ಸೇರಿದಂತೆ ನೂರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಬಂದೋಬಸ್ತ್ ಗಾಗಿ ನಿಯೋಜನೆ ಮಾಡಲಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ