LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಉದ್ಯೋಗ ಸಿಗದೆ ಖಿನ್ನತೆ: ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿ ಆತ್ಮಹತ್ಯೆ

ವಾಷಿಂಗ್ಟನ್‌, ಮೇ 2 : ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದರೂ ಉದ್ಯೋಗ ಸಿಗದೆ ಖಿನ್ನತೆಗೆ ಒಳಗಾಗಿದ್ದ ಭಾರತೀಯ ವಿದ್ಯಾರ್ಥಿಯೊಬ್ಬ ಅಮೆರಿಕದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ 26 ವರ್ಷದ ಚಂದು ಮೃತ ವಿದ್ಯಾರ್ಥಿ. ಅವರು ಚಿಕಾಗೋದ ಡಿಪಾಲ್ ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದರು.

ಕಳೆದ ಹಲವು ವಾರಗಳಿಂದ ಉದ್ಯೋಗಕ್ಕಾಗಿ ಹುಡುಕಾಟ ನಡೆಸಿದರೂ ಕೆಲಸ ಸಿಕ್ಕಿರಲಿಲ್ಲ. ಕರ್ನೂಲ್‌ನಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿರುವ ತಂದೆಯ ಆರ್ಥಿಕ ಸಂಕಷ್ಟಗಳು ಹಾಗೂ ಕುಟುಂಬದ ಸಾಲದ ಹೊರೆ ಅವರ ಮೇಲೆ ತೀವ್ರ ಮಾನಸಿಕ ಒತ್ತಡ ಉಂಟುಮಾಡಿತ್ತು ಎಂದು ತಿಳಿದುಬಂದಿದೆ.

ಈ ಒತ್ತಡ ತಾಳಲಾರದೆ ಅಮೆರಿಕದಲ್ಲಿರುವ ತಮ್ಮ ನಿವಾಸದಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತದೇಹವನ್ನು ಭಾರತಕ್ಕೆ ತರಲು ಸುಮಾರು 20 ಲಕ್ಷ ರೂಪಾಯಿ ವೆಚ್ಚವಾಗಲಿದ್ದು, ಬಡ ಕುಟುಂಬಕ್ಕೆ ಇದನ್ನು ಭರಿಸುವುದು ಕಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಅಮೆರಿಕದಲ್ಲಿರುವ ಭಾರತೀಯ ಸಮುದಾಯ ನಿಧಿ ಸಂಗ್ರಹಣೆಯನ್ನು ಆರಂಭಿಸಿದೆ.

ಕಳೆದ ಎರಡು ದಿನಗಳಲ್ಲಿ 76,000 ಡಾಲರ್‌ಗೂ ಹೆಚ್ಚು ಹಣ ಸಂಗ್ರಹವಾಗಿದ್ದು, ಅದರಲ್ಲಿ 25,000 ಡಾಲರ್ ಹಣವನ್ನು ಕುಟುಂಬದ ಸಾಲ ತೀರಿಸಲು ನೀಡಲು ನಿರ್ಧರಿಸಲಾಗಿದೆ.

ಈ ಘಟನೆ ಕುರಿತು ಆಂಧ್ರಪ್ರದೇಶದ ಸಚಿವ ನಾರಾ ಲೋಕೇಶ್ ಸಂತಾಪ ಸೂಚಿಸಿದ್ದು, ಮೃತದೇಹವನ್ನು ತಾಯ್ನಾಡಿಗೆ ತರಲು ಕೇಂದ್ರ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರ ಸಹಾಯ ಕೋರಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ರಾಮ್ ಮೋಹನ್ ನಾಯ್ಡು, ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಸಂಬಂಧಿತ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುತ್ತಿದ್ದು, ಕುಟುಂಬಕ್ಕೆ ಅಗತ್ಯ ಸಹಾಯ ಒದಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ