LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಧಾರವಾಡ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಚೇರಿ ಜಫ್ತು

ಧಾರವಾಡ: ಹೆದ್ದಾರಿ ನಿರ್ಮಿಸಲು ವಶಪಡಿಸಿಕೊಂಡ ಜಮೀನಿಗೆ ಪರಿಹಾರ ಮೊತ್ತ ನೀಡದ ಹೆದ್ದಾರಿ ಪ್ರಾಧಿಕಾರದ ಕಚೇರಿಯನ್ನು ಜಿಲ್ಲಾ ನ್ಯಾಯಾಲಯದ  ಆದೇಶದಂತೆ ಜಫ್ತು ಮಾಡಲಾಗಿದೆ.



ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇಲ್ಲಿಯವರೆಗೆ ವಶಪಡಿಸಿಕೊಂಡ ಜಮೀನಿನ ಹಣವನ್ನು ನೀಡದ ಪರಿಣಾಮ ಕೋರ್ಟ​ಗೆ ಹೋಗಿದ್ದ ರಾಮಚಂದ್ರಪ್ಪ ಅಡ್ಡೇದಾರ ಎಂಬ ಸಂತ್ರಸ್ತರ ಪರವಾಗಿ ನ್ಯಾಯಾಲಯ​ ತೀರ್ಪು ನೀಡಿದೆ. ಹೆದ್ದಾರಿ ಪ್ರಾಧಿಕಾರದ ಕಚೇರಿಯನ್ನು ಜಪ್ತಿ ಮಾಡಲು ಆದೇಶ ಹೊರಡಿಸಿ, ಧಾರವಾಡದ ವಿದ್ಯಾಗಿರಿ ಬಡಾವಣೆಯಲ್ಲಿರುವ ಪ್ರಾಧಿಕಾರದ ಕಚೇರಿಯನ್ನು ಇಂದು ಜಪ್ತಿ ಮಾಡಲಾಗಿದೆ.



ಹೆದ್ದಾರಿ-63 ರ ನಿರ್ಮಾಣ ಮಾಡಲು  ಗದಗ ಜಿಲ್ಲೆಯ ಹಳ್ಳಿಕೇರಿ ಗ್ರಾಮದ ರಾಮಚಂದ್ರಪ್ಪ ಅಡ್ಡೇದಾರ ಎನ್ನುವವರ 3 ಎಕರೆ ಜಮೀನನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಪ್ರತಿ ಚದರ ಅಡಿಗೆ 79 ರೂ. ಹಣವನ್ನು ನಿಗದಿ ಮಾಡಿ ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಆದರೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇಲ್ಲಿಯವರೆಗೆ ವಶಪಡಿಸಿಕೊಂಡ ಜಮೀನಿನ ಪರಿಹಾರದ ಹಣವನ್ನು ನೀಡದ ಪರಿಣಾಮ ನ್ಯಾಯಾಲಯದ ಮೊರೆ ಹೋಗಿದ್ದರು.



ಅತಿ ಕಡಿಮೆ ದರ ನಿಗದಿ ಮಾಡಿದ್ದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಬಗ್ಗೆ ಡಿಸಿ ಕೋರ್ಟ​ ಹೋಗಿದ್ದ ರಾಮಚಂದ್ರಪ್ಪ ಅಡ್ಡೇದಾರ ಅವರು ಡಿಸಿ ಕೋರ್ಟ್​ನಲ್ಲಿ ಪ್ರಶ್ನಿಸಿದ್ದರು. ನಂತರ ಡಿಸಿ ಕೋರ್ಟ ಪ್ರತಿ ಚದರ ಅಡಿಗೆ 79 ರೂ. ನೀಡಲು ಆದೇಶಿಸಿತ್ತು.



ಆದರೂ ಅಧಿಕಾರಿಗಳು ಇದುವರೆಗೆ ಪರಿಹಾರ ನೀಡಿಲ್ಲದ ಕಾರಣ ರಾಮಚಂದ್ರಪ್ಪ ಅವರು ಧಾರವಾಡ ಜಿಲ್ಲಾ ಕೋರ್ಟ ಮೊರೆ ಹೋಗಿದ್ದರು. ಇದೀಗ ಕಚೇರಿ ಜಪ್ತಿಗೆ ಆದೇಶಿಸಿ ನ್ಯಾಯಾಲಯದ ಸಿಬ್ಬಂದಿಯಿಂದ ಕಚೇರಿ ಪೀಠೋಪಕರಣ, ಕಂಪ್ಯೂಟರ್, ಪ್ರಿಂಟರ್ ಸೇರಿ ವಾಹನವನ್ನು ಜಪ್ತಿ ಮಾಡಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ