LIVE TV LocalCrimeNationalInternationalPoliticsBusinessFinancialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಅಲಕನೂರಿನ ಜನರ ಪ್ರೀತಿಯ ಆನೆ ಧ್ರುವ ಇನ್ನಿಲ್ಲ

ರಾಯಬಾಗ, ನ. 13: ತಾಲೂಕಿನ ಅಲಕನೂರ ಗ್ರಾಮದ ಕರಿಸಿದ್ದೇಶ್ವರ ದೇವಸ್ಥಾನದ ಆನೆ ಧ್ರುವ (ರಾಜಾ) ಶುಕ್ರವಾರ ಬೆಳಗಿನ ಜಾವ ಮೃತಪಟ್ಟಿದ್ದು, ಗ್ರಾಮಸ್ಥರು ಹಾಗೂ ಭಕ್ತರಲ್ಲಿ ಶೋಕ ಮಡುಗಟ್ಟಿದೆ.

ಕಳೆದ 20 ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ 32 ವರ್ಷದ ಗಂಡಾನೆಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದೆ.

ಸುಮಾರು 25 ವರ್ಷಗಳ ಹಿಂದೆ ಕರಿಸಿದ್ದೇಶ್ವರ ದೇವಸ್ಥಾನಕ್ಕೆ ಕರೆತರಲಾಗಿದ್ದ ಧ್ರುವ, ಅಂದಿನಿಂದ ಗ್ರಾಮದ ಜನರೊಂದಿಗೆ ಅವಿನಾಭಾವ ಸಂಬಂಧ ಬೆಳೆಸಿಕೊಂಡಿತ್ತು. ದೇವಸ್ಥಾನದ ಧಾರ್ಮಿಕ ಕಾರ್ಯಕ್ರಮಗಳು, ಉತ್ಸವಗಳು ಹಾಗೂ ಗ್ರಾಮದ ವಿವಿಧ ಆಚರಣೆಗಳಲ್ಲಿ ಪ್ರಮುಖ ಆಕರ್ಷಣೆಯಾಗಿತ್ತು.

ಧ್ರುವ ಮೃತಪಟ್ಟ ಸುದ್ದಿ ಹರಡುತ್ತಿದ್ದಂತೆ ನೂರಾರು ಗ್ರಾಮಸ್ಥರು ಹಾಗೂ ಭಕ್ತರು ದೇವಸ್ಥಾನದತ್ತ ಧಾವಿಸಿ ನೆಚ್ಚಿನ ಆನೆಯ ಅಂತಿಮ ದರ್ಶನ ಪಡೆದರು. ಹಲವು ವರ್ಷಗಳಿಂದ ತಮ್ಮೊಂದಿಗೆ ಬೆರೆತು ಬದುಕಿದ್ದ ಮೂಕಪ್ರಾಣಿಯ ಅಗಲಿಕೆಗೆ ಕಣ್ಣೀರಿಟ್ಟರು.

ವಿಷಯ ತಿಳಿದು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆನೆಯ ಅಂತಿಮ ಸಂಸ್ಕಾರಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಯಿತು. ಕಾಲು ಶತಮಾನದಷ್ಟು ಕಾಲ ಅಲಕನೂರಿನ ಜನರ ಪ್ರೀತಿ ಗಳಿಸಿದ್ದ ಧ್ರುವನ ಅಗಲಿಕೆಯಿಂದ ಕರಿಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ನೀರವ ಮೌನ ಆವರಿಸಿತ್ತು.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST