LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಎರಡು ಮಕ್ಕಳ ನಿಯಮ ಜಾರಿಗೆ ಸಲ್ಲಿಸಿದ ಅರ್ಜಿ ವಜಾ 

ಹೊಸದಿಲ್ಲಿ: ದೇಶದಲ್ಲಿ ಜನಸಂಖ್ಯಾ ನಿಯಂತ್ರಣ ನೀತಿ ಮತ್ತು ಎರಡು ಮಕ್ಕಳ ನಿಯಮ ಜಾರಿಗೊಳಿಸಲು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಗೆ ಸುಪ್ರೀಮ ಕೋರ್ಟ ನಿರಾಕರಿಸಿದೆ.



ನ್ಯಾಯಮೂರ್ತಿಗಳಾದ ಎಸ್.ಕೌಲ್ ಮತ್ತು ಅಭಯ ಎಸ್. ಓಕಾ ಅವರ ಪೀಠವು, ಇದನ್ನು ಕಾನೂನು ಆಯೋಗಕ್ಕೆ ಶಿಫಾರಸು ಮಾಡುವಂತೆ ವಕೀಲ ಅಶ್ವಿನಿ ಕುಮಾರ ಉಪಾಧ್ಯಾಯ ಅವರು ಪಿಐಎಲ್ ನಲ್ಲಿ ಸಲ್ಲಿಸಿದ್ದ ಕೋರಿಕೆಯನ್ನೂ ತಿರಸ್ಕರಿಸಿತು.



ಈ ಸಾಮಾಜಿಕ ಸಮಸ್ಯೆಯನ್ನು ಸರ್ಕಾರ ನೋಡಿಕೊಳ್ಳಲಿದೆ. ಆದಾಗ್ಯೂ, ದೇಶದಲ್ಲಿ ಜನಸಂಖ್ಯೆ ಬೆಳವಣಿಗೆ ಇಳಿಮುಖದಲ್ಲಿದೆ. ಅಷ್ಟಕ್ಕೂ ನ್ಯಾಯಾಲಯ ಹಸ್ತಕ್ಷೇಪ ಮಾಡುವಂತಹ ಸಮಸ್ಯೆ ಇದಲ್ಲ. ನಮಗೆ ಮಾಡಲು ಇದಕ್ಕಿಂತಲೂ ಅತ್ಯುತ್ತಮ ಕೆಲಸಗಳು ಬಾಕಿ ಇವೆ ಎಂದು ಪೀಠ ಮೌಖಿಕವಾಗಿ ಹೇಳಿದೆ.



ನಿಮಗೆ ಪ್ರಚಾರ ಬೇಕಾಗಿದೆ. ಪ್ರಚಾರ ಕೊಡುವುದು ನಮ್ಮ ಕೆಲಸವಲ್ಲ. ಈ ಅರ್ಜಿಯನ್ನು ನಾವು ಮುಂದುವರಿಸುವುದಿಲ್ಲ ಎಂದು ಅರ್ಜಿದಾರರಿಗೆ ನ್ಯಾಯಾಲಯ ತಿಳಿಸಿದೆ.



ಕೇಂದ್ರ ಸರ್ಕಾರ ಪ್ರತಿನಿಧಿಸಿದ ಸಾಲಿಸಿಟರ್ ಜನರಲ್ ತುಷಾರ ಮೆಹ್ತಾ ಅವರು, ಜನಸಂಖ್ಯೆ ಏರಿಕೆ ನಿಯಂತ್ರಿಸಲು ನಾವು ಏನೆಲ್ಲಾ ಮಾಡಬಹುದು ಅದೆಲ್ಲವನ್ನೂ ಮಾಡುತ್ತಿದ್ದೇವೆ ಎಂದು ಪೀಠಕ್ಕೆ ತಿಳಿಸಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿವೃತ್ತ ಶಿಕ್ಷಕ ಶ್ರೀ ಎಸ್. ಎ. ಕೊತವಾಲ್ ನಿಧನನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಎನ್‌ಟಿಎ ವಿಷಯ ತಜ್ಞರೇ ರೂವಾರಿಗಳುಇಂಡಿಯಲ್ಲಿ ಬೀದಿ ನಾಯಿಗಳ ದಾಳಿ: ಇಬ್ಬರು ಮಕ್ಕಳಿಗೆ ಗಂಭೀರ ಗಾಯಬ್ರಹ್ಮಾಂಡ ಭ್ರಷ್ಟಾಚಾರ : ಸಿಬಿಐ ತನಿಖೆ ನಡುವೆಯೂ ಪಿಎನ್‌ಸಿ ಇನ್‌ಫ್ರಾಟೆಕ್‌ಗೆ 3,483 ಕೋಟಿ ರೂ. ಹೆದ್ದಾರಿ ಗುತ್ತಿಗೆಗದ್ದಲದಲ್ಲೇ ಸಾಗಿದ ಸಂಸತ್; ಚರ್ಚೆಯಿಲ್ಲದೆ ತೆರಿಗೆ ತಿದ್ದುಪಡಿ ಮಸೂದೆಗೆ ಒಪ್ಪಿಗೆ'ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು' ಎಂದ ರೂಪಾಲಿ ಗಂಗೂಲಿ; ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಧರಣಿಯಲ್ಲಿ ಮೊಳಗಿದ ಏಕತೆಯ ಸಂದೇಶ: ಜಾತಿ–ಧರ್ಮ ಮೀರಿ ವಿದ್ಯಾರ್ಥಿಗಳಿಗೆ ನೆರವುಬೈಕ್–ಬಸ್ ಮುಖಾಮುಖಿ ಡಿಕ್ಕಿ: ತಂದೆ, ಮಗಳು ಸೇರಿ ಮೂವರು ಸ್ಥಳದಲ್ಲೇ ಮೃತ್ಯು'ತೆಹೆಲ್ಕಾ' ಪತ್ರಿಕೆ ಮಾಜಿ ಪ್ರಧಾನ ಸಂಪಾದಕ ತರುಣ ತೇಜ್‌ಪಾಲಗೆ 10 ವರ್ಷ ಜೈಲು ಶಿಕ್ಷೆರೈಲು ಹಳಿ ಮಧ್ಯೆ ಕೆಟ್ಟು ನಿಂತ ಶಾಲಾ ವಾಹನ; ಗ್ರಾಮಸ್ಥರ ಸಮಯಪ್ರಜ್ಞೆಗೆ ತಪ್ಪಿದ ಭಾರೀ ದುರಂತ