ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಜ್ಯದ ಶಾಲಾ ಮಕ್ಕಳಿಗೆ ಡಿಜಿಟಲ್ ಆರೋಗ್ಯ ಕಾರ್ಡ್ ವಿತರಣೆ 

ಬೆಂಗಳೂರು : ಸರ್ಕಾರಿ ಶಾಲೆಗಳ ಮಕ್ಕಳಿಗೆ ವಾರ್ಷಿಕ ಅಂಕಪಟ್ಟಿ ಜೊತೆಗೆ ಡಿಜಿಟಲ್ ಆರೋಗ್ಯ ಕಾರ್ಡ ವಿತರಣೆಗೆ ಆರೋಗ್ಯ ಇಲಾಖೆ ಒಪ್ಪಿಗೆ ನೀಡಿದೆ ಎಂದು ಪ್ರೊ.ಎಂ.ಆರ್.ದೊರೆಸ್ವಾಮಿ ಮಾಹಿತಿ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಶಾಲೆಗಳ ಮಕ್ಕಳ ಶಿಕ್ಷಣದ ಜೊತೆಗೆ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕಾಗಿದ್ದು, ಈ ಹಿನ್ನೆಲೆಯಲ್ಲಿ ಡಿಜಿಟಲ್ ಆರೋಗ್ಯ ಕಾರ್ಡ ವಿತರಣೆಗೆ ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದ 48 ಸಾವಿರ ಶಾಲೆಗಳ ಮಕ್ಕಳ ಆರೋಗ್ಯ ತಪಾಸಣೆ ಒಂದು ಇಲಾಖೆಯಿಂದ ಸಾಧ್ಯವಿಲ್ಲ. ಹೀಗಾಗಿ ಸರ್ಕಾರಿ, ಖಾಸಗಿ ವೈದ್ಯಕೀಯ ಮತ್ತು ನರ್ಸಿಂಗ್ ಕಾಲೇಜುಗಳ ಸಹಭಾಗಿತ್ವದಲ್ಲಿ ನಿರ್ವಹಿಸಲು ಕೋರಲಾಗಿದೆ.

ಪರೀಕ್ಷಾ ಫಲಿತಾಂಶ ಅಂಕಪಟ್ಟಿ ಜೊತೆಗೆ ಮಕ್ಕಳಿಗೆ ಆರೋಗ್ಯ ಕಾರ್ಡ್ ವಿತರಿಸಿದರೆ ಮಕ್ಕಳ ಆರೋಗ್ಯದ ಬಗ್ಗೆ ನಿಗಾ ವಹಿಸಲು ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.