LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಒಬ್ಬರಿಗೆ ಒಂದೇ ಟಿಕೆಟ್; ಸಿದ್ದರಾಮಯ್ಯಗೆ ಟಾಂಗ್ ನೀಡಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಒಬ್ಬರಿಗೆ ಒಂದೇ ಟಿಕೆಟ್ ಎಂದು ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ.



ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ, ಯಾರೇ ಆಗಲಿ ಒಬ್ಬರಿಗೆ ಒಂದೇ ಟಿಕೆಟ್. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಇಲ್ಲಿ ವ್ಯಕ್ತಿಗಿಂತ ಪಕ್ಷ ಮುಖ್ಯ. ಪಕ್ಷ ಮೊದಲು ಅಧಿಕಾರಕ್ಕೆ ಬರಬೇಕು. ಆನಂತರ ಎಲ್ಲರಿಗೂ ಅಧಿಕಾರ ಸಿಗುತ್ತೆ ಎಂದರು.



ಪ್ರತಿಯೊಬ್ಬರಿಗೂ ಅವರದೇ ಆದ ಶಕ್ತಿ ಇರುತ್ತದೆ. ಯಾರ ಶಕ್ತಿ ಎಷ್ಟಿದೆ ಎಂದು ಹೇಳಲು ಆಗಲ್ಲ. ಒಬ್ಬರಿಗೆ 100 ಬೂತ್ ನಿಭಾಯಿಸುವ ಶಕ್ತಿ ಇದ್ದರೆ, ಮತ್ತೆ ಕೆಲವರಿಗೆ 50, ಇನ್ನೂ ಕೆಲವರಿಗೆ 10 ಬೂತ್ ನಿಭಾಯಿಸುವ ಶಕ್ತಿ ಇರುತ್ತದೆ’ ಎಂದು ಹೇಳಿದರು.



ಇನ್ನು ಅರ್ಜಿ ಸಲ್ಲಿಸುವಾಗ ಆಕಾಂಕ್ಷಿಗಳಿಂದ ದೇಣಿಗೆ ಸಂಗ್ರಹ ವಿಚಾರವಾಗಿ ಮಾತನಾಡಿದ ಡಿ.ಕೆ.ಶಿವಕುಮಾರ, ಇದು ನಮ್ಮ ಪಕ್ಷದಲ್ಲಿ ಹೊಸತಲ್ಲ. ಈ ಹಿಂದೆಯೂ ಪಕ್ಷಕ್ಕೆ ದೇಣಿಗೆ ನೀಡಿದ್ದಾರೆ. ಆಗ ಹೆಚ್ಚು ಸುದ್ದಿ ಆಗಿರಲಿಲ್ಲ. ಈಗ ಸುದ್ದಿಯಾಗಿದೆ ಅಷ್ಟೇ. ಚುನಾವಣಾ ತಯಾರಿ, ಜಿಲ್ಲೆ ಹಾಗೂ ಬ್ಲಾಕ್ ಮಟ್ಟದಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣ ಸೇರಿದಂತೆ ಹಲವು ಆರ್ಥಿಕ ಶಕ್ತಿ ಅಗತ್ಯವಿದೆ. ಕಚೇರಿ ನಿರ್ಮಾಣಕ್ಕೆ ಕಾರ್ಯಕರ್ತರು ಆರ್ಥಿಕ ನೆರವು ಕೇಳಿದಾಗ ನಾವು ಹಣ ಸಹಾಯ ಮಾಡುತ್ತೇವೆ. ಕಾರ್ಯಕರ್ತರಿಗೆ ತೊಂದರೆ ಆದಾಗ ಅವರಿಗೆ ಸಹಾಯ ಮಾಡಲು ಹಣದ ಅಗತ್ಯವಿದೆ. ಹೀಗಾಗಿ ದೇಣಿಗೆಯನ್ನು ಸಂಗ್ರಹಿಸಲಾಗಿದೆ ಎಂದು ಹೇಳಿದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹವಳದ ದಿಬ್ಬಗಳ ನಡುವೆ ರಾಹುಲ್ ಸಾಹಸರೂಪಾಯಿ 100 ತಲುಪಿದರೂ ಆತಂಕ ಬೇಡ ಎಂದ ಮೋದಿಯ ಆರ್ಥಿಕ ಸಲಹೆಗಾರ್ತಿ : ವ್ಯಾಪಕ ಟೀಕೆಅಮೂಲ್ಯ ಪರಿಸರ ಸಂಪತ್ತಿಗೆ ಬೆದರಿಕೆ ಒಡ್ಡಿದ ಯೋಜನೆ ಗ್ರೇಟ್ ನಿಕೋಬಾರ್ ಯೋಜನೆಭಿನ್ನಾಭಿಪ್ರಾಯ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದ ಸಿಎಂಖಾತೆ ಹಂಚಿಕೆ ಕಿಡಿ: ಮುನಿಯಪ್ಪ ಅಸಮಾಧಾನ, ಖಾತೆ ವಹಿಸಿಕೊಳ್ಳಲು ನಿರಾಕರಣೆಗುಂಡಿನ ದಾಳಿಗೆ ನಲುಗಿದ ಮಣಿಪುರ : ಮೂವರು ನಾಗರಿಕರ ಹತ್ಯೆ, 7 ಮನೆಗಳಿಗೆ ಬೆಂಕಿ ರೆಪೊ ದರದಲ್ಲಿ ಬದಲಾವಣೆ ಇಲ್ಲಖಾತೆ ಹಂಚಿಕೆ ಬಗ್ಗೆ ಅಸಮಾಧಾನ; ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿಖಾತೆಗಳ ಹಂಚಿಕೆ ಕಸರತ್ತು ಪೂರ್ಣ, ಯಾರಿಗೆ ಯಾವ ಖಾತೆ? ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆ