LIVE TV LocalCrimeNationalInternationalPoliticsBusinessFinancialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ರಾಜ್ಯ ವಿಭಜನೆ ಬೇಡ, ಜಿಲ್ಲೆ ವಿಭಜನೆಯಾಗಲಿ: ಸತೀಶ

ಹುಕ್ಕೇರಿ, ನ. 25: ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡುವುದಕ್ಕೆ ನಮ್ಮ ಸಹಮತವಿಲ್ಲ. ಆದರೆ ಆಡಳಿತಾತ್ಮಕ ಅನುಕೂಲಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಹೊಸ ಜಿಲ್ಲೆಗಳನ್ನು ರಚಿಸುವುದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದರು.

ಹುಕ್ಕೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆ ವಿಭಜನೆ ಹಾಗೂ ಹೊಸ ಜಿಲ್ಲೆಗಳ ರಚನೆ ಕುರಿತು ನಮ್ಮ ನಿಲುವು ಸ್ಪಷ್ಟವಾಗಿದ್ದು, ಈ ವಿಚಾರದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕೆಂದು ಶಾಸಕ ಬಾಲಚಂದ್ರ ಜಾರಕಿಹೊಳಿ ನೀಡಿರುವ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಜಿಲ್ಲೆ ವಿಭಜನೆ ವಿಚಾರದಲ್ಲಿ ಎಲ್ಲರೂ ಒಮ್ಮತಕ್ಕೆ ಬರುವ ನಿರೀಕ್ಷೆಯಿದೆ. ಮುಂದಿನ ಬೆಳವಣಿಗೆಗಳನ್ನು ಕಾದು ನೋಡೋಣ ಎಂದರು.

ಸವದಿ-ರಮೇಶ ಜಗಳ ಈಗ ಸಮಬಲದಲ್ಲಿ

ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಹಾಗೂ ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ನಡುವಿನ ವಾಕ್ಸಮರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಒಬ್ಬರು ಟೀಕಿಸಿದರೆ ಮತ್ತೊಬ್ಬರು ಪ್ರತ್ಯುತ್ತರ ನೀಡಿದ್ದಾರೆ. ಇಬ್ಬರೂ ಪರಸ್ಪರ ಆರೋಪ-ಪ್ರತ್ಯಾರೋಪ ಮಾಡಿಕೊಂಡಿದ್ದು, ಸದ್ಯ ಅವರಿಬ್ಬರ ಜಗಳ ಸಮಬಲದಲ್ಲಿದೆ ಎಂದು ವ್ಯಂಗ್ಯವಾಡಿದರು.

ಇದು ಅವರಿಬ್ಬರ ನಡುವಿನ ವೈಯಕ್ತಿಕ ಸಮಸ್ಯೆಯಾಗಿದ್ದು, ಅವರೇ ಪರಸ್ಪರ ಮಾತುಕತೆ ನಡೆಸಿ ಬಗೆಹರಿಸಿಕೊಳ್ಳುತ್ತಾರೆ. ಈ ವಿಚಾರದಲ್ಲಿ ನಾವು ಮಧ್ಯಪ್ರವೇಶಿಸುವ ಅಗತ್ಯವಿಲ್ಲ ಎಂದು ಸತೀಶ ಜಾರಕಿಹೊಳಿ ಹೇಳಿದರು.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST