LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಪಿಣರಾಯಿ ವಿಜಯನ್ ನಿವಾಸದ ಮೇಲೆ ಈಡಿ ದಾಳಿ

ತಿರುವನಂತಪುರಂ, ಮೇ 27 : ಕೊಚ್ಚಿನ್ ಮಿನರಲ್ಸ್ ಮತ್ತು ರೂಟೈಲ್ ಲಿಮಿಟೆಡ್ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಭಾಗಗಳ 10 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ಬುಧವಾರ ದಾಳಿ ನಡೆಸಿದ್ದು ವಿರೋಧ ಪಕ್ಷಗಳ ನಾಯಕರ ಮೇಲೆ ದಾಳಿಗಳು ಮುಂದುವರಿದಿವೆ.

ಈ ಪ್ರಕರಣದಲ್ಲಿ ಪಿಣರಾಯಿ ವಿಜಯನ್ ಅವರ ಪುತ್ರಿ ಟಿ. ವೀಣಾ ಭಾಗಿಯಾಗಿದ್ದಾರೆ ಎಂದು ಆರೋಪ ಮಾಡಲಾಗಿದೆ.

ಕೊಚ್ಚಿನ್ ಮಿನರಲ್ಸ್ ಮತ್ತು ರೂಟೈಲ್ ಲಿಮಿಟೆಡ್ ಹಾಗೂ ಟಿ. ವೀಣಾ ಅವರ ಒಡೆತನದ ಎಕ್ಸಲಾಜಿಕ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ನಡುವೆ ನಡೆದಿರುವ ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ತನಿಖೆಯ ಭಾಗವಾಗಿಯೇ ಬುಧವಾರ ವಿವಿಧ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಸಿಎಂಆರ್‌ಎಲ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನಡೆಸುತ್ತಿರುವ ತನಿಖೆಯನ್ನು ರದ್ದುಗೊಳಿಸಬೇಕು ಎಂದು ಸಲ್ಲಿಸಲಾಗಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ ಮಂಗಳವಾರ ತಿರಸ್ಕರಿಸಿತ್ತು. ಅದರ ಮರು ದಿನವೇ ಇಡಿ ದಾಳಿ ನಡೆದಿರುವುದು ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಕೋಝಿಕ್ಕೋಡ್‌ನಲ್ಲಿ ಮಾಜಿ ಸಚಿವ ಹಾಗೂ ಶಾಸಕ ಪಿ.ಎ. ಮುಹಮ್ಮದ್ ರಿಯಾಸ್ ಅವರ ನಿವಾಸದ ಮೇಲೆಯೂ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಪ್ರಕರಣವು ಕೇರಳ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದ್ದು, ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿವೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣಸಮಾಜದ ಜಟಿಲ ಸಮಸ್ಯೆಗಳ ಪರಿಹಾರಕ್ಕೆ ಸಂಘಟನೆಗಳು ಮುಂದಾಗಲಿ: ಡಾ. ಅಲ್ಲಮಪ್ರಭು ಶ್ರೀ