LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Politics News

ನಿಗಮ ಮಂಡಳಿಗಳ ನೇಮಕ ವಿಳಂಬದ ಬಗ್ಗೆ ಸತೀಶ ಅಸಮಾಧಾನ

ತುಮಕೂರು, ಮೇ 19 : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಶ್ರಮಿಸಿದ ಕಾರ್ಯಕರ್ತರಿಗೆ ಉಳಿದಿರುವ ಎರಡು ವರ್ಷದ ಅವಧಿಯಾದರೂ ಅಧಿಕಾರ ನೀಡಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಆಗ್ರಹಿಸಿದರು.

ರಾಜ್ಯ ಸರ್ಕಾರದ ಮೂರನೇ ವರ್ಷದ ಸಾಧನೆ, ಸೇವೆ ಮತ್ತು ಸಮರ್ಪಣಾ ಸಮಾವೇಶದಲ್ಲಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಲ್ಲಿ ಜನಪರ ಆಡಳಿತ ನೀಡಲಾಗಿದೆ ಎಂದು ಹೇಳಿದರು.

ಇನ್ನೂ ಎರಡು ವರ್ಷಗಳ ಅವಧಿ ಬಾಕಿಯಿದೆ. ಜನರ ಆಶಯದಂತೆ ಸರ್ಕಾರ ಕಾರ್ಯನಿರ್ವಹಿಸಿ ಬಾಕಿ ಯೋಜನೆಗಳನ್ನು ಪೂರ್ಣಗೊಳಿಸಲಿದೆ ಎಂದರು.

ಸರ್ಕಾರದ ಮುಂದೆ ಹಲವು ಸವಾಲುಗಳಿವೆ. ಈವರೆಗೆ ಕಾರ್ಯಕರ್ತರಿಗೆ ಅಧಿಕಾರ ನೀಡಲಾಗಿಲ್ಲ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರು ಈ ಬಗ್ಗೆ ಗಮನಹರಿಸಬೇಕು ಎಂದು ಒತ್ತಾಯಿಸಿದರು.

ಈಗಾಗಲೇ ಬಹಳಷ್ಟು ವಿಳಂಬವಾಗಿದೆ. ಕಾರ್ಯಕರ್ತರ ಶ್ರಮದಿಂದ ನಾವು ಶಾಸಕರು ಹಾಗೂ ಸಚಿವರಾಗಿದ್ದೇವೆ. ಅವರಿಗೆ ಶಕ್ತಿ ತುಂಬುವ ಕೆಲಸವಾಗಬೇಕು. ಮುಂದಿನ ಎರಡು ವರ್ಷಗಳಲ್ಲಿ ಮತ್ತೆ ಚುನಾವಣೆಯನ್ನು ಎದುರಿಸಬೇಕಿದ್ದು, ಅದಕ್ಕೂ ಮುನ್ನ ಕಾರ್ಯಕರ್ತರಿಗೆ ನಿಗಮ ಮಂಡಳಿಗಳು ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಅವಕಾಶ ಕಲ್ಪಿಸಿ ಹುರಿದುಂಬಿಸಬೇಕು ಎಂದು ಹೇಳಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST