ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮೈಸೂರು ಎಕ್ಸಪ್ರೆಸ್ ಬೆಳಗಾವಿ ವರೆಗೆ ವಿಸ್ತರಣೆ

ಬೆಳಗಾವಿ: ಬೆಳಗಾವಿ ಜಿಲ್ಲೆಯ ರೈಲು ಪ್ರಯಾಣಿಕರ ಬಹುದಿನಗಳ ಬೇಡಿಕೆಯಾಗಿದ್ದ ಧಾರವಾಡ-ಮೈಸೂರು ಎಕ್ಸಪ್ರೆಸ್ ರೈಲನ್ನು ಬೆಳಗಾವಿಯವರೆಗೆ ವಿಸ್ತರಣೆ ಮಾಡಿ ರೈಲ್ವೆ ಸಚಿವಾಲಯ ಆದೇಶ ಹೊರಡಿಸಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.

ಗುರುವಾರ ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು, ರೈಲು ಸಂಖ್ಯೆ 17302 ಬೆಳಗಾವಿಯಿಂದ ರಾತ್ರಿ 7.45 ಗಂಟೆಗೆ ಹೊರಟು ಮರುದಿನ ಮುಂಜಾನೆ 7.10 ಕ್ಕೆ ಮೈಸೂರಿಗೆ ತಲುಪಲಿದೆ. ರೈಲು ಸಂಖ್ಯೆ 17301 ಮೈಸೂರಿನಿಂದ ರಾತ್ರಿ 10.30 ಗಂಟೆಗೆ ಹೊರಟು ಮರುದಿನ ಮುಂಜಾನೆ 10.45 ಗಂಟೆಗೆ ಬೆಳಗಾವಿಗೆ ತಲುಪಲಿದೆ. ಈ ತಿಂಗಳ ಕೊನೆಯ ವಾರದಲ್ಲಿ ಬೆಳಗಾವಿ-ಮೈಸೂರು ಎಕ್ಸಪ್ರೆಸ್ ರೈಲು ತನ್ನ ಸಂಚಾರ ಆರಂಭಿಸಲಿದೆ ಎಂದು ತಿಳಿಸಿದ್ದಾರೆ.

ಮನವಿಗೆ ಸ್ಪಂದಿಸಿ ಬೆಳಗಾವಿ-ಮೈಸೂರು ಎಕ್ಸಪ್ರೆಸ್ ರೈಲು ಪ್ರಾರಂಭಿಸಲು ಅನುಮತಿ ನೀಡಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಹಾಗೂ ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಕಡಾಡಿ ಧನ್ಯವಾದ ಹೇಳಿದ್ದಾರೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.