LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ನಕಲಿ ಇಂಜೆಕ್ಷನ್ : 5 ಗರ್ಭಿಣಿಯರ ಸಾವು

ಜೈಪುರ, ಮೇ 26 : ರಾಜಸ್ಥಾನದ ಕೋಟಾದ ಸರಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯಾದ ಕೆಲವೇ ಗಂಟೆಗಳಲ್ಲಿ ಗಂಭೀರ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡು ಕನಿಷ್ಠ ಐವರು ಗರ್ಭಿಣಿ ಮಹಿಳೆಯರು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ.

ಶಸ್ತ್ರಚಿಕಿತ್ಸೆಗೆ ಒಳಗಾದ 8 ರಿಂದ 12 ಗಂಟೆಗಳೊಳಗೆ ಮಹಿಳೆಯರಲ್ಲಿ ದಿಢೀರ್ ರಕ್ತದೊತ್ತಡ ಕುಸಿತ, ಪ್ಲೇಟ್‌ಲೆಟ್ ಸಂಖ್ಯೆ ಇಳಿಕೆ ಹಾಗೂ ಮೂತ್ರಪಿಂಡ ವೈಫಲ್ಯದ ಲಕ್ಷಣಗಳು ಕಾಣಿಸಿಕೊಂಡಿದ್ದವು ಎಂದು ಪ್ರಾಥಮಿಕ ತನಿಖೆಯಲ್ಲಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಸ್ತ್ರಚಿಕಿತ್ಸೆಯ ಬಳಿಕ ತೀವ್ರ ರಕ್ತಸ್ರಾವ ನಿಯಂತ್ರಿಸಲು ಬಳಸಲಾಗುವ ಆಕ್ಸಿಟೋಸಿನ್ ಇಂಜೆಕ್ಷನ್ ನಕಲಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಇದೇ ಪ್ರಕರಣಗಳಿಗೆ ಕಾರಣವಾಗಿರಬಹುದು ಎಂದು ತಿಳಿಸಲಾಗಿದೆ.

ರಾಜಸ್ಥಾನದ ಸರಕಾರಿ ಆಸ್ಪತ್ರೆಗಳಿಗೆ ಸರಬರಾಜಾಗಿದ್ದ ಆಕ್ಸಿಟೋಸಿನ್ ಇಂಜೆಕ್ಷನ್‌ನ ಒಂದು ಬ್ಯಾಚ್ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲಗೊಂಡ ಹಿನ್ನೆಲೆಯಲ್ಲಿ ರಾಜ್ಯ ಔಷಧ ನಿಯಂತ್ರಣ ಇಲಾಖೆ ಅದರ ಮಾರಾಟ ಹಾಗೂ ಬಳಕೆಯನ್ನು ರಾಜ್ಯಾದ್ಯಂತ ನಿಷೇಧಿಸಿದೆ.

ಪ್ರಯೋಗಾಲಯ ಪರೀಕ್ಷೆಯಲ್ಲಿ ಈ ಇಂಜೆಕ್ಷನ್ ನಕಲಿ ಎಂಬುದು ದೃಢಪಟ್ಟಿದ್ದು, ರಕ್ತ ಹೆಪ್ಪುಗಟ್ಟಲು ಅಗತ್ಯವಿರುವ ಪ್ರಮುಖ ರಾಸಾಯನಿಕಾಂಶದ ಕೊರತೆ ಇರುವುದು ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ಅಮೃತಸರದ ಜಾಕ್ಸನ್ ಲ್ಯಾಬೊರೇಟರೀಸ್ ತಯಾರಿಸಿದ್ದ ಇದೇ ಬ್ಯಾಚ್‌ನ ಆಕ್ಸಿಟೋಸಿನ್ ಇಂಜೆಕ್ಷನ್ ಅನ್ನು ಕೋಟಾದ ನೂತನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲೂ ಬಳಸಲಾಗಿತ್ತು. ಇತ್ತೀಚಿನ ದಿನಗಳಲ್ಲಿ ಸಿ-ಸೆಕ್ಷನ್ ಹಾಗೂ ಗರ್ಭಾಶಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಹಲವು ಗರ್ಭಿಣಿ ಮತ್ತು ಬಾಣಂತಿಯರು ಮೃತಪಟ್ಟಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರಕರಣದೊಂದಿಗೆ ಸಂಬಂಧ ಹೊಂದಿರುವ ಐವಿ ದ್ರಾವಣದ ಕೆಲವು ಬ್ಯಾಚ್‌ಗಳನ್ನೂ ತನಿಖಾಧಿಕಾರಿಗಳು ಪರೀಕ್ಷೆಗೆ ಒಳಪಡಿಸಿದ್ದಾರೆ.

ಪ್ರಕರಣದ ಕುರಿತು ರಾಜಸ್ಥಾನ ಸರಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದು, ಸಾವಿನ ನಿಖರ ಕಾರಣ ಪತ್ತೆಹಚ್ಚಲು ಹಾಗೂ ಚಿಕಿತ್ಸೆ ವ್ಯವಸ್ಥೆಗೆ ನೆರವು ನೀಡಲು ಜೈಪುರದ ಎಸ್‌ಎಂಎಸ್ ವೈದ್ಯಕೀಯ ಕಾಲೇಜಿನ ತಜ್ಞರ ತಂಡವನ್ನು ಕೋಟಾಗೆ ರವಾನಿಸಲಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ