LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಖ್ಯಾತ ನಿರ್ಮಾಪಕ, ನಟ ದ್ವಾರಕೀಶ ಇನ್ನಿಲ್ಲ

ಬೆಂಗಳೂರು – ಕನ್ನಡದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ ನಿಧನರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ವಯೋಸಹಜದಿಂದ ಬಳಲುತ್ತಿದ್ದ ಅವರು ಹೃದಯಘಾತದಿಂದ ಅವರು ವಿಧಿವಶರಾದರು ಎಂದು ವರದಿಯಾಗಿದೆ.



“ರಾತ್ರಿ ಹೊಟ್ಟೆ ನೋವು ಆಗ್ತಾ ಇದೆ ಹೇಳ್ತಿದ್ರು.  ಅವರಿಗೆ ಲೂಸ್‌ ಮೋಷನ್‌ ಆಗಿತ್ತು. ರಾತ್ರಿ ಸರಿಯಾಗಿ ನಿದ್ದೆ ಮಾಡಿರಲಿಲ್ಲ. ಬೆಳಗ್ಗೆ ಕಾಫಿ ಕುಡಿದಿದ್ದರು. ಕಾಫಿ ಕುಡಿದು ಸ್ವಲ್ಪ ಎರಡು ಗಂಟೆ ನಿದ್ದೆ ಮಾಡ್ತಿನಿ ಅಂತ ನಿದ್ದೆ ಮಾಡಿದ್ದರು. ಬಳಿಕ ಎದ್ದೇಳಲಿಲ್ಲ ಬಳಿಕ ಹೃದಯಾಘಾತವಾಗಿತ್ತು‌ ” ಎಂದು ದ್ವಾರಕೀಶ ಪುತ್ರ ಯೋಗೇಶ ಪತ್ರಕರ್ತರಿಗೆ ಮಾಹಿತಿ ನೀಡಿದ್ದಾರೆ.

ಹಿರಿಯ ನಟ ದ್ವಾರಕೀಶ ಅವರು ಕನ್ನಡ ಚಿತ್ರರಂಗದಲ್ಲಿ ಬಹುದೊಡ್ಡ ಹೆಸರು. ಹಲವಾರು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಗಣನೀಯ ಸೇವೆ ಸಲ್ಲಿಸಿದ ಅವರನ್ನು ಪರಿಗಣಿಸಿ ಬೆಂಗಳೂರು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್‌ ನೀಡಿದೆ. ನಟರಾಗಿ, ನಿರ್ದೇಶಕ, ನಿರ್ಮಾಪಕರಾಗಿ ಹಲವಾರು ಚಿತ್ರಗಳ ಕೊಡುಗೆ ನೀಡಿರುವ ಅವರು ಕನ್ನಡ ಚಿತ್ರರಂಗಕ್ಕೆ ದೊಡ್ಡ ಸೇವೆ ಸಲ್ಲಿಸಿದ್ದಾರೆ.  ಡಾ. ರಾಜಕುಮಾರ, ಡಾ. ವಿಷ್ಣುವರ್ಧನ, ಅಂಬರೀಶ್‌ರಂತಹ ಮೇರು ನಟರೊಂದಿಗೆ ಹಿರಿಯ ತೆರೆಯಲ್ಲಿ ಮಿಂಚಿರುವ ನಟ ದ್ವಾರಕೀಶ ಅವರು ನೂರಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. 40ಕ್ಕೂ ಹೆಚ್ಚು ಸಿನಿಮಾಗಳ ನಿರ್ಮಾಣ ಮಾಡಿ ಅವರು ಕನ್ನಡ ಜನತೆಗೆ ಜನಪ್ರಿಯ ರಾಜಕುಳ್ಳ ಎಂದೇ ಜನಪ್ರಿಯರು.


ಕನ್ನಡ ಸಿನಿಮಾರಂಗದಲ್ಲಿ ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದ ಅವರು  1942 ಅಗಸ್ಟ 19ರಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನಿಸಿದ್ದರು. ತಂದೆ ಶಾಮರಾವ್ ಮತ್ತು ತಾಯಿ ಜಯಮ್ಮ. ಶಾರದ ವಿಲಾಸ ಮತ್ತು ಬನುಮ್ಯ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ ಇವರು, ಫ್ರೌಡಶಿಕ್ಷಣದ ನಂತರ ಸಿಪಿಸಿ ಪಾಕಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಮುಗಿಸಿದರು. ನಂತರ ತಮ್ಮ ಸಹೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಆರಂಭಿಸಿದರು. 1963ರಲ್ಲಿ ವ್ಯಾಪಾರ ಬಿಟ್ಟು ನಟನೆಯತ್ತ ಮುಖ ಮಾಡಿದರು.


1964ರಲ್ಲಿ ʼವೀರ ಸಂಕಲ್ಪʼ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಬಂದ ದ್ವಾರಕೀಶ ಅವರು, ನಟರಾಗಿ, ಹಾಸ್ಯ ಕಲಾವಿದರಾಗಿ, ಪೋಷಕ ನಟನಾಗಿ ನೂರಾರು ಸಿನಿಮಾಗಳಲ್ಲಿ ಮಿಂಚಿದ್ದರು. ದ್ವಾರಕೀಶ ಅವರು ಹೆಚ್ಚು ಜನಪ್ರಿಯರಾದದ್ದು ವಿಷ್ಣುವರ್ಧನ್ ಅವರೊಂದಿಗೆ ಒಂದು ಕಾಲದಲ್ಲಿ ವಿಷ್ಣುವರ್ಧನ್ ಹಾಗೂ ದ್ವಾರಕೀಶ ಜೋಡಿ ಕಳ್ಳ-ಕುಳ್ಳ ಎಂದೇ ಪ್ರಸಿದ್ಧವಾಗಿತ್ತು.  ವಿಷ್ಣುವರ್ಧನ್‌ ಅವರ ಅನೇಕ ಸಿನಿಮಾದಲ್ಲಿ ಅವರು ತೆರೆ ಹಂಚಿಕೊಂಡಿದ್ದರು. ಇದರಲ್ಲಿ ʼಆಪ್ತಮಿತ್ರʼ ಸಿನಿಮಾದಲ್ಲಿನ ಇವರಿಬ್ಬರ ಅಭಿನಯ ಗಮನ ಸೆಳೆದಿತ್ತು.



1966ರಲ್ಲಿ ದ್ವಾರಕೀಶ ಅವರು ʼಮಮತೆಯ ಬಂಧನʼ ಸಿನಿಮಾವನ್ನು ಜಂಟಿಯಾಗಿ ನಿರ್ಮಾಣ ಮಾಡಿದ್ದರು. ಡಾ.ರಾಜಕುಮಾರ ಅಭಿನಯದ ಮೇಯರ್ ಮುತ್ತಣ್ಣ ಎಂಬ ಸಿನಿಮಾ ನಿರ್ಮಿಸುವ ಮೂಲಕ ಸ್ವತಂತ್ರ ನಿರ್ಮಾಪಕರಾಗಿ ಕಾಲಿಟ್ಟರು. ‘ದ್ವಾರಕೀಶ ಚಿತ್ರ’  ಬ್ಯಾನರ್‌ ಅಡಿಯಲ್ಲಿ ‘ಭಾಗ್ಯವಂತರು’, ʼಮೇಯರ್ ಮುತ್ತಣ್ಣʼ, ʼಕುಳ್ಳ ಎಜೆಂಟ್ ೦೦೦ʼ, ʼಕೌಬಾಯ್ ಕುಳ್ಳʼ, ʼಸಿಂಗಪೂರಿನಲ್ಲಿ ರಾಜಾ ಕುಳ್ಳʼ, ʼಪ್ರೀತಿ ಮಾಡು ತಮಾಷೆ ನೋಡುʼ ಹೀಗೆ ಸುಮಾರು 40 ಕ್ಕೂ ಹೆಚ್ಚಿನ ಸಿನಿಮಾಗಳನ್ನು ದ್ವಾರಕೀಶ ನಿರ್ಮಿಸಿದ್ದರು.



1985ರಲ್ಲಿ ʼಬಾರಿ ನೀ ಬರೆದ ಕಾದಂಬರಿʼ ಎಂಬ ಚಿತ್ರವನ್ನು ನಿರ್ದೇಶಿಸುವ ಮೂಲಕ ನಿರ್ದೇಶನ ಕ್ಷೇತ್ರಕ್ಕೆ ಕಾಲಿಟ್ಟರು. ಆ ಬಳಿಕ ನಂತರʼ ಡಾನ್ಸ ರಾಜ ಡಾನ್ಸʼ, ʼಶ್ರುತಿ ಹಾಕಿದ ಹೆಜ್ಜೆʼ, ʼರಾಯರು ಬಂದರು ಮಾವನ ಮನೆಗೆʼ, ‘ಮಜ್ನು’, ‘ಗಿಡ್ಡು ದಾದ’, ʼಕಿಡ್ನಾಪ್‌ʼ, ʼಕಿಲಾಡಿಗಳುʼ ಸೇರಿದಂತೆ ಅನೇಕ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದರು.



‘ಜನ್ಮರಹಸ್ಯ’, ‘ಮಂಕುತಿಮ್ಮ’, ‘ಪೆದ್ದ ಗೆದ್ದ’, ‘ಕಿಟ್ಟು ಪುಟ್ಟು’, ‘ಸಿಂಗಾಪುರದಲ್ಲಿ ರಾಜಾ-ಕುಳ್ಳ’, ‘ಆಪ್ತಮಿತ್ರ’, ‘ಪ್ರಚಂಡ ಕುಳ್ಳ’, ‘ಗುರು-ಶಿಷ್ಯರು’, ‘ಆಟಗಾರ’, ‘ವಿಷ್ಣುವರ್ಧನ್’ ಹೀಗೆ ನೂರಾರು ಚಿತ್ರಗಳಲ್ಲಿ ನಟಿಸಿದ್ದಾರೆ. ಕೊನೆಯದಾಗಿ ಅವರು ʼಚೌಕʼ ಸಿನಿಮಾದಲ್ಲಿ ನಟಿಸಿದ್ದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣಸಮಾಜದ ಜಟಿಲ ಸಮಸ್ಯೆಗಳ ಪರಿಹಾರಕ್ಕೆ ಸಂಘಟನೆಗಳು ಮುಂದಾಗಲಿ: ಡಾ. ಅಲ್ಲಮಪ್ರಭು ಶ್ರೀ