ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹೆಣ್ಣು ಮಗು ಹುಟ್ಟಿದ್ದಕ್ಕೆ ತಂದೆ ಆತ್ಮಹತ್ಯೆ

ಕೋಲಾರ : ಹೆಣ್ಣು ಮಗು ಹುಟ್ಟಿದ್ದಕ್ಕೆ ತಂದೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಶೆಟ್ಟಿಹಳ್ಳಿಯಲ್ಲಿ ನಡೆದಿದೆ.

ಶೆಟ್ಟಿಹಳ್ಳಿ ಗ್ರಾಮದ ಲೋಕೇಶ (34) ನೇಣಿಗೆ ಶರಣಾದ ವ್ಯಕ್ತಿ, ಮತ್ತೆ ಹೆಣ್ಣು ಮಗು ಹುಟ್ಟಿದ್ದಕ್ಕೆ ಮನನೊಂದು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಲೋಕೇಶಗೆ ಈ ಮೊದಲು ಮೂವರು ಹೆಣ್ಣು ಮಕ್ಕಳು ಜನಿಸಿದ್ದರು. ಮತ್ತೆ 4 ನೇ ಮಗುವೂ ಕೂಡ ಹೆಣ್ಣು ಆಗಿರುವುದಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.